More

    ರಸಪ್ರಶ್ನೆ ಸ್ಪರ್ಧೆಯಲ್ಲಿ ರಚನ್‌ಗೌಡ ರಾಜ್ಯಕ್ಕೆ ಪ್ರಥಮ

    ಪಾಂಡವಪುರ: ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ಕಾರ್ಯಕ್ರಮ ಅಡಿಯಲ್ಲಿ ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಆಯೋಜಿಸಿದ್ದ ರಾಜ್ಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮೈಸೂರು ವಿಭಾಗ ಪ್ರಥಮ ಸ್ಥಾನ ಪಡೆದುಕೊಂಡಿದೆ.

    ತಾಲೂಕಿನ ಟಿ.ಎಸ್.ಛತ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಎಂ.ಎನ್.ರಚನ್‌ಗೌಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಆಸ್ತಿಕ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜೇತರಿಗೆ 38 ಸಾವಿರ ರೂ. ನಗದು ಹಾಗೂ ಪಾರಿತೋಷಕ ಲಭಿಸಿದೆ. ತಾಲೂಕಿಗೆ ಗೌರವ ತಂದುಕೊಟ್ಟ ರಚನ್‌ಗೌಡಗೆ ಶಿಕ್ಷಕರ ವರ್ಗ ಅಭಿನಂದಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts