ಡಾಲರ್ ಎದುರು ಕುಸಿಯುತ್ತಿರುವ ರೂಪಾಯಿ ಮೌಲ್ಯ: ಇದೇ ಮೊದಲ ಬಾರಿಗೆ 80 ರೂ. ಗಡಿ ದಾಟಿದ ದೇಶಿಯ ಕರೆನ್ಸಿ

blank

ನವದೆಹಲಿ: ಡಾಲರ್ ಎದುರು ದುರ್ಬಲಗೊಳ್ಳುತ್ತಿರುವ ರೂಪಾಯಿ ಮೌಲ್ಯ ಇದೇ ಮೊದಲ ಬಾರಿಗೆ 80 ರೂ. ಮುಟ್ಟಿದೆ. ಸೋಮವಾರ ವಿದೇಶಿ ವಿನಿಮಯ ಮಾರುಕಟ್ಟೆಯು 79.76 ರೂಪಾಯಿ ಮೂಲಕ ವಹಿವಾಟು ಆರಂಭಿಸಿ, ಮಧ್ಯಂತರದಲ್ಲಿ 80 ರೂ. ಗಡಿ ದಾಟಿತು. ಕಡೆಗೆ ಕೊಂಚ ಚೇತರಿಸಿಕೊಂಡು 16 ಪೈಸೆ ಇಳಿಕೆ ಆಗಿ ದಿನ ಅಂತ್ಯಕ್ಕೆ 79.98 ರೂ.ಗೆ ವಿನಿಮಯ ದರ ಸ್ಥಿರಗೊಂಡಿತು. ಇದೀಗ ಮಂಗಳವಾರ ಆರಂಭಿಕ ವಹಿವಾಟಿನಲ್ಲಿ ಶೇ.0.03 ಕುಸಿತದೊಂದಿಗೆ ಮತ್ತೆ 80.02 ರೂ. ಗಡಿ ದಾಟಿದೆ.

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ದರದ ಏರಿಳಿತದಿಂದ ವಿದೇಶಿ ಹೂಡಿಕೆದಾರರು ಷೇರುಪೇಟೆಯಲ್ಲಿ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ರೂಪಾಯಿ ಅಧಃಪತನ ಮುಂದುವರಿದು ಈ ವರ್ಷದಲ್ಲಿ ಈವರೆಗೆ ಶೇ. 8ರಷ್ಟು ಕುಸಿತ ಕಂಡಿದೆ. ದೇಶದಲ್ಲಿ ವಿದೇಶಿ ಬಂಡವಾಳ ಹಿಂತೆಗೆತವು ಹೆಚ್ಚಾಗುತ್ತಿದೆ. ವಿದೇಶಿ ಹೂಡಿಕೆದಾರರು ರಾಷ್ಟ್ರದ ಷೇರುಗಳನ್ನು ಮಾರಾಟ ಮಾಡುವುದನ್ನು ಮುಂದುವರೆಸಿರುವ ಕಾರಣದ ಭಾರತದ ರೂಪಾಯಿ ಮತ್ತೊಂದು ದಾಖಲೆಯ ಕುಸಿತವನ್ನು ಮುಟ್ಟಿದೆ.

ಕಳೆದ ಎಂಟು ವರ್ಷಗಳಲ್ಲಿ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ 16.08 (ಶೇ. 25.39) ಕುಸಿದಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಒಪ್ಪಿಕೊಂಡಿದೆ.

ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತವು ದೇಶದಲ್ಲಿ ಹಣದುಬ್ಬರ ಮತ್ತು ಹೂಡಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ವಿಶೇಷವಾಗಿ ತೈಲ ಮತ್ತು ಅನಿಲ ಬೆಲೆ ಹೆಚ್ಚಲಿದೆ. ದೇಶದ ಅವಶ್ಯಕ ಇರುವ ತೈಲ ಪ್ರಮಾಣದಲ್ಲಿ ಶೇ. 80 ಹೊರಗಿನಿಂದ ಬರುತ್ತದೆ. ಇದರ ಖರೀದಿಗೆ ಹೆಚ್ಚು ಹಣ ವ್ಯಯ ಆಗಲಿದೆ. ವೇಗವಾಗಿ ಬಿಕರಿಯಾಗುವ ಸಾಮಗ್ರಿಗಳ ವಲಯದಲ್ಲಿ ಮಾರಾಟ ಇಳಿಕೆ ಆಗುವ ಸಾಧ್ಯತೆ ಇದೆ. ಕಚ್ಚಾ ವಸ್ತುಗಳ ಬೆಲೆ ಹೆಚ್ಚಳದ ಕಾರಣ ಶೇ. 15ರಷ್ಟು ಏರಿಕೆ ಸಂಭವ ಇದೆ. ಭಾರತ 1.35 ಕೋಟಿ ಟನ್ ಲೀಟರ್ ಅಡುಗೆ ಎಣ್ಣೆ ಆಮದು ಮಾಡಿಕೊಳ್ಳುತ್ತದೆ. ಇದರಲ್ಲಿ ಶೇ. 63ರಷ್ಟು ಬೇಡಿಕೆ ತಾಳೆ ಎಣ್ಣೆಗೆ ಇದೆ. ಏರ್​ಲೈನ್ಸ್ ನಿರ್ವಹಣೆ ದುಬಾರಿಯಾಗಲಿದೆ. ದೇಶ- ವಿದೇಶದಲ್ಲಿ ಪಡೆಯುವ ವೈಮಾನಿಕ ಸೇವೆಗಳಿಗೆ ಡಾಲರ್​ನಲ್ಲಿ ಪಾವತಿಸಬೇಕಿರುವ ಕಾರಣ ಖರ್ಚಿನ ಬಾಬ್ತು ಅಧಿಕವಾಗಲಿದೆ. ಆಮದು ಮಾಡಿಕೊಳ್ಳು ಎಲೆಕ್ಟ್ರಾನಿಕ್ಸ್ ವಸ್ತುಗಳು, ಸ್ಮಾರ್ಟ್ ಫೋನ್​ಗಳು ಬೆಲೆ ಏರಿದೆ. ತೈಲ ದರ ಏರಿಕೆಯ ಕಾರಣ ಸಿಮೆಂಟ್ ದರ, ಸರಕು ಸಾಗಣೆ ವೆಚ್ಚದಲ್ಲಿ ಹೆಚ್ಚಳ ಆಗುವ ಸಂಭವ ಇದೆ.

ನಾಪತ್ತೆಯಾದ ಮುದ್ದಿನ ಗಿಣಿಗಾಗಿ ಕಣ್ಣೀರಿಡುತ್ತಿರುವ ಕುಟುಂಬ: ಹುಡುಕಿ ಕೊಟ್ಟವರಿಗೆ 50 ಸಾವಿರ ರೂ. ಬಹುಮಾನ

ಅಪಘಾತ ಆಗಿದೆ ಅಂತ ಕರೆ ಮಾಡಿದ್ರೆ ಕಾಪಾಡುವ ಬದಲು ಪತಿಗೆ ಸಾವಿನ ದಾರಿ ತೋರಿದ ಪತ್ನಿ: ಪ್ರೀತಿ ಕೊಂದ ಕಿರಾತಕಿ?

ಒಳಉಡುಪು ಬಿಚ್ಚಿಟ್ಟು ಪರೀಕ್ಷೆ ಬರೆಯುವಂತೆ ಪಟ್ಟು: ಪಾಲಕರ ಮುಂದೆ ಕಣ್ಣೀರಿಟ್ಟ ವಿದ್ಯಾರ್ಥಿನಿಯರು

Share This Article

ಚಳಿಗಾಲದಲ್ಲಿ ಈ ಒಂದು ಹಣ್ಣನ್ನು ತಿಂದರೆ ಸಾಕು.. ರೋಗಗಳೇ ಬರುವುದಿಲ್ಲ..fruits

fruits : ಚಳಿಗಾಲ ಬಂದಿದೆ ಎಂದರೆ ಕೆಮ್ಮು, ನೆಗಡಿ, ಜ್ವರ, ಗಂಟಲು ನೋವು, ಕೀಲು ನೋವು…

ಮಕರ ರಾಶಿಗೆ ಬುಧ ಪ್ರವೇಶ: ಈ 5 ರಾಶಿಯವರಿಗೆ ರಾಜಯೋಗ, ಖುಲಾಯಿಸಲಿದೆ ಅದೃಷ್ಟ! Zodiac Sign

Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…

ಪೇನ್​ ಕಿಲ್ಲರ್ ಮಾತ್ರೆ​ vs ಜೆಲ್​… ಎರಡರಲ್ಲಿ ಯಾವುದು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ… Painkiller Tablet vs Gel

Painkiller Tablet vs Gel : ದೇಹವು ಗಾಯಗೊಂಡಾಗ ಅಥವಾ ಉಳುಕಿದಾಗ ನೋವು ಅನುಭವಿಸುವುದು ಸಹಜ.…