More

  ಡಿವೋರ್ಸ್​ ಬೆನ್ನಲ್ಲೇ ಮಾಡಿದ ಇನ್​ಸ್ಟಾಗ್ರಾಂ ಪೋಸ್ಟ್​ನಿಂದ ಭಯದಲ್ಲಿ ದಿನ ದೂಡುತ್ತಿರುವ ಸಮಂತಾರ ಡಿಸೈನರ್..!​

  ಹೈದರಾಬಾದ್​: ತಾರಾದಂಪತಿ ಸಮಂತಾ-ನಾಗಚೈತನ್ಯ 4 ವರ್ಷಗಳ ವೈವಾಹಿಕ ಜೀವನಕ್ಕೆ ವಿದಾಯ ಹೇಳಿದ್ದಾರೆ. ಇಬ್ಬರ ನಡುವಿನ ಮನಸ್ತಾಪಗಳಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇಬ್ಬರ ವೈವಾಹಿಕ ಜೀವನದಲ್ಲಿ ಬಿರುಕು ಮೂಡಲು ಕಾರಣವೇನು ಎಂಬ ಪ್ರಶ್ನೆಗೆ ಸಾಕಷ್ಟು ಊಹಾಪೋಹಳು ಮತ್ತು ವದಂತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದರ ನಡುವೆ ಡಿವೋರ್ಸ್​ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್​ ಮಾಡಿದ್ದ ಸಮಂತಾರ ಡಿಸೈನರ್​ ಪ್ರೀತಂ ಝುಕಲ್ಕರ್​ ಇದೀಗ ಭಯದಲ್ಲಿ ಬದುಕುತ್ತಿದ್ದಾರೆ.

  ಝುಕಲ್ಕರ್, ಡಿಸೈನರ್​ ಮಾತ್ರವಲ್ಲ, ಸಮಂತಾರ ಆಪ್ತರಲ್ಲಿ ಒಬ್ಬರು ಕೂಡ. ಅವರು ಡಿವೋರ್ಸ್​ ಬಗ್ಗೆ ಆಡಿರುವ ಮಾತುಗಳು ಅನುಮಾನ ಹುಟ್ಟುಹಾಕಿದೆ. ಪುರುಷರ ಸ್ವಭಾವವನ್ನು ತಮ್ಮ ಮನೆಗಳಲ್ಲಿ ಮರೆಮಾಚುವ ಯಾವುದೇ ಕುಟುಂಬವು ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಾರಣವಾಗಿದೆ. ಇಂದಿನ ದಿನಗಳಲ್ಲಿ ಟೀಕೆ ಮತ್ತು ಟ್ರೋಲ್​ ಹಿಂಸೆಯ ಪ್ರತಿರೂಪ ಆಗಿವೆ ಎಂದು ಝುಕಲ್ಕರ್ ಸಮಂತಾ ಪರ ಬ್ಯಾಟ್​ ಬೀಸಿದ್ದಾರೆ. ಅಲ್ಲದೆ, ಈ ಪೋಸ್ಟ್​ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದ್ದಂತೆ ಅವುಗಳನ್ನು ಡಿಲೀಟ್​ ಮಾಡಿದ್ದರು.

  ಇದೀಗ ಝುಕಲ್ಕರ್ ವಿರುದ್ಧ ನಾಗಚೈತನ್ಯ ಅಭಿಮಾನಿಗಳು ಆಕ್ರೋಶಗೊಂಡಿದ್ದು, ಅವರಿಗೆ ಬೆದರಿಕೆ ಕರೆಗಳು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ಕೆಟ್ಟದಾಗಿ ಟ್ರೋಲ್​ ಮಾಡುತ್ತಿದ್ದಾರೆ. ಇದರಿಂದ ಝುಕಲ್ಕರ್ ಅವರು ಭಯದಲ್ಲಿ ದಿನ ದೂಡುವಂತಾಗಿದೆ.

