

ಯಾದಗಿರಿ: ಅತ್ಯಾಚಾರಕ್ಕೆ ವಿರೋಧಿಸಿದ ಮಹಿಳೆಗೆ, ಕಾಮುಕನೊಬ್ಬ ಬೆಂಕಿಯಿಟ್ಟು ಕೊಲೆ ಮಾಡಿರುವ ಆತಂಕಕಾರಿ ಘಟನೆ ಸುರಪುರ ತಾಲೂಕಿನ ಚೌಡೇಶ್ವರಹಾಳ ಗ್ರಾಮದಲ್ಲಿ ನಡೆದಿದೆ.
ಪಾಲಮ್ಮ ಮೃತ ಮಹಿಳೆ. ಆರೋಪಿ ಗಂಗಪ್ಪ, ನಿನ್ನೆ ಪಾಲಮ್ಮಳ ಮನೆಗೆ ಡಿಢೀರನೇ ನುಗ್ಗಿ ಆಕೆಯ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ್ದಾನೆ. ಗಂಗಪ್ಪನಿಂದ ಹೇಗಾದರೂ ತಪ್ಪಿಸಿಕೊಳ್ಳಬೇಕೆಂದು ಪಾಲಮ್ಮ ತನ್ನ ಬಲವನ್ನು ಪ್ರಯೋಗಿಸಿ ಗಂಗಪ್ಪನನ್ನು ದೂರ ತಳ್ಳಿದ್ದಾಳೆ.
ಗಂಗಮ್ಮ ತಳ್ಳಿದ ರಭಸಕ್ಕೆ ಗಂಗಪ್ಪ ನೆಲದ ಮೇಲೆ ಬಿದ್ದು ಗಾಯಗೊಂಡಿದ್ದಾನೆ. ಇದರಿಂದ ಕುಪಿತಗೊಂಡ ಗಂಗಪ್ಪ, ಪಾಲಮ್ಮಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾನೆ. ಇತ್ತ ಬೆಂಕಿಯಲ್ಲಿ ಸುಟ್ಟು ಗಂಭೀರವಾಗಿ ಗಾಯಗೊಂಡಿದ್ದ ಪಾಲಮ್ಮಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದಾದರೂ ಚಿಕಿತ್ಸೆ ಫಲಿಸದೇ ಆಕೆ ಮೃತಪಟ್ಟಿದ್ದಾಳೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಸುರಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಎಸ್ಕೇಪ್ ಆಗಿರುವ ಆರೋಪಿಯ ಪತ್ತೆಗೆ ಸುರಪುರ ಪೊಲೀಸರು ಬಲೆ ಬೀಸಿದ್ದಾರೆ. (ದಿಗ್ವಿಜಯ ನ್ಯೂಸ್)