

ಬೆಂಗಳೂರು: ಪ್ರಸ್ತುತ ಸ್ಯಾಂಡಲ್ವುಡ್ನಲ್ಲಿ ಇರುವ ಸ್ಟಾರ್ ನಟಿಯರಲ್ಲಿ ಆಶಿಕಾ ರಂಗನಾಥ್ ಕೂಡ ಒಬ್ಬರು. ಕೌಟುಂಬಿಕ ಪಾತ್ರಗಳಿಗೂ ಸೈ ಹಾಗೂ ಮೈಮಾಟ ಪ್ರದರ್ಶಿಸುವ ಬೋಲ್ಡ್ ಪಾತ್ರಗಳಿಗೂ ಸೈ ಎನ್ನುವ ಆಶಿಕಾ, ಚಂದನವನದ ಬಹು ಬೇಡಿಕೆ ನಟಿಯಾಗಿದ್ದಾರೆ.
ಸಾಲು ಸಾಲು ಸಿನಿಮಾಗಳಲ್ಲಿ ಆಶಿಕಾ ಬಿಜಿಯಾಗಿದ್ದಾರೆ. ಇತ್ತೀಚೆಗಷ್ಟೇ ಅವರ ನಟನೆಯ ಅವತಾರ ಪುರುಷ ಸಿನಿಮಾ ಬಿಡುಗಡೆಯಾಗಿ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಇದರ ಮಧ್ಯೆ ಶೂಟಿಂಗ್ನಿಂದ ಬಿಡುವು ಪಡೆದುಕೊಂಡಿದ್ದ ಆಶಿಕಾ, ಥಾಯ್ಲೆಂಡ್ ಪ್ರವಾಸಕ್ಕೂ ಹೋಗಿ ಬಂದಿದ್ದಾರೆ.
ತಮ್ಮ ಸಹಜ ಸೌಂದರ್ಯದ ಮೂಲಕ ಸ್ಯಾಂಡಲ್ವುಡ್ನ ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿಯಾಗಿರುವ ಆಶಿಕಾ, ಕೆಲ ದಿನಗಳ ಹಿಂದಷ್ಟೇ ಥಾಯ್ಲೆಂಡ್ ಸಮುದ್ರ ಕಿನಾರೆಯಲ್ಲಿ ಬೋಲ್ಡ್ ಲುಕ್ನಲ್ಲಿ ಕ್ಯಾಮೆರಾಗೆ ಪೋಸ್ ನೀಡಿದ್ದ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹರಿಬಿಟ್ಟು ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈ ಹಿಂದೆ ವೈರಲ್ ಆದ ಫೋಟೋಗಳಲ್ಲಿ ಆಶಿಕಾ ಅವರು ಥಾಯ್ಲೆಂಡ್ನ ಟಪ್ ಐಲ್ಯಾಂಡ್ ನ್ಯಾಚುರಲ್ ಬೀಚ್ನಲ್ಲಿ ಕೆಂಪು ಬಣ್ಣದ ಬಿಕಿನಿ ಕಟ್ ಮತ್ತು ಜೀನ್ಸ್ ಶಾರ್ಟ್ಸ್ ಧರಿಸಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಬೋಟ್ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಈ ಫೋಟೋಗಳು 2 ಲಕ್ಷಕ್ಕೂ ಅಧಿಕ ಲೈಕ್ಸ್ ಪಡೆಯುವ ಮೂಲಕ ಸಿಕ್ಕಾಪಟ್ಟೆ ವೈರಲ್ ಆಗಿತ್ತು.
ಇದೀಗ ಪಟಾಕಿ ಪೋರಿಯೋ ಥಾಯ್ಲೆಂಡ್ ಪ್ರವಾಸದ ವಿಡಿಯೋ ಡೈರಿ ಹಾಗೂ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದ ಒಂದು ದೃಶ್ಯದಲ್ಲಿ ಆಶಿಕಾ, ಬಿಕಿನಿ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಪಡ್ಡೆ ಹುಡುಗರ ಮೈ ಬಿಸಿ ಏರಿಸಿದ್ದಾರೆ. ವಿಡಿಯೋದಲ್ಲಿ ಹಲವು ಅವತಾರಗಳಲ್ಲಿ ಆಶಿಕಾ, ಕಾಣಿಸಿಕೊಂಡಿದ್ದಾರೆ. ಸ್ನೇಹಿತರ ಜತೆ ಸಖತ್ ಎಂಜಾಯ್ ಮಾಡುತ್ತಿರುವ ದೃಶ್ಯಗಳು ಇವೆ.
ವಿಡಿಯೋ ಮಾತ್ರವಲ್ಲದೆ, ಫೋಟೋಗಳನ್ನು ಸಹ ಆಶಿಕಾ ಪೋಸ್ಟ್ ಮಾಡಿದ್ದಾರೆ. ಬಿಕಿನಿ ತೊಟ್ಟು ಬೋಟ್ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಫೋಟೋ ಮತ್ತು ವಿಡಿಯೋಗಳಿಗೆ 1 ಲಕ್ಷಕ್ಕೂ ಅಧಿಕ ಲೈಕ್ಸ್ಗಳು ಬಂದಿವೆ.
ಇನ್ನು ಸಿನಿಮಾ ವಿಚಾರಕ್ಕೆ ಬಂದರೆ, ಪವನ್ ಒಡೆಯರ್ ನಿರ್ದೇಶನದ ಹಾಗೂ ನಟ ಇಶಾನ್ ಮುಖ್ಯ ಪಾತ್ರದಲ್ಲಿ ನಟಿಸಿರುವ ರೇಮೋ ಸಿನಿಮಾದಲ್ಲಿ ಆಶಿಕಾ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರದ ಚಿತ್ರೀಕರಣ ಮುಗಿದಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ಇದಲ್ಲದೆ, ಹೆಸರಿಡಿದ ಸಿನಿಮಾಗಳಿಗೆ ಈಗಾಗಲೇ ಆಶಿಕಾ ಸಹಿ ಹಾಕಿದ್ದಾರೆ.