More

    ಗೌಡರು ಪ್ರಧಾನಿ‌ ಮೋದಿ ಭೇಟಿ ಮಾಡುವುದು ತಪ್ಪೆ?: ಮತ್ತೆ ಸಿದ್ದರಾಮಯ್ಯ ವಿರುದ್ಧ ಸಿಡಿದ ಕುಮಾರಸ್ವಾಮಿ

    ಬೆಂಗಳೂರು: ನಾನಿನ್ನು ವೈಯಕ್ತಿಕ ಟೀಕೆ-ಟಿಪ್ಪಣಿಗೆ ಇಳಿಯುವುದಿಲ್ಲ ಎಂದಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮತ್ತೆ ಸಿಡಿದಿದ್ದಾರೆ.

    ಮಾಜಿ ಪ್ರಧಾನಿ ದೇವೇಗೌಡರು, ಪ್ರಧಾನಿ ಮೋದಿ ಭೇಟಿಯನ್ನು ಲೇವಡಿ ಮಾಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿದ್ದಾರೆ.

    ಮಾಜಿ ಪ್ರಧಾನಿಗಳೊಬ್ಬರು ಹಾಲಿ ಪ್ರಧಾನಿಯನ್ನು ಭೇಟಿ ಮಾಡುವುದು ತಪ್ಪೇ? ಸಂಸತ್ ಕಲಾಪಕ್ಕೆ ತೆರಳಿದ್ದ ಎಚ್.ಡಿ.ದೇವೇಗೌಡರು ಅಲ್ಲಿಯೇ ಇದ್ದ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಆ ಭೇಟಿ ರಾಜಕೀಯ, ಸಂಕುಚಿತತೆಯ ಎಲ್ಲೆ ಮೀರಿದ್ದು ಎನ್ನುವುದನ್ನು ಆ ಇಬ್ಬರು ನಾಯಕರ ಭೇಟಿಯ ಚಿತ್ರಗಳೇ ಹೇಳುತ್ತವೆ ಎಂದು ಚಾಟಿ ಬೀಸಿದ್ದಾರೆ.

    ಅಸೂಯೆ, ದ್ವೇಷ, ಅಸಹನೆ, ಸರ್ವಾಧಿಕಾರಿ ಮನೋಭಾವದ ‘ಸಿದ್ದಕಲೆ’ ಯ ನಿಪುಣನಿಗೆ ರಾಜಕೀಯದಲ್ಲಿ ವಿರಳಾತಿ ವಿರಳವಾಗಿ ಕಾಣುವ ಇಂಥ ಭೇಟಿಗಳನ್ನು ಅರಗಿಸಿಕೊಳ್ಳುವುದು ಹೇಗೆ ತಾನೇ ಸಾಧ್ಯ? ಎಂದು ಕೆಣಕಿದ್ದಾರೆ.

    ‘ರಾಜಕೀಯ ರಕ್ಕಸತನ’ಕ್ಕೆ ಅವರು ರಾಜಾಧಿರಾಜ. ‘ರಾಜಕೀಯ ಆಶ್ರಯ’ ನೀಡಿದ ಕಾಂಗ್ರೆಸ್ ಪಕ್ಷವನ್ನೇ ಹೆಬ್ಬಾವಿನಂತೆ ನುಂಗಲು ಹೊರಟ ‘ಸಿದ್ದಸೂತ್ರಧಾರ’ ನಿಗೆ ರಾಜಕೀಯ ಬದುಕು ಕೊಟ್ಟು ಬೆಳೆಸಿದ ಜೆಡಿಎಸ್ ಪಕ್ಷವನ್ನು ಮುಳುಗಿಸಿಬಿಡುವ ಹಗಲುಕನಸು ಬೇರೆ ಇದೆ ಎಂದು ತಿವಿದಿದ್ದಾರೆ.

    ದೇವೇಗೌಡರು ಅವಕಾಶವಾದಿ ರಾಜಕಾರಣಿ ಎನ್ನುವ ಆ ನಾಲಗೆ, ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಂ ಎನ್ನುವ ಆ ನಾಲಗೆಯ ಮೇಲೆ ‘ಪಕ್ಷನಿಷ್ಠೆ’ ಎನ್ನುವ ಪದ ಎಂದಾದರೂ ಬಂದಿದೆಯಾ? ಅದಕ್ಕೆ ಆ ಪದ ‘ಪರಮ ಅಪಥ್ಯ’ ಎನ್ನುವುದು ಇಡೀ ರಾಜ್ಯದ ಜನರಿಗೆ ಗೊತ್ತು ವ್ಯಂಗ್ಯವಾಡಿದ್ದಾರೆ.

    ನಾಯಕರಿಗೆ ಗತಿ ಇಲ್ಲ, ಅಭ್ಯರ್ಥಿಗಳಿಗಂತೂ ದಟ್ಟ ದಾರಿದ್ರ್ಯ. ಇನ್ನು, ಪಕ್ಷದ ಬಗ್ಗೆ ಹೇಳುವುದೇ ಬೇಡ. ಅಧ್ಯಕ್ಷರಿಗೊಂದು ಕಾಂಗ್ರೆಸ್, ಪ್ರತಿಪಕ್ಷ ನಾಯಕರಿಗೊಂದು ಕಾಂಗ್ರೆಸ್. ಅಷ್ಟೇ ಅಲ್ಲ, ಜಿಲ್ಲೆಗಳಲ್ಲಿ ಎರಡೆರಡು ಕಾಂಗ್ರೆಸ್ʼಗಳು!! ‘ಸಿದ್ದಸೂತ್ರಧಾರ’ನಿಗೆ ಇದೆಲ್ಲ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

    ಬಾಯಲ್ಲಿ ಜಾತ್ಯತೀತೆಯ ಜಪ ಮಾಡುತ್ತಲೇ ‘ಸಂದೇಶ ಸನ್ನಿಧಿ’ಯಲ್ಲಿ ‘ಸಿದ್ಧಸೂತ್ರ’ ಹೆಣೆದ ‘ರಕ್ಕಸ ರಾಜಕಾರಣ’ಕ್ಕೆ ಕೊನೆಗಾಲ ಬಂದಿದೆ. ಆ ದಿನವೂ ಹತ್ತಿರದಲ್ಲೇ ಇದೆ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

    ಮನೆಯಲ್ಲಿ ಚಿನ್ನ ಕದ್ದು ಸಿಕ್ಕಿಬಿದ್ದ ಮಗ: ಸೋದರತ್ತೆಯ ಜತೆ 14 ವರ್ಷದ ಮಗನ ಲಾಡ್ಜ್​ ರಹಸ್ಯ ಬಯಲು!

    ಹಳೇ ಸ್ಕೂಟರ್​ಗೆ ಇ-ವಾಹನ ರೂಪ!; ಬೆಂಗಳೂರಿನಲ್ಲಿ ಸಿದ್ಧವಾಯ್ತು ಭಾರತದ ಮೊದಲ ದೇಶೀಯ ತಂತ್ರಜ್ಞಾನ

    ತಲಕಾವೇರಿ ದೇವಸ್ಥಾನದ ಮುಂದೆ ಡಾನ್ಸ್​ ಮಾಡಿ ಎಡವಟ್ಟು: ತೀವ್ರ ಖಂಡನೆ ಬಳಿಕ ಕ್ಷಮೆಯಾಚಿಸಿದ ಹುಡುಗಿಯರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts