ಶಿವಮೊಗ್ಗ: ಶಿವಮೊಗ್ಗದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದೆ. ಶಾಲೆ-ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ಬಟ್ಟೆಗಳನ್ನು ಧರಿಸುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದ್ದರೂ ಕೂಡ ಅದನ್ನು ಪಾಲಿಸದೇ ಇಂದು ಶಾಲೆಗೆ ಹುಡುಗಿಯರು ಹಿಜಾಬ್ ಧರಿಸಿ ಬಂದಿದ್ದರು.
ಶಿವಮೊಗ್ಗದ ಮೇನ್ ಮಿಡ್ಲ್ ಸ್ಕೂಲ್ನಲ್ಲಿ ಈ ಘಟನೆ ನಡೆದಿದ್ದು, ಕೋರ್ಟ್ ಆದೇಶವನ್ನು ವಿದ್ಯಾರ್ಥಿನಿಯರಿಗೆ ಮನವರಿಕೆ ಮಾಡಿದರೂ ಅದಕ್ಕೆ ಒಪ್ಪದ ವಿದ್ಯಾರ್ಥಿನಿಯರು ಶಾಲೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಲಿಲ್ಲ ಅಂತಾ ಪರೀಕ್ಷೆಯನ್ನೇ ಬಹಿಷ್ಕರಿಸಿದ್ದಾರೆ.
ಶಾಲೆಯಲ್ಲಿ ಇಂದು ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯುತ್ತಿತ್ತು. ಆದರೆ, ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಶಿಕ್ಷಕರು ಬಿಡಲಿಲ್ಲ. ಈ ಕಾರಣಕ್ಕೆ 13 ವಿದ್ಯಾರ್ಥಿನಿಯರು ಪರೀಕ್ಷೆಯನ್ನೇ ಬಹಿಷ್ಕರಿಸಿ, ಮನೆಗೆ ತೆರಳಿದರು. (ದಿಗ್ವಿಜಯ ನ್ಯೂಸ್)
ಕೋವಿಡ್ ಸಾವಿನ ಪ್ರಮಾಣ ಕಡಿಮೆ ಮಾಡುವಲ್ಲಿ ಸರ್ಕಾರ ಯಶಸ್ವಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ರಾಷ್ಟ್ರೀಯ ಭದ್ರತೆಗೆ ಮಾರಕ: ಚೀನಾ 54 ಆ್ಯಪ್ಗಳನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ
ರಾಜ್ಯದಲ್ಲಿ ಮತ್ತೆ ಸಮ್ಮಿಶ್ರ ಸರ್ಕಾರ ಬರುತ್ತೆ: ಎಚ್.ಡಿ.ದೇವೇಗೌಡ ಭವಿಷ್ಯ