More

    ಮದುವೆ ಸಂಭ್ರಮದ ವೇಳೆ ಘನಘೋರ ದುರಂತ: ಆಕಸ್ಮಿಕವಾಗಿ ಬಾವಿಗೆ ಬಿದ್ದು 11 ಮಂದಿ ದುರ್ಮರಣ

    ಕುಶಿನಗರ: ಮದುವೆ ಸಂಭ್ರಮದ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ 11 ಮಂದಿ ದುರಂತ ಸಾವಿಗೀಡಾಗಿರುವ ಘನಘೋರ ಘಟನೆ ಉತ್ತರ ಪ್ರದೇಶದ ಕುಶಿನಗರದಲ್ಲಿ ಬುಧವಾರ (ಫೆ.16) ತಡರಾತ್ರಿ ನಡೆದಿದೆ.

    ಸ್ಥಳೀಯ ಅಧಿಕಾರಿಗಳ ಪ್ರಕಾರ ಮದುವೆ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು ಮತ್ತು ಮಕ್ಕಳು ಹಳೆಯ ಬಾವಿಯನ್ನು ಮುಚ್ಚಿದ್ದ ಚಪ್ಪಡಿಯ ಮೇಲೆ ಕುಳಿತಿದ್ದರು. ಈ ವೇಳೆ ಹೆಚ್ಚು ಭಾರದಿಂದಾಗಿ ಚಪ್ಪಡಿ ಕುಸಿದಿದ್ದು, ಅದರ ಮೇಲಿದ್ದವರೆಲ್ಲ ಬಾವಿ ಒಳಗೆ ಬಿದ್ದಿದ್ದಾರೆ. ತಕ್ಷಣ ಎಲ್ಲರನ್ನು ಬಾವಿಯಿಂದ ಮೇಲೆತ್ತಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಷ್ಟರಲ್ಲಾಗಲೇ 11 ಮಂದಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಇಬ್ಬರು ಗಂಭೀರ ಗಾಯದಿಂದ ಬಳಲುತ್ತಿದ್ದಾರೆ.

    ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದ್ದು, ಬಂಧು-ಬಳಗದವರು ಆಸ್ಪತ್ರೆಗೆ ದೌಡಾಯಿಸಿದ್ದು, ತಮ್ಮ ಸಂಬಂಧಿಕರು ಹಾಗೂ ಕುಟುಂಬದ ಸದಸ್ಯರ ಮೃತದೇಹವನ್ನು ನೋಡಿ ಗೋಳಿಡುತ್ತಿದ್ದು, ಇಡೀ ಆಸ್ಪತ್ರೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮನಕಲಕುವಂತಿದೆ.

    ಈ ಬಗ್ಗೆ ಮಾತನಾಡಿರುವ ಜಿಲ್ಲಾ ಮ್ಯಾಜಿಸ್ಟ್ರೇಟ್​ ಎಸ್​. ರಾಜಲಿಂಗಂ, ಆಕಸ್ಮಿಕವಾಗಿ ಬಾವಿಗೆ ಬಿದ್ದು 11 ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಬಗ್ಗೆ ನಾವು ಮಾಹಿತಿ ಪಡೆದೆವು. ಈ ಘಟನೆ ಮದುವೆ ಸಂಭ್ರಮದ ವೇಳೆ ನಡೆದಿದೆ. ಬಾವಿಗೆ ಮುಚ್ಚಲಾಗಿದ್ದ ಚಪ್ಪಡಿ ಮೇಲೆ ಕುಳಿತಿದ್ದಾಗ ಭಾರದಿಂದ ಚಪ್ಪಡಿ ಕುಸಿದು ಈ ದುರಂತ ಸಂಭವಿಸಿದೆ. ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

    ಘಟನೆಯ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸಂತಾಪ ವ್ಯಕ್ತಪಡಿಸಿದ್ದಾರೆ. ಕೂಡಲೇ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ನಡೆಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಯೋಗಿ ಅವರು ಸೂಚನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ಟ್ವೀಟ್​ ಮಾಡಿದೆ.

    ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. (ಏಜೆನ್ಸೀಸ್​)

    ಮದುವೆ ಮೊದಲು, ಐಪಿಎಲ್ ನಂತರ; ಆರ್‌ಸಿಬಿಗೆ ಶಾಕ್ ನೀಡಿದ ಮ್ಯಾಕ್ಸ್‌ವೆಲ್!

    ಕೈ-ಕಮಲ ಧ್ವಜ ಸಂಘರ್ಷ: ಈಶ್ವರಪ್ಪ-ಡಿ.ಕೆ. ಶಿವಕುಮಾರ್ ವಾಕ್ಸಮರ; ಕಲಾಪ ನುಂಗಿದ ಮೇಲಾಟ

    ರಾಜ್ಯ ಹೆದ್ದಾರಿಗಳ ನಿರ್ವಹಣೆಗೆ ಆದ್ಯತೆ; ವಿಜಯವಾಣಿ ವರದಿ ಹಿನ್ನೆಲೆಯಲ್ಲಿ ಸಚಿವಾಲಯಕ್ಕೆ ಶೋಭಾ ಕರಂದ್ಲಾಜೆ ಒತ್ತಡ

    ವಾಹನ ಚಾಲನೆ ವೇಳೆ ಮೊಬೈಲ್ ಬಳಕೆಯ ದಂಡವನ್ನು ಹೆಚ್ಚಿಸಿದ್ರಾ? ರವಿಕಾಂತೇಗೌಡ ಕೊಟ್ಟ ಸ್ಪಷ್ಟಣೆ ಹೀಗಿದೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts