More

    ವಿವಾದಿತ ಮೂರು ಕೃಷಿ ಕಾಯ್ದೆ ರದ್ದು ಮಾಡುವ ಸರ್ಕಾರದ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ

    ನವದೆಹಲಿ: ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ರದ್ದು ಮಾಡುವ ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

    ಇಂದು ಬೆಳಗ್ಗೆ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ರದ್ದು ಮಸೂದೆ 2021 ಗೆ ಸಚಿವ ಸಂಪುಟ ಸ್ಟ್ಯಾಂಪ್​ ಅನುಮೋದನೆ ನೀಡಿದೆ. ಪ್ರಧಾನ ಮಂತ್ರಿ ಕಚೇರಿಯಲ್ಲಿ ನಡೆದ ಸಮಾಲೋಚನೆಯ ಬಳಿಕ ಕೇಂದ್ರ ಕೃಷಿ ಸಚಿವಾಲಯ ಕೃಷಿ ಕಾಯ್ದೆ ರದ್ದು ಮಸೂದೆಯಲ್ಲಿ ಅಂತಿಮಗೊಳಿಸಿದೆ.

    ಕಳೆದ ವರ್ಷ ಜಾರಿಗೆ ತರಲಾದ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಉದ್ದೇಶವನ್ನು ಕೃಷಿ ಕಾಯ್ದೆ ರದ್ದು ಮಸೂದೆ 2021 ಹೊಂದಿದ್ದು, ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಪ್ರವರ್ತನೆ ಮತ್ತು ಅನುಕೂಲ) ಕಾಯ್ದೆ-2020, ರೈತರ (ಸಬಲೀಕರಣ ಮತ್ತು ರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ-2020 ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ-2020 ರದ್ದಾಗಲಿದೆ.

    ನವೆಂಬರ್​ 19ರಂದು ಬೆಳಗ್ಗೆ 9 ಗಂಟೆಗೆ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಹತ್ವದ ಘೋಷಣೆ ಮಾಡಿದರು. ನಾವು ಎಲ್ಲಾ 3 ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ. ಈ ತಿಂಗಳು ಪ್ರಾರಂಭವಾಗುವ ಸಂಸತ್ತಿನ ಅಧಿವೇಶನದಲ್ಲಿ ಕಾರ್ಯವಿಧಾನವನ್ನು ಪ್ರಾರಂಭಿಸುತ್ತೇವೆ. ರೈತರು ತಮ್ಮ ಕುಟುಂಬಗಳಿಗೆ ಮರಳಲು ನಾನು ಒತ್ತಾಯಿಸುತ್ತೇನೆ. ಯಾವುದೇ ಪ್ರತಿಭಟನೆಗಳು ಮಾಡದಂತೆ ಪ್ರಧಾನಿ ಮೋದಿ ಮನವಿ ಮಾಡಿದರು. ಇಲ್ಲಿಯವರೆಗೆ ನಾನೇನು ಮಾಡಿದ್ದೇನೆ, ಅದೆಲ್ಲವು ರೈತರಿಗಾಗಿ ಮಾಡಿದ್ದೇನೆ. ನಾನು ಮಾಡುತ್ತಿರುವುದೆಲ್ಲ ನನ್ನ ದೇಶಕ್ಕಾಗಿ ಎಂದು ಹೇಳಿದರು.

    ನವೆಂಬರ್​ 29ರಂದು ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಕೃಷಿ ಕಾಯ್ದೆ ರದ್ದು ಪ್ರಕ್ರಿಯೆ ಆರಂಭವಾಗಲಿದೆ. ಕಳೆದ ಒಂದು ವರ್ಷಗಳಿಂದ ರೈತರು ನಿರಂತರವಾಗಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸಿಕೊಂಡು ಬಂದಿದ್ದರು. ಕೊನೆಗೂ ರೈತರ ಪ್ರತಿಭಟನೆಗಳಿಗೆ ಮಣಿದಿರುವ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆದಿದೆ. (ಏಜೆನ್ಸೀಸ್​)

    ಎಫ್​ಡಿಎ ಮಾಯಣ್ಣರ ಬಳಿ 50 ಕೋಟಿಗೂ ಅಧಿಕ ಮೌಲ್ಯದ ಆಸ್ತಿ? ಎಸಿಬಿ ಅಧಿಕಾರಿಗಳೇ ಶಾಕ್​

    ಎಸಿಬಿ ದಾಳಿ: ಹೆಸ್ಕಾಂ ನೌಕರನ ಐಷಾರಾಮಿ ಮನೆಯಲ್ಲಿ ಲಿಫ್ಟ್​ ಕೂಡ ಇದೆ!

    ಬಿಜೆಪಿ ಸಂಸದ ಗೌತಮ್​ ಗಂಭೀರ್​ಗೆ ಜೀವ ಬೆದರಿಕೆ; ಭದ್ರತೆ ಹೆಚ್ಚಿಸಿದ ದೆಹಲಿ ಪೊಲೀಸ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts