

ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಸಾಕಷ್ಟು ವಿಡಿಯೋಗಳು ಪೋಸ್ಟ್ ಆಗುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ಕಣ್ಣು ಮುಚ್ಚಿ ಬಿಡುವಷ್ಟರಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿಬಿಡುತ್ತವೆ. ಕೆಲವೊಂದು ವಿಡಿಯೋಗಳು ತುಂಬಾ ಫನ್ನಿಯಾಗಿರುತ್ತವೆ ಮತ್ತು ನೋಡುಗರನ್ನು ಹೊಟ್ಟೆ ಹುಣ್ಣಾಗಿಸುವಷ್ಟು ನಗಿಸುತ್ತವೆ. ಆ ಸಾಲಿಗೆ ಇದೀಗ ಮತ್ತೊಂದು ವಿಡಿಯೋ ಸೇರ್ಪಡೆಯಾಗಿದೆ.
ಸದ್ಯ ವೈರಲ್ ಆಗಿರುವ ವಿಡಿಯೋದಲ್ಲಿ ಒಂದು ಗುಂಪಿನ ಮಹಿಳೆಯರು ಬಾಲಿವುಡ್ನ "ಕಾಲಾ ಚಸ್ಮಾ" ಹಾಡಿಗೆ ಮೈಚಳಿ ಬಿಟ್ಟು ಡಾನ್ಸ್ ಮಾಡಿದ್ದಾರೆ. ಈ ವಿಡಿಯೋವನ್ನು ವಿಡಿಯೋನೇಷನ್.ಟೆಬ್ ಇನ್ಸ್ಟಾಗ್ರಾಂ ಪೇಜ್ನಲ್ಲಿ ಅಪ್ಲೋಡ್ ಮಾಡಲಾಗಿದ್ದು, ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಪಾರ್ಟಿಯೊಂದರಲ್ಲಿ ಮಹಿಳೆಯುರು ಕುಣಿದು ಕುಪ್ಪಳಿಸಿರುವ ವಿಡಿಯೋ ಇದಾಗಿದೆ. ಸಾವಿರಾರು ಲೈಕ್ಸ್ಗಳು ಬಂದಿದ್ದು, ಆಂಟಿಯರ ಡಾನ್ಸ್ ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ಎಲ್ಲರಲ್ಲೂ ಪ್ರತಿಭೆ ಇರುತ್ತದೆ, ಅದಕ್ಕೆ ಸೂಕ್ತ ವೇದಿಕೆ ಸಿಗಬೇಕಷ್ಟೇ ಎಂದು ಕಾಮೆಂಟ್ ಮಾಡುತ್ತಿದ್ದಾರೆ. (ಏಜೆನ್ಸೀಸ್)