More

    ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಅಂಗನವಾಡಿಗೆ ಸೇರಿಸಿದ ಜಿಲ್ಲಾಧಿಕಾರಿ! ಸಾರ್ವಜನಿಕರು ಹೇಳಿದ್ದು ಹೀಗೆ…

    ಹೈದರಾಬಾದ್​: ಇಂದಿನ ದಿನಗಳಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳೆಂದರೆ ಮೂಗು ಮುರಿಯುವವರೇ ಹೆಚ್ಚು. ಅದರಲ್ಲೂ ಸರ್ಕಾರಿ ಕೆಲಸದಲ್ಲಿರುವವರೇ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವುದಿಲ್ಲ. ಜನಪ್ರತಿನಿಧಿಗಳು ಕೂಡ ಇದಕ್ಕೆ ಹೊರತಾಗಿಲ್ಲ. ಹಣ ಖರ್ಚಾದರೂ ಪರವಾಗಿಲ್ಲ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಬೇಕೆಂದು ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಶಾಲಾ-ಕಾಲೇಜಿಗೆ ಸೇರಿಸುತ್ತಾರೆ. ಶಿಕ್ಷಣದ ಅಡಿಪಾಯ ಚೆನ್ನಾಗಿರಬೇಕೆಂಬ ಉದ್ದೇಶದಿಂದ ಮಕ್ಕಳನ್ನು ಆರಂಭದಲ್ಲೇ ಎಲ್​ಕೆಜಿ-ಯುಕೆಜಿಗೆ ದಾಖಲು ಮಾಡುತ್ತಾರೆ. ಸರ್ಕಾರಿ ಶಾಲೆ-ಕಾಲೇಜುಗಳು ಬಡ ಮಕ್ಕಳಿಗೆ ಮಾತ್ರ ಎನ್ನುವ ಪರಿಸ್ಥಿತಿ ನಿರ್ಮಣವಾಗಿದೆ. ಆದರೆ, ಇಲ್ಲೊಬ್ಬ ಜಿಲ್ಲಾಧಿಕಾರಿ ತಮ್ಮ ಇಬ್ಬರು ಮಕ್ಕಳನ್ನು ಅಂಗನವಾಡಿಗೆ ಸೇರಿಸುವ ಮೂಲಕ ಇತರರಿಗೆ ಮಾದರಿ ಆಗಿದ್ದಾರೆ.

    ತೆಲಂಗಾಣದ ಕುಮಾರಭೀಮ ಆಸಿಫಬಾದ್​ ಜಿಲ್ಲಾಧಿಕಾರಿ ರಾಹುಲ್​ ರಾಜ್ ಅವರಿಗೆ ನಿರ್ವಿಕಾರಾಜ್​ ಹಾಗೂ ರಿತ್ವಿಕಾರಾಜ್ ಎಂಬ​ ಇಬ್ಬರು ಮಕ್ಕಳಿದ್ದು, ಇಬ್ಬರನ್ನು ಅಂಗನವಾಡಿಗೆ ಸೇರಿಸುವ ಮೂಲಕ ಸರಳತೆ ಮೆರೆದಿದ್ದಾರೆ. ಜನಕಪುರ ಅಂಗನವಾಡಿ ಕೇಂದ್ರಕ್ಕೆ ಮಕ್ಕಳನ್ನು ದಾಖಲಿಸಿದ್ದು, ಇಬ್ಬರು ಮಕ್ಕಳು ಕೂಡ ಇನ್ನಿತರ ಮಕ್ಕಳ ಜತೆ ಸಂತೋಷವಾಗಿ ಆಟವಾಡುತ್ತಾ ಕಲಿಕೆಯಲ್ಲಿ ತೊಡಗಿಕೊಂಡಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಂಗನವಾಡಿ ಶಿಕ್ಷಕಿ ಅರುಣಾ, ಅಂಗನವಾಡಿಯಲ್ಲಿ ತಯಾರಿಸುವ ಊಟವನ್ನೇ ಜಿಲ್ಲಾಧಿಕಾರಿ ಮಕ್ಕಳು ಸಹ ಸೇವಿಸುತ್ತಾರೆ. ಎಲ್ಲರೊಂದಿಗೆ ಹೊಂದಿಕೊಂಡಿದ್ದಾರೆಂದು ತಿಳಿಸಿದ್ದಾರೆ. ಇನ್ನು ಜಿಲ್ಲಾಧಿಕಾರಿಗಳ ನಡೆಗೆ ಎಲ್ಲೆಡೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ರೀತಿಯ ಎಲ್ಲ ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಅಂಗನವಾಡಿ ಮತ್ತು ಶಾಲೆಗೆ ಸೇರಿಸಿದರೆ, ಅಭಿವೃದ್ಧಿಯಾಗುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ. (ಏಜೆನ್ಸೀಸ್​)

    ಚಂದ್ರಬಾಬು ನಾಯ್ಡು ಕಣ್ಣೀರು: ಬ್ಲೂ ಫಿಲ್ಮ್​ ಸಿಡಿ ನೆನಪಿಸಿ ಬೈ ಬೈ ಬಾಬು ಎಂದ ಶಾಸಕಿ ರೋಜಾ!

    ಜಾಲತಾಣದಲ್ಲಿ ಶಾಸಕಿಯ ಅಶ್ಲೀಲ ವಿಡಿಯೋ ವೈರಲ್​: ಬೆದರಿಕೆ ಕರೆಗಳು ಬರುತ್ತಿವೆ ಎಂದ ನಾಯಕಿ

    ಬಾಲಕಿ ಮೇಲೆ ಕಳ್ಳತನ ಆರೋಪ ಹೊರಿಸಿ, ಅಮಾನಿಸಿದ ಮಹಿಳಾ ಪೊಲೀಸ್​ಗೆ ಹೈಕೋರ್ಟ್​ ಶಾಕ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts