ರವೀಂದ್ರ ಶೆಟ್ಟಿ ಬಳಂಜಗೆ ಬಹುಭಾಷಾ ವಲ್ಲಭ ಪ್ರಶಸ್ತಿ

Bel_Farewell
Published on

ಬೆಳ್ತಂಗಡಿ: ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್‌ನ ಪ್ರಬಂಧಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ರವೀಂದ್ರ ಶೆಟ್ಟಿ ಬಳಂಜ ದಂಪತಿಯನ್ನು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಬೆಳ್ತಂಗಡಿ ಘಟಕ ವತಿಯಿಂದ ಗೌರವಿಸಲಾಯಿತು.

20ನೇ ವಯಸ್ಸಿನಲ್ಲೇ ಬ್ಯಾಂಕ್‌ನ ಸಿಬ್ಬಂದಿಯಾಗಿ ಸೇರ್ಪಡೆಗೊಂಡು 40 ವರ್ಷ ವಿವಿಧ ಶಾಖೆಗಳಲ್ಲಿ ಸೇವೆ ಸಲ್ಲಿಸಿ, ಪ್ರಬಂಧಕರಾಗಿ ಭಡ್ತಿ ಹೊಂದಿದ್ದನ್ನು ಗುರುತಿಸಿ, ಬಹುಭಾಷಾ ವಲ್ಲಭ ಪ್ರಶಸ್ತಿ ಪ್ರದಾನಿಸಲಾಯಿತು.

ರವೀಂದ್ರ ಶೆಟ್ಟಿ ದಂಪತಿಯನ್ನು ವಿ.ಪ. ಸದಸ್ಯ ಎಸ್.ಎಲ್.ಭೋಜೇಗೌಡ ಗೌರವಿಸಿದರು. ಪ್ರೌಢಶಾಲಾ ಸಹಶಿಕ್ಷಕರ ಸಂಘ ಬೆಳ್ತಂಗಡಿ ಘಟಕದ ಅಧ್ಯಕ್ಷ ರಾಧಾಕೃಷ್ಣ ತಚ್ಚಮೆ ಅಧ್ಯಕ್ಷತೆ ವಹಿಸಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಸಮನ್ವಯಾಧಿಕಾರಿ ಮೋಹನ್, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಹಮ್ಮದ್ ರಿಯಾಜ್, ದ ಕ. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಭುವನೇಶ್ ಜೆ, ತಾಲೂಕು ಘಟಕದ ಅಧ್ಯಕ್ಷ ಕಿಶೋರ್ ಕುಮಾರ್, ಲಿಪಿಕಾ ನೌಕರರ ಸಂಘದ ಅಧ್ಯಕ್ಷ ಶಿವಶಂಕರ್, ಬಂಟ್ವಾಳ ಘಟಕದ ಅಧ್ಯಕ್ಷ ಜೋಯೆಲ್ ಉಪಸ್ಥಿತರಿದ್ದರು.

ಕೃಷ್ಣ ಆಚಾರ್ ಸನ್ಮಾನ ಪತ್ರ ವಾಚಿಸಿದರು. ಕಾರ್ಯದರ್ಶಿ ಶಿವಪುತ್ರ ಸುಣಗಾರ ಸ್ವಾಗತಿಸಿದರು. ಕೋಶಾಧಿಕಾರಿ ಶಿವಬಾಳು ವಂದಿಸಿದರು. ಶಿಕ್ಷಕ ಸುಧಾಕರ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net