More

    ಯಾದಗಿರಿಯಲ್ಲಿ ಕಾರು-ಲಾರಿ ನಡುವೆ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ 6 ಮಂದಿ ದುರ್ಮರಣ

    ಯಾದಗಿರಿ: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ಗುರುವಾರ (ಆ.04) ತಡರಾತ್ರಿ ನಡೆದಿದೆ.

    ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ. ಅಪಘಾತದ ಸ್ಥಳದಲ್ಲೇ ಮೂರು ಜನ ಮೃತಪಟ್ಟರೆ, ಆಸ್ಪತ್ರೆಯಲ್ಲಿ ಮೂರು ಮಂದಿ ಪ್ರಾಣ ಬಿಟ್ಟಿದ್ದಾರೆ. 1 ವರ್ಷದ ಹೆಣ್ಣುಮಗು ಸೇರಿ 6 ಮಂದಿ ಭೀಕರ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರ ಮಾಹಿತಿ ಇನ್ನಷ್ಟೇ ಬರಬೇಕಿದೆ.

    ಗಂಭೀರ ಗಾಯಗೊಂಡಿರುವ ಬಾಲಕನನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲರು ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಗ್ರಾಮದವರು. ತೆಲಂಗಾಣದ ಕೊಡಂಗಲ್ ಸಮೀಪದ ದರ್ಗಾಕ್ಕೆ ತೆರಳಿದ್ದರು. ದರ್ಗಾದಲ್ಲಿ ಜವಳ ಕಾರ್ಯಕ್ರಮ ಹಾಗೂ ಪೂಜೆ ಸಲ್ಲಿಸಿ ಹಟ್ಟಿ ಗ್ರಾಮಕ್ಕೆ ಕಾರಿನಲ್ಲಿ ವಾಪಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.

    ಘಟನೆ ಬೆನ್ನಲ್ಲೇ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ‌ ಹಾಗೂ ಪಿಐ ದೌವಲತ್ ಕುರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುರುಮಿಠಕಲ್ ಠಾಣಾ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದು, ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಲೋಕದ ಡೊಂಕಿನತ್ತ ಗಮನ: ಸಮುದಾಯ, ಸಮಷ್ಟಿ ಸಮಸ್ಯೆಗಳ ಕಡೆಗೆ ಲೋಕಾಯುಕ್ತ ಚಿತ್ತ

    ಲಾಲ್ ಸಿಂಗ್ ಛಡ್ಡಾ ಪ್ರಹಸನ, ಚಿತ್ರರಂಗದ ಜಾಗತೀಕರಣ

    ಅನಾಥ ಮಕ್ಕಳಿಗೆ ಮೀಸಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts