More

    ಕೃಷ್ಣಾ ಕಣಿವೆಯಲ್ಲಿ ಭಾರಿಮಳೆ, ಮೈದುಂಬಿಕೊಳ್ಳಲು ಆರಂಭಿಸಿದ ಕೃಷ್ಣೆ

    ರಬಕವಿ/ಬನಹಟ್ಟಿ: ಕೃಷ್ಣಾ ಕಣಿವೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಸುರಿಯುತ್ತಿರುವ ಭಾರಿಮಳೆಯಿಂದ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.

    ಕೃಷ್ಣೆ ಈಗ ಮೈದುಂಬಿ ಅಪಾಯದ ಮಟ್ಟ ಮೀರಿ ಹರಿಯುವ ಸಾಧ್ಯತೆ ಇದೆ. ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕೊಯ್ನ ಹಾಗೂ ರಾಜಾಪುರ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಇದರಿಂದ ಹಿಪ್ಪರಗಿ ಆಣೆಕಟ್ಟಿನ ಹಿನ್ನೀರಿನಿಂದಾಗಿ ಬನಹಟ್ಟಿ ಸಮೀಪದ ಮಹಿಷವಾಡಗಿ ಬ್ಯಾರೇಜ್‌ನಲ್ಲಿ ನೀರಿನ ರಭಸ ಹೆಚ್ಚಾಗಿದೆ. ರಬಕವಿ-ಬನಹಟ್ಟಿಯಿಂದ ಅಥಣಿ ತಾಲೂಕಿನ ಗ್ರಾಮಗಳ ಸಂಪರ್ಕ ಕಲ್ಪಿಸುವ ಬೋಟ್ ಸೇವೆ ಸ್ಥಗತಿಗೊಳ್ಳುವ ಸಾಧ್ಯತೆಗಳಿವೆ ಎಂದು ತಾಲೂಕು ಆಡಳಿತ ತಿಳಿಸಿದೆ.

    ಮುಂದಿನ ದಿನಗಳಲ್ಲಿ ನದಿ ಅಪಾಯ ಮಟ್ಟ ಮೀರಿ ಹರಿಯುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನದಿ ಪಾತ್ರದಲ್ಲಿ ವಾಸಿಸುವ ಜನ ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಗಳಿಗೆ ಹೋಗುವುದು ಉತ್ತಮ. ಈಗೇನು ಅಂತಹ ಭಯವಿಲ್ಲ ಆದರೂ ಜನ ಮುಂಜಾಗ್ರತೆಯಲ್ಲಿರಬೇಕು ಎಂದು ತಹಸೀಲಾರ್ ಸಂಜಯ ಇಂಗಳೆ ಪತ್ರಿಕೆಗೆ ತಿಳಿಸಿದ್ದಾರೆ.

    2 ಲಕ್ಷ ಕ್ಯೂಸೆಕ್ ನೀರು ಹರಿದು ಬರಲು ಪ್ರಾರಂಭಿಸಿದರೆ ಮಾತ್ರ ಪ್ರವಾಹ ಬೀತಿ ಸುರುವಾಗುವ ಸಾಧ್ಯತೆ ಇದೆ. ಜನರು ಭಯಪಡುವ ಅಗತ್ಯವಿಲ್ಲ ತಾಲೂಕು ಆಡಳಿತ ಸಂಪೂರ್ಣ ಎಚ್ಚರಿಕೆ ವಹಿಸುತ್ತಿದೆ ಎಂದವರು ತಿಳಿಸಿದರು.

    ಶುಕ್ರವಾರ ಸಂಜೆ ಹಿಪ್ಪರಗಿ ಜಲಾಶಯಕ್ಕೆ ಒಟ್ಟು 97 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. 96 ಸಾವಿರ ಕ್ಯೂಸೆಕ್ ನೀರನ್ನು ಎಲ್ಲ 12 ಗೇಟುಗಳ ಮೂಲಕ ಹರಿ ಬಿಡಲಾಗುತ್ತಿದೆ. ಜಲಾಶಯದಲ್ಲಿ 521ಮೀ.ನೀರು ಇದೆ ಎಂದು ಹಿಪ್ಪರಗಿ ಜಲಾಶಯದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ವಿ . ಎಸ್. ನಾಯಕ ಪತ್ರಿಕೆಗೆ ತಿಳಿಸಿದರು.

    
    
    Community-verified icon

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts