More

    ಪಂಚಭೂತಗಳಲ್ಲಿ ಲೀನರಾದ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ

    ಬೆಂಗಳೂರು: ನಿನ್ನೆ (ಡಿ.4) ಬಾರದ ಲೋಕಕ್ಕೆ ಪಯಣ ಬೆಳೆಸಿದ ಕನ್ನಡ ಚಿತ್ರರಂಗದ ಹಿರಿಯ ನಟ ಸ್ಯಾಂಡಲ್‍ವುಡ್‍ನ ‘ಶಿವರಾಮಣ್ಣ’ ಎಂದೇ ಖ್ಯಾತರಾಗಿದ್ದ ಎಸ್​. ಶಿವರಾಂ ಅವರ ಅಂತ್ಯಕ್ರಿಯೆಯು ಬನಶಂಕರಿ ಚಿತಾಗಾರದಲ್ಲಿ ಪೊಲೀಸ್​ ಗೌರವಗಳೊಂದಿಗೆ ಇಂದು (ಡಿ.5) ಮಧ್ಯಾಹ್ನ ನೆರವೇರಿದೆ.

    ಬ್ರಾಹ್ಮಣ ಸಂಪ್ರದಾಯಂತೆ ಅಂತಿಮ ಸಂಸ್ಕಾರ ನಡೆಯಿತು. ಪುತ್ರರಾದ ರವಿಶಂಕರ್​ ಮತ್ತು ಲಕ್ಷೀಶ್​ ಅವರು ತಂದೆ ಶಿವರಾಂ ಅವರ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಕನ್ನಡ ಚಿತ್ರರಂಗದ ಗಣ್ಯರು ಹಾಗೂ ರಾಜಕೀಯ ನಾಯಕರು ಸೇರಿದಂತೆ ಅನೇಕರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಇಂದು ಬೆಳಗ್ಗೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

    ಪುಟ್ಟಣ್ಣ ಕಣಗಾಲ್ ಗರಡಿಯಲ್ಲಿ ಪಳಗಿದ ಶಿವರಾಂ ನಾಯಕ ನಟರಾಗಿ, ಹಾಸ್ಯನಟ, ಪೋಷಕ ನಟ, ನಿರ್ಮಾಪಕರಾಗಿಯೂ ಹೆಸರು ಮಾಡಿದವರು. ಶಿವರಾಂ ಅವರು ಅಯ್ಯಪ್ಪ ಸ್ವಾಮಿಯ ಪರಮ ಭಕ್ತರಾಗಿದ್ದರು. ಇತ್ತೀಚಿಗೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಅಪಘಾತ ಸಂಭವಿಸಿ ಶಿವರಾಂ ಅವರ ತಲೆಗೆ ಸ್ವಲ್ಪ ಪೆಟ್ಟಾಗಿತ್ತು. ಬಳಿಕ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ನಡೆಸಿದಾಗ ವರದಿಯಲ್ಲಿ ಯಾವುದೇ ಸಮಸ್ಯೆಗಳೂ ಪತ್ತೆಯಾಗಿರಲಿಲ್ಲ.

    ಕಳೆದ ಮಂಗಳವಾರ ರಾತ್ರಿ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡಲು ಶಿವರಾಂ ಅವರು ಪೂಜೆ ಮನೆಗೆ ಹೋದಾಗ ಕೆಳಗೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ಗಂಭೀರವಾಗಿ ಪೆಟ್ಟಾಗಿತ್ತು. ಆಸ್ಪತ್ರೆಗೆ ದಾಖಲಿಸಿದ ವೇಳೆ ಮಿದುಳಿನಲ್ಲಿ ರಕ್ತಸ್ರಾವವಾಗಿರುವುದು ಕಂಡು ಬಂದಿತ್ತು. ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ. ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಅವರು ಕೋಮಾಗೆ ಜಾರಿದ್ದು, ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಹೇಳಿದ್ದರು. ನಿನ್ನೆ (ಡಿ.4) ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.

    ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಪೆಟ್ಟು: ಹಿರಿಯ ನಟ ಶಿವರಾಂ ವಿಧಿವಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts