More

    ಯೋಗೀಶ್ ಗೌಡ ಕೊಲೆ ಕೇಸ್​: ಧಾರವಾಡಕ್ಕೆ ಭೇಟಿ ನೀಡದಂತೆ ವಿನಯ್​ ಕುಲಕರ್ಣಿಗೆ ಸುಪ್ರೀಂನಿಂದ ಷರತ್ತುಬದ್ಧ ಜಾಮೀನು

    ಧಾರವಾಡ: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್​ ಕುಲಕರ್ಣಿಗೆ ಸುಪ್ರೀಂಕೋರ್ಟ್​ ಕೋರ್ಟ್​ ಬುಧವಾರ ಷರತ್ತುಬದ್ಧ ಜಾಮೀನು ನೀಡಿದೆ. ಧಾರವಾಡಕ್ಕೆ ಭೇಟಿ ನೀಡದಂತೆ ಕುಲಕರ್ಣಿಗೆ ಉನ್ನತ ನ್ಯಾಯಾಲಯ ಆದೇಶಿಸಿದೆ.

    ಹೈಕೋರ್ಟ್​ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದಕ್ಕೆ ವಿನಯ್​ ಕುಲಕರ್ಣಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಇಂದು ನಡೆದ ವಿಚಾರಣೆಯಲ್ಲಿ ಆರೋಪಿ, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ಸಿಕ್ಕಿದೆ. ಆದರೆ, ವಿನಯ್ ಕುಲಕರ್ಣಿ ಜಾಮೀನು ಅರ್ಜಿಗೆ ಸಿಬಿಐ ಆಕ್ಷೇಪ ವ್ಯಕ್ತಪಡಿಸಿತು. ಸಿಬಿಐ ಪರ ವಕೀಲ ಎಎಸ್.ಜಿ. ಎಸ್.ವಿ. ರಾಜು ಅವರು ವಾದ ಮಂಡನೆ ಮಾಡಿದರು.

    A1 ಆರೋಪಿಗಳಿಂದ A15 ರವರೆಗಿನ‌‌ ಆರೋಪಿಗಳಿಗೆ ಆರು ಲಕ್ಷ ರೂಪಾಯಿ ಹಣ ಪಾವತಿ ಮಾಡಿದ್ದಾರೆ. ಕೇಸ್ ತನಿಖಾಧಿಕಾರಿಗೂ ಎರಡು ಲಕ್ಷ ರೂಪಾಯಿ ಹಣ ಪಾವತಿ ಮಾಡಿದ್ದಾರೆ. ವಿನಯ್ ಕುಲಕರ್ಣಿ ಮನವಿ ಮೇರೆಗೆ ಹಾರ್ನ್ ಬಿಲ್ ರೆಸಾರ್ಟ್​ನಲ್ಲಿ ಸಾಕ್ಷಿಗಳಿಗೆ ವಾಸ್ತವ್ಯದ ವ್ಯವಸ್ಥೆಯು ಮಾಡಲಾಗಿದೆ. ವಿನಯ್ ಕುಲಕರ್ಣಿಗೆ ಯೋಗೀಶ್ ಗೌಡ ಜತೆಗೆ ವೈಷಮ್ಯ ಇತ್ತು. ಆದರೆ, ಭೂ ವಿವಾದದಿಂದ ಕೊಲೆಯಾಗಿದೆ ಎಂದು ಬಿಂಬಿಸುವ ಯತ್ನ ಮಾಡಿದ್ದರು. ಸಿಬಿಐ ತನಿಖೆ ನಡೆಸಿದ ಬಳಿಕ ದೊಡ್ಡ ಷಡ್ಯಂತ್ರ ಬೆಳಕಿಗೆ ಬಂದಿದೆ.
    ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ವಕೀಲರು ಪ್ರಸ್ತಾಪಿಸಿದರು.

    ವಿನಯ್ ಕುಲಕರ್ಣಿಯಿಂದಲೇ ನಕಲಿ ವ್ಯಕ್ತಿಗಳನ್ನು ಆರೋಪಿಗಳೆಂದು ಬಿಂಬಿಸುವ ವ್ಯವಸ್ಥೆ ನಡೆದಿದೆ. ಸಾಕ್ಷ್ಯವನ್ನು ತಿರುಚಲಾಗಿದೆ. ಪೊಲೀಸ್ ತನಿಖೆಯಲ್ಲಿ ಕೊಲೆ, ಸಣ್ಣ ಷಡ್ಯಂತ್ರ ಮಾತ್ರ ಪ್ರಸ್ತಾಪವಾಗಿದೆ ಎಂದು ಎಸ್.ವಿ. ರಾಜು ವಾದ ಮಂಡಿಸಿದರು.

    ಪ್ರಸ್ತುತ ವಿನಯ್​ ಕುಲಕರ್ಣಿ ಹಿಂಡಲಗಾ ಜೈಲಿನಲ್ಲಿದ್ದು, ಜಾಮೀನು ಪ್ರಕ್ರಿಯೆ ಬಳಿಕ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಜಾಮೀನು ಸಿಕ್ಕಿದ್ದಕ್ಕೆ ವಿನಯ್​ ಕುಲಕರ್ಣಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.

    ವಿಶ್ವ ನಾಯಕರೇ… ನಮ್ಮ ರಾಷ್ಟ್ರವನ್ನು ಕಾಪಾಡಿ! ಆಫ್ಘಾನ್​ ಕ್ರಿಕೆಟಿಗ ರಶೀದ್​ ಖಾನ್ ಮನವಿ​

    ಆರಂಭವೂ ಇಲ್ಲೇ, ಅಂತ್ಯವೂ ಇಲ್ಲೇ… ಯಾವ ನಾಯಕರೂ ನನ್ನ ಬೆನ್ನಿಗಿಲ್ಲ: ದೇಗುಲದಲ್ಲಿ ರಾಜಕೀಯಕ್ಕೆ ವಿದಾಯ ಹೇಳಿದ ಆನಂದ್​ ಸಿಂಗ್​

    ಸಂಸತ್ತಿನ ಮೇಲ್ಮನೆಯಲ್ಲಿ ಪ್ರತಿಪಕ್ಷಗಳ ಗದ್ದಲ: ಸಂಸದರ ವರ್ತನೆಗೆ ಸಭಾಪತಿ ವೆಂಕಯ್ಯನಾಯ್ಡು ಖಂಡನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts