More

    ಹರ್ಷನ ಮನೆಗೆ ಭೇಟಿ ನೀಡಿ ಸರ್ಕಾರದ ವತಿಯಿಂದ ನೀಡಿದ 25 ಲಕ್ಷ ರೂ. ಪರಿಹಾರ ಚೆಕ್​ ವಿತರಿಸಿದ ಬಿಎಸ್​ವೈ

    ಬೆಂಗಳೂರು/ಶಿವಮೊಗ್ಗ: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಅವರ ಮನೆಗೆ ಇಂದು (ಮಾ.6) ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ರಾಜ್ಯ ಸರ್ಕಾರದ ವತಿಯಿಂದ ನೀಡಲಾದ 25 ಲಕ್ಷ ರೂಪಾಯಿ ಮೊತ್ತದ ಚೆಕ್ ಅನ್ನು ಕುಟುಂಬಕ್ಕೆ ಹಸ್ತಾಂತರಿಸಿದರು.

    ಚೆಕ್​ ಹಸ್ತಾಂತರ ಮಾಡುವುದಕ್ಕೂ ಮುನ್ನ ಹರ್ಷ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಕೆ. ಎಸ್. ಈಶ್ವರಪ್ಪ, ಸಂಸದರಾದ ಶ್ರೀ ಬಿ. ವೈ. ರಾಘವೇಂದ್ರ ಮತ್ತು ಪ್ರಮುಖರು ಉಪಸ್ಥಿತರಿದ್ದರು.

    Koo App

    ಮಾಜಿ ಮುಖ್ಯಮಂತ್ರಿ ಶ್ರೀ ಬಿ. ಎಸ್‌. ಯಡಿಯೂರಪ್ಪ ಅವರು ಶಿವಮೊಗ್ಗದಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಅವರ ಮನೆಗೆ ಇಂದು ಭೇಟಿ ನೀಡಿ, ಹರ್ಷ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿ, ರಾಜ್ಯ ಸರ್ಕಾರದ ವತಿಯಿಂದ ನೀಡಲಾದ ರೂ. 25 ಲಕ್ಷ ಮೊತ್ತದ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಕೆ. ಎಸ್. ಈಶ್ವರಪ್ಪ, ಸಂಸದರಾದ ಶ್ರೀ ಬಿ. ವೈ. ರಾಘವೇಂದ್ರ ಮತ್ತು ಪ್ರಮುಖರು ಉಪಸ್ಥಿತರಿದ್ದರು

    BJP KARNATAKA (@BJP4Karnataka) 6 Mar 2022

    ಹರ್ಷನ ಮನೆಗೆ ಭೇಟಿ ನೀಡಿ ಸರ್ಕಾರದ ವತಿಯಿಂದ ನೀಡಿದ 25 ಲಕ್ಷ ರೂ. ಪರಿಹಾರ ಚೆಕ್​ ವಿತರಿಸಿದ ಬಿಎಸ್​ವೈ

    ಫೆಬ್ರವರಿ 20ರ ರಾತ್ರಿ ಹರ್ಷನನ್ನು ಭೀಕರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು ಬಳಿಕ ಕಾರಿನಲ್ಲಿ ಎಸ್ಕೇಪ್​ ಆಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ.

    ಎರಡನೇ ಜೆಎಂಎಫ್​ಸಿ ನ್ಯಾಯಾಧೀಶರಾದ ಶ್ರೀಮತಿ ಸಮ್ಮತಿರವರು, ಮಾರ್ಚ್ 7ರ ತನಕ ಆರೋಪಿಗಳನ್ನು ಪೊಲೀಸರ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ. ಕೊಲೆ ಪ್ರಕರಣದಲ್ಲಿ 10 ಆರೋಪಿಗಳನ್ನು ಇನ್ನೂ ಹೆಚ್ಚಿನ ವಿಚಾರಣೆ ನಡೆಸಬೇಕಾಗಿದೆ. ಹೀಗಾಗಿ 15 ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕು ಎಂದು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಮಾರ್ಚ್​ 7ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

    ಕೋರ್ಟ್‌ ಆದೇಶಕ್ಕಿಲ್ಲ ಕಿಮ್ಮತ್ತು: ಮಂಗಳೂರಿನ 2 ಕಾಲೇಜುಗಳಿಗೆ ರಜೆ- ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಡೋಲಾಯಮಾನ

    ಶಿಕ್ಷಕರ ವಿರುದ್ಧ ಠಾಣೆಯ ಮೆಟ್ಟಿಲೇರಿದ 3ನೇ ಕ್ಲಾಸ್​ ವಿದ್ಯಾರ್ಥಿ: ಬಾಲಕನ ಮಾತು ಕೇಳಿ ಪೊಲೀಸರೇ ಶಾಕ್​!

    RRR ಅಡ್ವಾನ್ಸ್ ಟಿಕೆಟ್ ಬುಕಿಂಗ್ ಶುರು: ವಿದೇಶದಲ್ಲಿ ಜ್ಯೂ.ಎನ್​ಟಿಆರ್ ಫ್ಯಾನ್ಸ್ ಅಬ್ಬರ ಹೇಗಿದೆ ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts