21 C
Bengaluru
Wednesday, January 22, 2020

ಲವ್​ಸ್ಟೋರಿಯಲ್ಲಿ ರಾಧಿಕಾ ನಾಯಕಿ?

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಬೆಂಗಳೂರು: ‘ಮನೆ ಮಾರಾಟಕ್ಕಿದೆ’ ಚಿತ್ರದ ಮೂಲಕ ಗೆಲುವಿನ ನಗೆ ಬೀರಿರುವ ನಿರ್ದೇಶಕ ಮಂಜು ಸ್ವರಾಜ್, ಹೊಸ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ‘ದಮಯಂತಿ’ ಚಿತ್ರದ ಮೂಲಕ ಕಂಬ್ಯಾಕ್ ಮಾಡಿ ಯಶಸ್ಸು ಕಂಡಿರುವ ರಾಧಿಕಾ ಕುಮಾರಸ್ವಾಮಿ ಅದರಲ್ಲಿ ನಾಯಕಿ ಅಂತೆ!

ಹೌದು, ಹೀಗೊಂದು ಸುದ್ದಿ ಸದ್ಯ ಗಾಂಧಿನಗರದಲ್ಲಿ ಸದ್ದು ಮಾಡುತ್ತಿದೆ. ಪಕ್ಕಾ ಕಮರ್ಷಿಯಲ್ ಶೈಲಿಯ ಸಿನಿಮಾ ಇದಾಗಿರಲಿದ್ದು, ರಾಧಿಕಾ ಮತ್ತೆ ಹಳೇ ಅವತಾರದಲ್ಲಿ, ಮುದ್ದು ಮುಖದೊಂದಿಗೆ ಎದುರಾಗಲಿದ್ದಾರಂತೆ. ಅಂದರೆ, ನಾಯಕಿಯಾಗಿ ತೆರೆಮೇಲೆ ಮಿಂಚಲಿದ್ದು, ಲವ್​ಸ್ಟೋರಿ, ಸೆಂಟಿಮೆಂಟ್, ಕಾಮಿಡಿ ಹೀಗೆ ಎಲ್ಲ ಅಂಶಗಳಿರುವ ಕಥೆಯನ್ನು ಹಿಡಿದು ಆಗಮಿಸಲು ಸಿದ್ಧತೆ ನಡೆಸಿದ್ದಾರೆ.

ರಾಧಿಕಾ ಕುಮಾರಸ್ವಾಮಿ ಹೋಮ್ ಬ್ಯಾನರ್ ‘ಶಮಿಕಾ ಎಂಟರ್​ಪ್ರೖೆಸಸ್’ ಅಡಿಯಲ್ಲಿ ಇನ್ನೂ ಶೀರ್ಷಿಕೆ ಅಂತಿಮವಾಗದ ಈ ಚಿತ್ರ ನಿರ್ವಣವಾಗಲಿದೆ. ಸಿನಿಮಾಗೆ ಸಂಬಂಧಿಸಿದಂತೆ ನಿರ್ದೇಶಕ ಮಂಜು ಮತ್ತು ರಾಧಿಕಾ ನಡುವೆ ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆದಿದ್ದು, ಚಿತ್ರದ ಒಂದೆಳೆ ಕೇಳಿ ನಟಿಸಲು ಮೌಖಿಕವಾಗಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂಬುದು ಕೆಲ ಮೂಲಗಳ ಮಾಹಿತಿ.

ಸದ್ಯ ‘ದಮಯಂತಿ’ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿರುವುದರಿಂದ ಅದರ ಪ್ರಚಾರ ಕೆಲಸಗಳಲ್ಲಿ ರಾಧಿಕಾ ಬಿಜಿಯಾಗಿದ್ದಾರೆ. ‘ಭೈರಾದೇವಿ’ ಚಿತ್ರ ನಿರ್ವಣದ ಜತೆಗೆ ಕಥಾನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಆ ಚಿತ್ರದ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳೂ ನಡೆಯುತ್ತಿವೆ. ಅಲ್ಲಿ ಕಾಳಿ ಮತ್ತು ಅಘೋರಿ ಅವತಾರದಲ್ಲಿ ರಾಧಿಕಾ ಕಾಣಿಸಿಕೊಂಡಿದ್ದು, ಅವರ ಲುಕ್ ಸಿನಿಮಾ ಮೇಲಿನ ನಿರೀಕ್ಷೆಯನ್ನು ಈಗಾಗಲೇ ಇಮ್ಮಡಿಗೊಳಿಸಿದೆ.

ರವಿಚಂದ್ರನ್ ಜತೆಗಿನ ‘ರಾಜೇಂದ್ರ ಪೊನ್ನಪ್ಪ’ ಸೇರಿ ಹಲವು ಸಿನಿಮಾಗಳಲ್ಲಿ ರಾಧಿಕಾ ತೊಡಗಿಸಿಕೊಂಡಿದ್ದಾರೆ. ಇದೆಲ್ಲದರ ಜತೆಗೆ ಮಂಜು ಸ್ವರಾಜ್ ಜತೆ ಸಿನಿಮಾ ಮಾಡುವುದು ಅಧಿಕೃತವಾದರೆ, 2020ರ ಆರಂಭಕ್ಕೆ ಅಧಿಕೃತ ಘೋಷಣೆ ಮಾಡಲಿದೆಯಂತೆ ಚಿತ್ರತಂಡ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...