ಅಭಿಷೇಕ್ ಅಂಬರೀಶ್​ಗೆ ರಚಿತಾ ರಾಮ್​ ನಾಯಕಿ

Rachitha
Published on

ಬೆಂಗಳೂರು: ಅಭಿಷೇಕ್ ಅಂಬರೀಶ್ ಅಭಿನಯದ ಮೊದಲ ಚಿತ್ರ ‘ಅಮರ್’ನಲ್ಲಿ ರಚಿತಾ ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದು ನೆನಪಿರಬಹುದು. ಈಗ ಅಭಿ ಅಭಿನಯದ ಎರಡನೆಯ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ‘ಬ್ಯಾಡ್ ಮ್ಯಾನರ್ಸ್’ ಚಿತ್ರ ಪ್ರಾರಂಭವಾಗಿ ಒಂದು ತಿಂಗಳಾದರೂ, ಅಭಿಷೇಕ್ ಬಿಟ್ಟರೆ ಬೇರೆ ಯಾರೆಲ್ಲಾ ಇರುತ್ತಾರೆ ಎಂಬ ರಹಸ್ಯವನ್ನು ಚಿತ್ರತಂಡದವರು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದಾರೆ ಎಂದು ಹೇಳಲಾಗಿದ್ದು, ರಚಿತಾ ರಾಮ್ ಮತ್ತು ಪ್ರಿಯಾಂಕಾ ನಾಯಕಿಯರಾಗಿ ಆಯ್ಕೆಯಾಗಿದ್ದಾರೆ.

ರಚಿತಾ ರಾಮ್ ಗೊತ್ತಿದೆ, ಈ ಪ್ರಿಯಾಂಕಾ ಯಾರು ಎಂಬ ಪ್ರಶ್ನೆ ಸಹಜವಾಗಿಯೇ ಬರಬಹುದು. ಪ್ರಿಯಾಂಕಾ ಮೂಲತಃ ಮೈಸೂರಿನವರಂತೆ. ಆದರೆ, ಇದುವರೆಗೂ ಅವರು ಹೆಚ್ಚಾಗಿ ತಮಿಳು ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದು, ಇದೇ ಮೊದಲ ಬಾರಿಗೆ ‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದೆ. ಕಳೆದ ತಿಂಗಳೇ ಚಿತ್ರದ ಮುಹೂರ್ತವಾಗಿ, ಮಂಡ್ಯದಲ್ಲಿ ಒಂದು ಹಂತದ ಚಿತ್ರೀಕರಣ ಸಹ ಆಗಿತ್ತು. ಇದೀಗ ಎರಡನೇ ಹಂತದ ಚಿತ್ರೀಕರಣ ಫೆಬ್ರವರಿ 15ರಿಂದ ಬೆಂಗಳೂರಿನಲ್ಲಿ ನಡೆಯಲಿದೆ. ಹಲವು ಪ್ರಮುಖ ದೃಶ್ಯಗಳು ಮತ್ತು ಫೈಟ್ ದೃಶ್ಯಗಳ ಚಿತ್ರೀಕರಣ ನಡೆಯಲಿದ್ದು, ರಚಿತಾ ಮತ್ತು ಪ್ರಿಯಾಂಕಾ ಸಹ ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದಾರೆ ಎನ್ನಲಾಗಿದೆ. ಸೂರಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ, ಮಾಸ್ತಿ ಮಂಜು ಸಂಭಾಷಣೆ ರಚಿಸುತ್ತಿದ್ದಾರೆ. ಚರಣ್​ರಾಜ್ ಸಂಗೀತ ಸಂಯೋಜಿಸುತ್ತಿದ್ದು, ಈ ಹಿಂದೆ ‘ಪಾಪ್​ಕಾರ್ನ್ ಮಂಕಿ ಟೈಗರ್’ ಚಿತ್ರವನ್ನು ನಿರ್ವಿುಸಿದ್ದ ಸುಧೀರ್, ಈ ಚಿತ್ರವನ್ನು ಸಹ ನಿರ್ವಿುಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net