More

    ಭಾರೀ ಮಳೆಯ ನಡುವೆ ಸ್ಮಶಾನದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ವ್ಯಕ್ತಿಗೆ ಹೆಗಲು ಕೊಟ್ಟು ರಕ್ಷಿಸಿದ ಮಹಿಳಾ ಪೊಲೀಸ್​!

    ಚೆನ್ನೈ: ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯ ನಡುವೆ ಸ್ಮಶಾನದಲ್ಲಿ ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದ ವ್ಯಕ್ತಿಯೊಬ್ಬನನ್ನು ರಕ್ಷಿಸುವ ಮೂಲಕ ಮಹಿಳಾ ಪೊಲೀಸ್​ ಅಧಿಕಾರಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ಈ ಘಟನೆ ತಮಿಳುನಾಡು ರಾಜಧಾನಿ ಚೆನ್ನೈನ ಟಿಪಿ ಛತ್ರಂ ಏರಿಯಾದಲ್ಲಿ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ಸ್ಮಶಾನದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ವ್ಯಕ್ತಿಯನ್ನು ಮಹಿಳಾ ಪೊಲೀಸ್​ ಅಧಿಕಾರಿ ತಮ್ಮ ಹೆಗಲ ಮೇಲೆ ಹೊತ್ತು ನಿಂತಿರುವುದು ವಿಡಿಯೋದಲ್ಲಿದೆ. ಆಟೋ ಮುಖಾಂತರ ಸರಿಯಾದ ಸಮಯಕ್ಕೆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿ ಮಾನವೀಯತೆ ಮರೆದಿದ್ದಾರೆ. ಇತ್ತ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗುತ್ತಿದ್ದು ಇನ್ಸ್​ಪೆಕ್ಟರ್​ ರಾಜೇಶ್ವರಿ ಅವರ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಗುರುವಾರ ತಮಿಳುನಾಡಿನ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ನಡುವೆ ಸ್ಮಶಾನದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ಪ್ರಜ್ಞೆ ತಪ್ಪಿ ಬಿದ್ದಿದ್ದ. ಇದೇ ಸಮಯದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಇನ್ಸ್​ಪೆಕ್ಟರ್​ ರಾಜೇಶ್ವರಿ ಅವರಿಗೆ ಈ ವಿಚಾರ ತಿಳಿದು ತಕ್ಷಣ ಸ್ಥಳಕ್ಕೆ ಧಾವಿಸಿ ಆತನನ್ನು ರಕ್ಷಣೆ ಮಾಡಿದ್ದಾರೆ.

    ಇನ್ನು ತಮಿಳುನಾಡಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಎಗ್ಮೋರ್ ಮತ್ತು ಪೆರಂಬೂರ್​ ಸೇರಿದಂತೆ ಹಲವು ಕಡೆ ಮರಗಳು ಧರಶಾಹಿಯಾಗಿದ್ದು, ವರುಣನ ಅಬ್ಬರಕ್ಕೆ ಜನ ತತ್ತರಿಸಿ ಹೋಗಿದ್ದಾರೆ.

    ಶನಿವಾರದಿಂದ ಈಚೆಗೆ 12 ಮಂದಿ ಮಳೆ ಕಾರಣದಿಂದಾಗಿ ತಮಿಳುನಾಡಿನಲ್ಲಿ ಮೃತಪಟ್ಟಿರುವುದಾಗಿ ತಮಿಳುನಾಡಿನ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್​ ಜಯಂತ್​ ಮಾಹಿತಿ ನೀಡಿದ್ದಾರೆ.

    ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಅದರಲ್ಲೂ ಸಮುದ್ರ ತೀರಕ್ಕೆ ಹೊಂದಿಕೊಂಡಿರುವ ಚೆನ್ನೈನಲ್ಲಿ ವರುಣ ಅಬ್ಬರಿಸುತ್ತಿದ್ದು ನಗರದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. (ಏಜೆನ್ಸೀಸ್​)

    ಕೆಲಸದಿಂದ ತೆಗೆಯುವುದಾಗಿ ಬೆದರಿಸಿ ಲೈಂಗಿಕ ಕಿರುಕುಳ; ಸರ್ಕಾರಿ ಅಧಿಕಾರಿ ಜೈಲಿಗೆ

    ಇದರಲ್ಲಿ ಕರ್ನಾಟಕ ಮಾದರಿಯಾಗಲಿ ಎಂದರಂತೆ ಮೋದಿ! ಪ್ರಧಾನಿ ಜತೆಗಿನ ಮಾತುಕತೆ ವಿವರ ಬಿಚ್ಚಿಟ್ಟ ಸಿಎಂ

    ನಾಡು ಕಂಡ ಧೀರೆ, ವೀರವನಿತೆ ಓಬವ್ವನ ಜಯಂತಿಗೆ ಪ್ರಧಾನಿಯಿಂದ ಕನ್ನಡದಲ್ಲಿ ಶುಭಾಶಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts