ಕಾಲಿವುಡ್​ ಸೂಪರ್​ ಸ್ಟಾರ್​ ವಿಶಾಲ್​ ಮನೆಯ ಮೇಲೆ ದುಷ್ಕರ್ಮಿಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಚೆನ್ನೈ: ಕಾಲಿವುಡ್​ ಸೂಪರ್​ ಸ್ಟಾರ್​ ಹಾಗೂ ನಾಡಿಗರ್​ ಸಂಘದ ಪ್ರಧಾನ ಕಾರ್ಯದರ್ಶಿಯಾಗಿರುವ ನಟ ವಿಶಾಲ್​ ಅವರ ಮನೆಯ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಚೆನ್ನೈನ ಅಣ್ಣಾ ನಗರದಲ್ಲಿರುವ ನಿವಾಸದ ಮೇಲೆ ದಾಳಿಯಾಗಿದೆ. ಈ ನಿವಾಸದಲ್ಲಿ ನಟ ವಿಶಾಲ್​ ತಮ್ಮ ಪಾಲಕರೊಂದಿಗೆ ವಾಸವಿದ್ದಾರೆ. ಘಟನೆ ಸಂಬಂಧ ವಿಶಾಲ್​​ ಮ್ಯಾನೇಜರ್​ ಹರಿಕೃಷ್ಣನ್​​ ಪೊಲೀಸ್​ ದೂರು ದಾಖಲಿಸಿದ್ದಾರೆ. ಸಾಕ್ಷಿಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರಿಗೆ ನೀಡಿದ್ದಾರೆ. ಕೆಂಪು ಬಣ್ಣದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಮನೆಯ … Continue reading ಕಾಲಿವುಡ್​ ಸೂಪರ್​ ಸ್ಟಾರ್​ ವಿಶಾಲ್​ ಮನೆಯ ಮೇಲೆ ದುಷ್ಕರ್ಮಿಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