ವಿಜಯವಾಣಿಗೆ ಆರ್.ಶಾಮಣ್ಣ ಪ್ರಶಸ್ತಿ ಪ್ರದಾನ

Latest News

1300 ಕೋಟಿ ರೂಪಾಯಿ ಅನುದಾನ ಕೊಟ್ಟಾಗ ಕಳ್ಳ ಬಿಲ್ ಮಾಡಿ ದುಡ್ಡು ಲಪಟಾಯಿಸಿದರು ಎಂದ ಎಚ್​ಡಿಕೆ

ಬೆಂಗಳೂರು: ಅವರು ಎರಡನೇ ಬಾರಿ ನನ್ನ ಬೆನ್ನಿಗೆ ಚೂರಿ ಹಾಕಿದ್ರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಟಿಕೆಟ್ ಕೊಡಲು ನಿರಾಕರಿಸಿದ್ದೆ. ಆದರೆ ದೇವೇಗೌಡರನ್ನು...

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ ಬಾಂಗ್ಲಾ, ಪಿಂಕ್​ ಬಣ್ಣದ ಸ್ವೀಟ್ಸ್ ಫೋಟೋ ಶೇರ್​ ಮಾಡಿದ ಗಂಗೂಲಿ!

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಗಂಡಸಿ ಗ್ರಾಮದಲ್ಲಿ ಕಾರ್ತಿಕ‌ ಮಹೋತ್ಸವ

ಅರಸೀಕೆರೆ:ತಾಲೂಕಿನ ಗಂಡಸಿ ಗ್ರಾಮದಲ್ಲಿರುವ ಶ್ರೀ ಶಂಭುಲಿಂಗೇಶ್ವರ ದೇಗುಲದ ಆವರಣದಲ್ಲಿ ಕಾರ್ತಿಕ ಮಹೋತ್ಸವ ಆಯೋಜಿಸಲಾಗಿತ್ತು. ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ಶ್ರೀ ವೀರಸೋಮೇಶ್ವರ ಪ್ರಸನ್ನ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಂಡು...

ನಂಜನಗೂಡು: ಪತ್ರಕರ್ತರು ಸತ್ಯಾನ್ವೇಷಣೆಯಲ್ಲಿ ತೊಡಗಿಕೊಂಡು ಪ್ರವರ್ತಕರಾಗಿ ಕೆಲಸ ಮಾಡಿದರೆ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು.

ಸುತ್ತೂರಿನಲ್ಲಿ ಆಯೋಜಿಸಿದ್ದ 34ನೇ ಪತ್ರಕರ್ತರ ರಾಜ್ಯ ಸಮ್ಮೇಳನ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಮಾಧ್ಯಮ ಕ್ಷೇತ್ರ ಸಾಕಷ್ಟು ಬದಲಾವಣೆ ಕಂಡಿದೆ. ಚಲನಶೀಲತೆ ಇದ್ದರೆ ಮಾಧ್ಯಮ ಕ್ಷೇತ್ರ ಬೆಳವಣಿಗೆ ಕಾಣಲು ಸಾಧ್ಯ. ಸತ್ಯವನ್ನು ಗುರುತಿಸುವಲ್ಲಿ ವಿಫಲರಾಗಿದ್ದೇವೆ ಎಂಬ ಜನಾಭಿಪ್ರಾಯವಿದೆ. ವಿಶೇಷವಾಗಿ ವಿದ್ಯುನ್ಮಾನ ಮಾಧ್ಯಮಗಳು ಸತ್ಯಕ್ಕೆ ಪ್ರಥಮ ಆದ್ಯತೆ ನೀಡಬೇಕು. ಪತ್ರಿಕೋದ್ಯಮ ಲಾಭಕ್ಕಾಗಿ ಅಲ್ಲ, ಸತ್ಯಕ್ಕಾಗಿ ಎಂಬುದನ್ನು ಎತ್ತಿಹಿಡಿಯಬೇಕಿದೆ ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯ, ವೃತ್ತಿಧರ್ಮ ಹದಗೆಡಿಸುವ ಸಂದಿಗ್ಧ ಪರಿಸ್ಥಿತಿಯನ್ನು ಪತ್ರಿಕಾರಂಗ ಸಮರ್ಥವಾಗಿ ಎದುರಿಸುವ ಅಗತ್ಯವಿದೆ. ಸುದ್ದಿಗಳ ನಿಖರತೆ, ವಾಸ್ತವತೆ, ಮೌಲ್ಯ ಎತ್ತಿಹಿಡಿಯುವ ಸವಾಲು ಪತ್ರಕರ್ತರ ಮುಂದಿದೆ. ವೃತ್ತಿಪರತೆ ಮೆರೆದಾಗ ಮಾತ್ರ ಸೇವೆ ನೀಡಲು ಸಾಧ್ಯ ಎಂದು ಹೇಳಿದರು.

ಒಂದೇ ವೇದಿಕೆಯಲ್ಲಿ ಮಾಜಿ ಸಿಎಂಗಳು

ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಸಮ್ಮೇಳನದ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ಸುತ್ತೂರು ಶ್ರೀಗಳ ಎಡ ಬಲದಲ್ಲಿ ಕುಳಿತ ಸಿದ್ದರಾಮಯ್ಯ ಹಾಗೂ ಬಿಎಸ್​ವೈ, ಪರಸ್ಪರ ಮಾತಿಗಿಳಿಯುತ್ತಿದ್ದಂತೆ ನೆರೆದಿದ್ದವರಿಂದ ಜೈಕಾರ ಮೊಳಗಿತು. ಯಡಿಯೂರಪ್ಪ ಹಾಗೂ ನಾನು ಬೇರೆ ಬೇರೆ ಪಕ್ಷದಲ್ಲಿದ್ದೇವೆ. ರಾಜಕೀಯವೇ ಬೇರೆ ವೈಯಕ್ತಿಕ ಸಂಬಂಧವೇ ಬೇರೆ. ಯಾರಿಗೂ ಶಾಶ್ವತ ಸ್ನೇಹಿತರಿಲ್ಲ, ವೈರಿಗಳೂ ಇಲ್ಲ ಅಂತ ದೇವರಾಜ ಅರಸು ಹೇಳುತ್ತಿದ್ದರು ಎಂದು ಸಿದ್ದರಾಮಯ್ಯ ಸ್ಮರಿಸಿದರು.

‘ವಿಜಯವಾಣಿ’ಯ ಮೂವರಿಗೆ ಪುರಸ್ಕಾರ

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅತ್ಯುತ್ತಮ ಮುಖಪುಟ ವಿನ್ಯಾಸಕ್ಕೆ ನೀಡುವ 2017ನೇ ಸಾಲಿನ ಆರ್.ಶಾಮಣ್ಣ ಪ್ರಶಸ್ತಿಯನ್ನು ‘ವಿಜಯವಾಣಿ’ ಸಂಪಾದಕರಾದ ಕೆ.ಎನ್.ಚನ್ನೇಗೌಡ ಸ್ವೀಕರಿಸಿದರು. ಎಂ.ನಾಗೇಂದ್ರರಾವ್ ಪ್ರಶಸ್ತಿಯನ್ನು ‘ವಿಜಯವಾಣಿ’ ಕಲಬುರಗಿ ಬ್ಯೂರೋ ಮುಖ್ಯಸ್ಥ ವಾದಿರಾಜ ವ್ಯಾಸಮುದ್ರ, ಅತ್ಯುತ್ತಮ ಅಪರಾಧ ವರದಿಗೆ ಕೆ.ಗೋವಿಂದರಾಜು, ಅತ್ಯುತ್ತಮ ಸ್ಕೂಪ್ ವರದಿಗೆ ಬೇಲೂರು ಹರೀಶ್ ಪ್ರಶಸ್ತಿ ಪಡೆದುಕೊಂಡರು. ವಿವಿಧ ದತ್ತಿ ಹಾಗೂ ವಿಶೇಷ ಪ್ರಶಸ್ತಿಗಳಿಗೆ ಹಿರಿಯ ಪತ್ರಕರ್ತರಾದ ಎಂ.ನಾಗರಾಜು, ಆರ್.ಕೆ.ಜೋಶಿ, ಸು.ತ.ರಾಮೇಗೌಡ, ಜಗನ್ನಾಥ್ ದೇಸಾಯಿ, ತನುಜ ನಾಯಕ್, ದು.ಗು.ಲಕ್ಷ್ಮಣ್, ಶ್ಯಾಮ್ ಹೆಬ್ಬಾರ್ ಮತ್ತಿತರರು ಭಾಜನರಾದರು.

- Advertisement -

Stay connected

278,667FansLike
575FollowersFollow
611,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...