More

    ಜಮ್ಮು ಕಾಶ್ಮೀರದಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ: ಅವಶೇಷಗಳ ಅಡಿ ಸಿಲುಕಿರುವ ಅನೇಕರು

    ಶ್ರೀನಗರ: ನಿರ್ಮಾಣ ಹಂತದ ಸುರಂಗದ ಒಂದು ಭಾಗ ಕುಸಿದು ಅನೇಕರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಂಬಾನ್​ ಜಿಲ್ಲೆಯ ಮಕೆರ್ಕೊಟೆ ಏರಿಯಾದ ಖೂನಿ ನಾಲಾದಲ್ಲಿ ನಡೆದಿದೆ.

    ಪ್ರಸ್ತುತ ಆ ಏರಿಯಾದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಸುಮಾರು 6 ರಿಂದ 7 ಮಂದಿ ಸಿಲುಕಿರುವ ಸಾಧ್ಯತೆ ಇದೆ. ಸದ್ಯ ಓರ್ವನನ್ನು ರಕ್ಷಣೆ ಮಾಡಲಾಗಿದೆ. ಈ ಘಟನೆಯ ಬಗ್ಗೆ ಕೇಂದ್ರ ಸಚಿವ ಜೀತೇಂದ್ರ ಸಿಂಗ್​ ಟ್ವೀಟ್​ ಮಾಡಿದ್ದು, ಪ್ರಸ್ತುತ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಾಗರಿಕ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದ ರಂಬಾನ್​ ಜಿಲ್ಲೆಯಲ್ಲಿರುವ ರಂಬಾನ್​ ಮತ್ತು ರಮ್ಸು ರಾಷ್ಟ್ರೀಯ ಹೆದ್ದಾರಿ ನಡುವಿನ ನಿರ್ಮಾಣ ಹಂತದ ಸುರಂಗದ ಒಂದು ಭಾಗ ದುರಾದೃಷ್ಟವಶಾತ್ ಕುಸಿದಿದೆ. ಜಿಲ್ಲಾಧಿಕಾರಿ ಮುಸ್ರಾತ್​ ಇಸ್ಲಾಂ ಜೊತೆ ನಾನು ನಿರಂತರ ಸಂಪರ್ಕದಲ್ಲಿದ್ದೇನೆ. ಸುಮಾರು 10 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅನೇಕರು ಸಿಲುಕಿಕೊಂಡಿದ್ದು, ಇಬ್ಬರನ್ನು ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲಿಸಿದ್ದೇವೆ ಎಂದು ಜೀತೇಂದ್ರ ಸಿಂಗ್​ ಟ್ವೀಟ್​ ಮಾಡಿದ್ದಾರೆ.

    ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಸ್ಥಗಿತಗೊಳಿಸಲಾಗಿದೆ. (ಏಜೆನ್ಸೀಸ್​)

    ಮಂಡ್ಯದ ಮಟನ್ ಶಾಪ್ ಅಭಿಮಾನಿಯ ಬಗ್ಗೆ ಬೋಲ್ಡ್​ ಬ್ಯೂಟಿ ಸನ್ನಿ ಲಿಯೋನ್ ಹೇಳಿದ್ದು ಹೀಗೆ…

    ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ: ದಿಢೀರ್​ ಶಾಕ್​ ಕೊಟ್ಟ ಸರ್ಕಾರ

    ಕೇಳಬಾರದ ಪ್ರಶ್ನೆ ಕೇಳಿ ನಟಿ ಮಾಳವಿಕರಿಂದ ಮುಖಕ್ಕೆ ಮಂಗಳಾರತಿ ಮಾಡಿಸಿಕೊಂಡ ನೆಟ್ಟಿಗ..!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts