ಅಬ್ಬಕ್ಕ ಬಲಿದಾನ ಮಹಿಳೆಯರಿಗೆ ಸ್ಫೂರ್ತಿ : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್‌ದಾಸ್ ಬಣ್ಣನೆ

New Project (27)
Published on

ವಿಜಯವಾಣಿ ಸುದ್ದಿಜಾಲ ಉಳ್ಳಾಲ

ಅಬ್ಬಕ್ಕಳ 500ನೇ ಜನ್ಮ ವರ್ಷಾಚರಣೆ ಸಂದರ್ಭ ಆಕೆಯ ಪುತ್ಥಳಿಗೆ ಮಾಲಾರ್ಪಣೆ ಮಾಡಿರುವುದು ಸಂತಸ ನೀಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಹೇಳಿದರು.

ಉಳ್ಳಾಲಕ್ಕೆ ಬುಧವಾರ ಭೇಟಿ ನೀಡಿ ರಾಣಿ ಅಬ್ಬಕ್ಕಳ ಪುತ್ಥಳಿಗೆ ಹಾರಾರ್ಪಣೆ ಮಾಡಿದ ಬಳಿಕ ಮಾತನಾಡಿ, ತಮ್ಮೊಳಗೆ ರಾಣಿ ಅಬ್ಬಕ್ಕಳನ್ನು ಕಾಣುವ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯರು ಸಧೃಢ ರಾಷ್ಟ್ರ ನಿರ್ಮಾಣ ನಿಟ್ಟಿನಲ್ಲಿ ಕೊಡುಗೆ ನೀಡುತ್ತಾ ಬಂದಿದ್ದಾರೆ. ರಾಣಿ ಅಬ್ಬಕ್ಕಳ ಬಲಿದಾನ ಬಿಜೆಪಿ ಮಹಿಳಾಮೋರ್ಚಾ ಕಾರ್ಯಕರ್ತೆಯರಿಗೆ ಸ್ಫೂರ್ತಿ, ಪ್ರೇರಣೆಯಾಗಲಿ ಎಂದರು.

ಬಿಜೆಪಿಯ ಹಿರಿಯ ಮುಖಂಡರಾದ ಸೀತಾರಾಮ ಬಂಗೇರ ಮತ್ತು ಲಲಿತಾ ಸುಂದರ್ ಅವರನ್ನು ಸನ್ಮಾನಿಸಲಾಯಿತು.

ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಪಾಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಪೂಜಾ ಪೈ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಡಾ.ಮಂಜುಳಾ ರಾವ್, ಮಂಡಲ ಅಧ್ಯಕ್ಷೆ ಮಾಧವಿ ಉಳ್ಳಾಲ್, ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಉಪಾಧ್ಯಕ್ಷ ನಿಶಾಂತ್ ಪೂಜಾರಿ, ಮೀನುಗಾರ ಪ್ರಕೋಷ್ಠದ ರಾಜ್ಯ ಸಹಸಂಚಾಲಕ ಯಶವಂತ ಅಮೀನ್, ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷರಾದ ಜಗದೀಶ್ ಆಳ್ವ ಕೂವೆತ್ತಬೈಲು, ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ, ಸುಮನಾ ಹರೀಶ್ ಶೆಟ್ಟಿ, ಸುರೇಶ್ ಆಳ್ವ ಸಾಂತ್ಯಗುತ್ತು, ಯಶವಂತ ದೇರಾಜೆ, ಪ್ರಧಾನ ಕಾರ್ಯದರ್ಶಿಗಳಾದ ದಯಾನಂದ ತೊಕ್ಕೊಟ್ಟು, ಮೋಹನ್ ರಾಜ್ ಕೆ.ಆರ್, ಯುವಮೋರ್ಚಾ ಮಂಡಲ ಅಧ್ಯಕ್ಷ ಮುರಳಿ ಕೊಣಾಜೆ, ಜಿ.ಪಂ.ಮಾಜಿ ಸದಸ್ಯೆ ಧನಲಕ್ಷ್ಮೀ ಗಟ್ಟಿ, ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರು, ಚಂದ್ರಶೇಖರ ಉಚ್ಚಿಲ್, ಜಗದೀಶ್ ಶೇಣವ, ಜೀವನ್ ಕುಮಾರು ತೊಕ್ಕೊಟ್ಟು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net