More

    ಉಮೇಶ್​ ಕತ್ತಿ ನಿಧನ: ಬೆಳಗಾವಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ, ಹುಟ್ಟೂರಲ್ಲಿ ಮಡುಗಟ್ಟಿದ ಶೋಕ

    ಬೆಂಗಳೂರು/ಬೆಳಗಾವಿ: ಮಂಗಳವಾರ (ಸೆ.06) ರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದ ಸಚಿವ ಉಮೇಶ್​ ಕತ್ತಿ ಅವರ ಪಾರ್ಥಿವ ಶರೀರವನ್ನು ಬೆಳಗಾವಿಗೆ ಏರ್​ಲಿಫ್ಟ್​ ಮಾಡಲಾಗಿದೆ.

    ಎಂ.ಎಸ್​. ರಾಮಯ್ಯ ಆಸ್ಪತ್ರೆಯಿಂದ ಆಂಬ್ಯಲೆನ್ಸ್​ ಮೂಲಕ ಎಚ್​ಎಎಲ್ ಏರ್​ಪೋರ್ಟ್​ಗೆ ಪಾರ್ಥಿವ ಶರೀರ​ವನ್ನು ರವಾನಿಸಿ, ಅಲ್ಲಿಂದ ಬೆಳಗಾವಿ ಏರ್​ಲಿಫ್ಟ್​ ಮಾಡಲಾಗಿದೆ. ಬೆಳಗ್ಗೆ 9ಗಂಟೆಗೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಪಾರ್ಥಿವ ಶರೀರ ತಲುಪಲಿದ್ದು, 10.30 ಕ್ಕೆ ಸಂಕೇಶ್ವರದ ಹಿರಣ್ಯಕೇಶಿ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

    ಉಮೇಶ ಕತ್ತಿ ಹುಟ್ಟೂರು ಬೆಲ್ಲದ ಬಾಗೇವಾಡಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, 2 ಗಂಟೆಯವರೆಗೂ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಬಳಿಕ ಅಂತಿಮ ಕ್ರಿಯೆಯ ವಿಧಿವಿಧಾನಗಳು ಆರಂಭವಾಗಲಿದ್ದು, ಸಂಜೆ 5 ಗಂಟೆಗೆ ಬೆಲ್ಲದ ಬಾಗೇವಾಡಿ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

    ಶಾಲೆ-ಕಾಲೇಜುಗಳಿಗೆ ರಜೆ
    ಸಚಿವ ಉಮೇಶ್​ ಕತ್ತಿ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು ರಜೆ ಘೋಷಣೆ ಮಾಡಿದ್ದಾರೆ.

    ಬೆಳಗಾವಿ ಮನೆಯಲ್ಲಿ ನೀರವ ಮೌನ‌
    ಬೆಳಗಾವಿಯ ಶಿವಬಸವ ನಗರದಲ್ಲಿರುವ ಉಮೇಶ್ ಕತ್ತಿ ಅವರ ಮನೆಯಲ್ಲಿ ನೀರವ ಮೌನ ಆವರಿಸಿದೆ. ಅಭಿಮಾನಿಗಳು ಮತ್ತು ಕುಟುಂಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬೆಳವಾವಿ ಮನೆಯಿಂದ ಸ್ವಗ್ರಾಮ ಬೆಲ್ಲದ ಬಾಗೇವಾಡಿಗೆ ಕುಟುಂಬಸ್ಥರು ಹೊರಟಿದ್ದಾರೆ.

    ಹುಟ್ಟೂರು ಸ್ತಬ್ಧ
    ಉಮೇಶ್ ಕತ್ತಿ ವಿಧಿವಶರಾದ ಹಿನ್ನೆಲೆಯಲ್ಲಿ ಹುಟ್ಟೂರು ಬೆಲ್ಲದ ಬಾಗೇವಾಡಿಯಲ್ಲಿ ಶೋಕ ಮಡುಗಟ್ಟಿದ್ದು, ಇಡೀ ಗ್ರಾಮ ಸಂಪೂರ್ಣ ಸ್ಥಬ್ಧವಾಗಿದೆ. ಕತ್ತಿ ಅವರ ಅಂತಿಮ ದರ್ಶನ ಪಡೆಯಲು ಅವರ ನಿವಾಸದತ್ತ ಜನರು ಹರಿದು ಬರುತ್ತಿದ್ದಾರೆ. (ದಿಗ್ವಿಜಯ ನ್ಯೂಸ್​)

    ಸಚಿವ ಉಮೇಶ್​ ಕತ್ತಿ ವಿಧಿವಶ: ಸಂಜೆ 5 ಗಂಟೆ ಹುಟ್ಟೂರಲ್ಲಿ ಅಂತ್ಯಕ್ರಿಯೆ, ಕತ್ತಿ ನೆನೆದು ಕಣ್ಣೀರಿಟ್ಟ ಸಿಎಂ ಬೊಮ್ಮಾಯಿ

    ‘ಸಾಯೋವರೆಗೂ ಹುಕ್ಕೇರಿಗೆ ನಾನೇ ಎಂಎಲ್​ಎ..’ ಎಂದಿದ್ದ ಉಮೇಶ್ ಕತ್ತಿ: ವಿಜಯವಾಣಿಗೆ ನೀಡಿದ್ದ ಕೊನೇ ಸಂದರ್ಶನ..

    ಕತ್ತಿ ತಂದೆ ಅಧಿವೇಶನ ನಡೆಯುವಾಗಲೇ ಹೃದಯಾಘಾತದಿಂದ ನಿಧನರಾಗಿದ್ದರು; ಪುತ್ರನೂ ಹೃದಯಾಘಾತಕ್ಕೆ ಬಲಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts