ರೇಸ್​ ಕೋರ್ಸ್​ ರಸ್ತೆ ಇನ್ನು ಮುಂದೆ ಅಂಬರೀಶ್​ ರಸ್ತೆ; ನಾಮಫಲಕ ಅನಾವರಣಗೊಳಿಸಿದ ಸಿಎಂ

blank

ಬೆಂಗಳೂರು: ನಗರದ ರೇಸ್​ ಕೋರ್ಸ್​ ರಸ್ತೆಗೆ ಕನ್ನಡದ ಖ್ಯಾತ ನಟ ಮತ್ತು ರಾಜಕಾರಿಣಿ ಅಂಬರೀಶ್​ ಅವರ ಹೆಸರನ್ನು ಇಡಲಾಗಿದ್ದು, ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಮಫಲಕ ಅನಾವರಣಗೊಳಿಸಿದ್ದಾರೆ.

ಇದನ್ನೂ ಓದಿ: ನಾಯಕಿಯಾದ ವೀರಪ್ಪನ್​ ಮಗಳು; ‘ಮಾವೀರನ್​ ಪಿಳ್ಳೈ’ ಚಿತ್ರದಲ್ಲಿ ನಟನೆ

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ‘ಕರ್ನಾಟಕದ ಎಲ್ಲರ ಮನಸ್ಸನ್ನ ಗೆದ್ದಂತಹ ನೇರ ದಿಟ್ಟ ನಿರಂತರ ನಟ ಅಂಬರೀಶ್​. ಅವರ ನೆನಪಿಗಾಗಿ ಇಂದು ರೇಸ್ ಕೋರ್ಸ್ ರಸ್ತೆಯನ್ನು ಅಂಬರೀಶ್ ಅವರ ಹೆಸರಿನಲ್ಲಿ ಅತ್ಯಂತ ಸಂತೋಷದಿಂದ ನಾಮಕರಣ ಮಾಡಿದ್ದೇವೆ. ಇದು ಅವರು ಹೆಚ್ಚು ಓಡಾಡಿದ ಸ್ಥಳ. ಎಲ್ಲಾ ಅಭಿಮಾನಿಗಳ ಒತ್ತಾಸೆಯ ಮೇರೆಗೆ ಈ ರಸ್ತೆಗೆ ಅವರ ಹೆಸರನ್ನ ಇಟ್ಟಿದ್ದೇವೆ’ ಎಂದು ಹೇಳಿದರು.

ಅಂಬರೀಶ್​ ಅವರದ್ದು ಬಹುಮುಖ ವ್ಯಕ್ತಿತ್ವ ಎಂದು ಕೊಂಡಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ‘ಅಂಬರೀಶ್​ ಅವರು ಸಿನಿಮಾದಲ್ಲಿ ಸಹಜವಾಗಿ ನಟನೆ ಮಾಡುತ್ತಿದ್ದರು. ಜನರನ್ನು ಹಿಡಿದಿಟ್ಟುಕೊಳ್ಳುವ ವ್ಯಕ್ತಿತ್ವ ಇತ್ತು. ರೀಲ್ ಅಂಡ್ ರಿಯಲ್ ಲೈಫ್ನಲ್ಲಿ ಒಂದೇ ತರಹ ಇದ್ದರು. ಅವರದ್ದು ನೇರ ವ್ಯಕ್ತಿತ್ವ. ಸಾರ್ವಜನಿಕ ಜೀವನಕ್ಕೆ ಬಂದಮೇಲೆ ವಸತಿ ಸಚಿವರಾಗಿ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ. ಕಾವೇರಿ ವಿಚಾರ ಬಂದಾಗ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟರು. ಅಧಿಕಾರ ಅವರನ್ನ ಹುಡುಕಿಕೊಂಡು ಬರುತ್ತಿತ್ತು. ಅವರು ಯಾವತ್ತು ಅಧಿಕಾರದ ಹಿಂದೆ ಹೋಗಲಿಲ್ಲ. ಅವರು ನನಗೆ ಬಹಳ ಒಳ್ಳೆಯ ಗೆಳೆಯರಾಗಿದ್ದರು. ಅವರ ಜೀವನ ಒಂದು ತೆರೆದ ಪುಸ್ತಕವಾಗಿತ್ತು’ ಎಂದು ಬಣ್ಣಿಸಿದರು.

ಇದನ್ನೂ ಓದಿ: ‘ಗೇಮ್​ ಚೇಂಜರ್​’ ಆದ ರಾಮ್​ಚರಣ್​ ತೇಜ; ಸಂಕ್ರಾಂತಿಗೆ ಚಿತ್ರ ಬಿಡುಗಡೆ ಸಾಧ್ಯತೆ

ಅಂಬರೀಶ್​ ಅವರ ಹೆಸರನ್ನು ಬಿಟ್ಟರೆ ಬೇರೆ ಯಾರ ಹೆಸರು ಸಹ ಈ ರಸ್ತೆಗೆ ಸೂಕ್ತವಲ್ಲ ಎಂದ ಮುಖ್ಯಮಂತ್ರಿ ಬೊಮ್ಮಾಯಿ, ‘ಹಲವಾರು ಬಾರಿ ಬೇಟಿಯಾಗಬೇಕು ಅಂದಾಗ, ಇಲ್ಲೇ ರೇಸ್​ ಕೋರ್ಸ್​ನಲ್ಲೇ ಇರುತ್ತೀನಿ ಬಾರಯ್ಯ ಎನ್ನುತ್ತಿದ್ದರು. ಅವರ ಹೆಸರನ್ನು ಬಿಟ್ಟು ಬೇರೆ ಯಾರ ಹೆಸರು ಕೂಡ ಈ ರಸ್ತೆಗೆ ಸೂಕ್ತವಲ್ಲ. ಅವರ ಸ್ಮಾರಕ ಕೂಡ ಉದ್ಘಾಟನೆ ಮಾಡುತ್ತೇವೆ. ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ’ ಎಂದು ಹಾರೈಸಿದರು.

VIDEO| 10 ಕೋಟಿ ರೂ. ಮೌಲ್ಯದ ಕಾರು ಖರೀದಿಸಿದ ನಟ ಶಾರುಖ್ ಖಾನ್!

Share This Article

ನಿಮ್ಮ ಮಕ್ಕಳನ್ನು ಸ್ಮಾರ್ಟ್‌ಫೋನ್‌ಗಳಿಂದ ದೂರವಿಡುವುದು ಹೇಗೆ? Child Care Tips

Child Care Tips: ನೀವು ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಮೊಬೈಲ್ ಫೋನ್ ಕೊಡಬಾರದು. ನಿಮ್ಮ ಮಗು ನಿಮ್ಮೊಂದಿಗೆ…

ಈ 3 ರಾಶಿಯ ಮಹಿಳೆಯರು ಹುಟ್ಟಿನಿಂದಲೇ ಅಪಾರ ಬುದ್ಧಿಶಕ್ತಿ ಹೊಂದಿರುತ್ತಾರಂತೆ! ನಿಮ್ಮದೂ ಇದೇ ರಾಶಿನಾ? Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ಯಾವ ರಾಶಿಚಕ್ರ ಮತ್ತು ನಕ್ಷತ್ರದಲ್ಲಿ…

ಬೇಸಿಗೆ ತಂಪಾಗಿರಲು ಹಾಲು ಹಾಕದ ಮಿಲ್ಕ್ ಶೇಕ್

ಬೇಸಿಗೆಯಲ್ಲೂ ನಮ್ಮನ್ನು ತಂಪಾಗಿಟ್ಟು, ಸಾಮಾನ್ಯವಾಗಿ ಆಗುವ ಸುಸ್ತನ್ನು ಕಡಿಮೆ ಮಾಡುವ ವಿಶೇಷ ಮಿಲ್ಕ್ ಶೇಕ್ ಬಗ್ಗೆ…