ಸಿದ್ದರಾಮೋತ್ಸವ: ದಾವಣಗೆರೆ ರಾಷ್ಟ್ರೀಯ ಹೆದ್ದಾರಿಯಲ್ಲಿ 15 ಕಿಮೀ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

DVG traffic
Published on

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75 ನೇ ಹುಟ್ಟುಹಬ್ಬ ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮೋತ್ಸವ ಕಾರ್ಯಕ್ರಮದಿಂದಾಗಿ ವಾಹನ ಸವಾರರಿಗೆ ಟ್ರಾಫಿಕ್ ಜಾಮ್​​ ಕಿರಿಕಿರಿ ಉಂಟಾಗಿದೆ.

ದಾವಣಗೆರೆಗೆ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಆಗಮಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ 15 ಕಿಮೀ ಜಾಮ್ ಆಗಿದೆ. ನಿಂತ ಜಾಗದಲ್ಲೇ ವಾಹನಗಳು ನಿಂತಿದ್ದು, ಸವಾರರು ಪರದಾಡುವಂತಾಗಿದೆ.

ರಾಷ್ಟ್ರೀಯ ಹೆದ್ದಾರಿ ಮಾತ್ರವಲ್ಲದೆ, ದಾವಣಗೆರೆ ನಗರದ ಮಧ್ಯಾಭಾಗ, ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣದ ಬಳಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ರಾಜ್ಯದ ವಿವಿಧ ಭಾಗದಿಂದ ಕಾರ್ಯಕ್ರಮಕ್ಕೆ ಬರುತ್ತಿರುವ ವಾಹನಗಳು ದಾವಣಗೆರೆ ನಗರದ ಮೂಲಕ ಆಗಮಿಸಿದ್ದರಿಂದ ಹಾಗೂ ನಗರದ ಹೋಟೆಲ್‌ಗಳಲ್ಲಿ ಉಳಿದಿದ್ದವರು ಒಂದೇ ಸಮಯಕ್ಕೆ ಕಾರ್ಯಕ್ರಮಕ್ಕೆ ಹೊರಟಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ.

ಟ್ರಾಫಿಕ್​ ಜಾಮ್​ನಿಂದ ದಾವಣಗೆರೆಯಲ್ಲಿ ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ಥಗೊಂಡಿದ್ದು, ಟ್ರಾಫಿಕ್ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಆದರೂ, ಟ್ರಾಫಿಕ್​ ಮಾತ್ರ ಇನ್ನು ನಿಯಂತ್ರಣಕ್ಕೆ ಬಂದಿಲ್ಲ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net