  ಅ.2ರಂದು ಸಮಂತಾ ಮತ್ತು ನಾಗಚೈತನ್ಯ ಇಬ್ಬರೂ ತಂತಮ್ಮ ಇನ್​ಸ್ಟಾಗ್ರಾಂ ಖಾತೆಗಳಲ್ಲಿ ಒಂದೇ ರೀತಿಯ ಸಂದೇಶಗಳನ್ನು ಪೋಸ್ಟ್​ ಮಾಡುವ ಮೂಲಕ ಡಿವೋರ್ಸ್​ ಅನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. “ಸಾಕಷ್ಟು ಸಮಾಲೋಚನೆಯ ಬಳಿಕವು ನಾವಿಬ್ಬರೂ ಗಂಡ-ಹೆಂಡತಿಯ ಸಂಬಂಧ ಬಿಟ್ಟು ಬೇರೆ ಬೇರೆಯಾಗುವ ನಿರ್ಧಾರ ತೆಗೆದುಕೊಂಡಿದ್ದೇವೆ. ಒಂದು ದಶಕದ ಮಟ್ಟಿಗಿನ ಆಪ್ತಸ್ನೇಹವನ್ನು ನಾವು ಹೊಂದಿದ್ದೆವು. ಬಹುಶಃ ಅದೇ ನಮ್ಮಿಬ್ಬರ ಸಂಬಂಧದ ಸತ್ವವಾಗಿತ್ತು. ಇದರಿಂದಲೇ ಮುಂದೆಯೂ ನಮ್ಮಿಬ್ಬರ ನಡುವೆ ವಿಶೇಷ ನಂಟು ಮುಂದುವರಿಯುತ್ತದೆ ಎಂದು ನಂಬಿದ್ದೇವೆ” ಎಂದು ಸಮಂತಾ ಮತ್ತು ನಾಗಚೈತನ್ಯ ಬರೆದಿದ್ದಾರೆ. ಜೊತೆಗೆ, ತಮ್ಮ ಈ ಕಷ್ಟಕಾಲದಲ್ಲಿ ತಮ್ಮ ಅಭಿಮಾನಿಗಳು, ಹಿತೈಷಿಗಳು ಮತ್ತು ಮಾಧ್ಯಮದವರು ತಮಗೆ ಬೆಂಬಲ ನೀಡಬೇಕು. ತಾವು ಮೂವ್​ ಆನ್​ ಆಗಲು ಅಗತ್ಯವಾದ ಪ್ರೈವೆಸಿ ಕೊಡಬೇಕು ಎಂದೂ ಮನವಿ ಮಾಡಿದ್ದಾರೆ.

  ಇನ್ನು ಸಿನಿಮಾ ವಿಚಾರಕ್ಕೆ ಬಂದರೆ, ವಿಘ್ನೇಶ್ ಶಿವನ್ ನಿರ್ದೇಶನದ ಮತ್ತು ವಿಘ್ನೇಶ್ ಶಿವನ್ ರೌಡಿ ಪಿಕ್ಚರ್ಸ್ ಸಹಯೋಗದೊಂದಿಗೆ ಸೆವೆನ್ ಸ್ಕ್ರೀನ್ ಸ್ಟುಡಿಯೋದಿಂದ ಬಂಡವಾಳ ಹೂಡುತ್ತಿರುವ ತಮಿಳು ಸಿನಿಮಾ ಕಾತು ವಾಕುಲಾ ರಂಡು ಕಾದಲ್​ ನಲ್ಲಿ ನಯನತಾರಾ ಮತ್ತು ವಿಜಯ್ ಸೇತುಪತಿ ಜೊತೆ ಸಮಂತಾ ನಟಿಸುತ್ತಿದ್ದಾರೆ. ಇದರೊಂದಿಗೆ ಗುಣಶೇಖರ್ ನಿರ್ದೇಶನದ ಶಾಕುಂತಲಂ ಸಿನಿಮಾದಲ್ಲಿ ಶಾಕುಂತಲೆಯಾಗಿ ಸಮಂತಾ ಬಣ್ಣ ಹಚ್ಚಿದ್ದು, ಶಾಕುಂತಲಂ ಚಿತ್ರದ ಚಿತ್ರೀಕರಣವನ್ನು ಸಮಂತಾ ಸಂಪೂರ್ಣ ಮುಗಿಸಿದ್ದಾರೆ. (ಏಜೆನ್ಸೀಸ್​​)

  ಸಮಂತಾ ಡಿವೋರ್ಸ್​ ಹಿಂದಿರುವ ವ್ಯಕ್ತಿ ಈತನೇನಾ? ಅನುಮಾನ ಹುಟ್ಟುಹಾಕಿದೆ ಈ ವೈರಲ್​ ಫೋಟೋ..!

  ಮದುವೆ ಆಗ್ತಾನೆಂದು ನಂಬಿ ಲೈಂಗಿಕ ಸಂಪರ್ಕಕ್ಕೆ ಒಪ್ಪಿಗೆ ನೀಡಿದ್ರೆ ಅದು ಅತ್ಯಾಚಾರವಲ್ಲ: ಚಾ.ನಗರ ನ್ಯಾಯಾಲಯ

  ಉತ್ತರ ಪ್ರದೇಶ ಚುನಾವಣೆ ಮೇಲೆ ಲಖಿಂಪುರ್​ ಖೇರಿ ಹಿಂಸಾಚಾರ ಪ್ರಕರಣ ಪ್ರಭಾವ ಹೇಗಿರಲಿದೆ? ಬಿಜೆಪಿ ಮಹತ್ವದ ಸಭೆ

  ಸ್ನೇಹಾನಾ ಸೈಮಾನಾ?; ವಿಶ್ವಸಂಸ್ಥೆಯಲ್ಲಿ ಸಿಡಿದ ಲೇಡಿ ಮಿಸೈಲ್ಸ್

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts