ಸಚಿವ ಉಮೇಶ್​ ಕತ್ತಿ ವಿಧಿವಶ: ಮಾಜಿ ಸಿಎಂ ಬಿಎಸ್​ವೈ ಸೇರಿದಂತೆ ರಾಜಕೀಯ ಗಣ್ಯರಿಂದ ಸಂತಾಪ

Umesh Katti
Published on

ಬೆಂಗಳೂರು: ಮಂಗಳವಾರ (ಸೆ.06) ರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದ ಸಚಿವ ಉಮೇಶ್​ ಕತ್ತಿ ಅವರ ಸಾವಿಗೆ ರಾಜ್ಯದ ರಾಜಕೀಯ ಗಣ್ಯರು ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ.

ಮಂಗಳವಾರ ಅವರು ತಮ್ಮ ಬೆಂಗಳೂರಿನ ಮನೆಯಲ್ಲಿದ್ದಾಗ ರಾತ್ರಿ ಹತ್ತು ಗಂಟೆಯ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದ್ದು, ಬಾತ್​ರೂಮ್​ನಲ್ಲಿ ಕುಸಿದುಬಿದ್ದಿದ್ದರು. ಊಟ ಮಾಡಿರಲಿಲ್ಲ. ಬಳಿಕ ತಕ್ಷಣ ಕುಟುಂಬಸ್ಥರು ಅವರನ್ನು ಎಂ.ಎಸ್​. ರಾಮಯ್ಯ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರು ಅವರ ಆರೋಗ್ಯ ಸ್ಥಿತಿಯ ಮೇಲೆ ತೀವ್ರ ಗಮನ ಇರಿಸಿ, ಚಿಕಿತ್ಸೆ ನೀಡುತ್ತಿದ್ದರು. ಅದಾಗ್ಯೂ ಚಿಕಿತ್ಸೆ ಫಲಿಸದೆ ಅವರು ಇಂದು ರಾತ್ರಿ 11 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ.

ಉಮೇಶ್​ ಕತ್ತಿಯ ನಿಧನಕ್ಕೆ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ, ಸಿದ್ದರಾಮಯ್ಯ, ಎಚ್​.ಡಿ. ಕುಮಾರಸ್ವಾಮಿ ಸೇರಿದಂತೆ ರಾಜ್ಯಕೀಯ ಗಣ್ಯರು ಸಂತಾಪ ಸೂಚಿಸಿದ್ದು, ಅವರು ಮಾಡಿರುವ ಸಂತಾಪದ ಟ್ವೀಟ್​ ಈ ಕೆಳಕಂಡಂತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net