ಚಳಿ, ಕೇಕ್ ಮತ್ತು ಮುದ್ದಾಟ; ವಿದೇಶದಲ್ಲಿ ಬರ್ತಡೇ ಆಚರಿಸಿಕೊಂಡ ರಾಧಿಕಾ ಪಂಡಿತ್

radhikapandit
Published on

ಬೆಂಗಳೂರು: ಸ್ಯಾಂಡಲ್​ವುಡ್​​ ನಟಿ ರಾಧಿಕಾ ಪಂಡಿತ್​ 39ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ವಿದೇಶದಲ್ಲಿ ಸೆಲೆಬ್ರೆಟ್​​​​ ಮಾಡಿದ್ದು, ಇನ್‌ಸ್ಟಾಗ್ರಾಂ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿಕೊಂಡಿದ್ದಾರೆ.

ರಾಧಿಕಾ ಪಂಡಿತ್ ಬಿಳಿ ಬಣ್ಣದ ಹೈನೆಕ್ ಡ್ರೆಸ್ ಧರಿಸಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಯಶ್ ಹಾಗೂ ಮಗಳು ಐರಾ ಹಾಗೂ ಯಥರ್ವ್ ಜೊತೆ ಕೇಕ್ ಕಟ್ ಮಾಡಿದ್ದಾರೆ. ರಾಧಿಕಾ ಪಂಡಿತ್ ಅವರ ತಾಯಿ ಹಾಗೂ ತಂದೆ ಕೂಡಾ ಮಗಳ ಬರ್ತ್​ಡೇ ಆಚರಣೆಯಲ್ಲಿ ಜೊತೆಯಾಗಿದ್ದಾರೆ. ಈ ಫೋಟೋಗೆ ಚಳಿ, ಕೇಕ್ ಮತ್ತು ಮುದ್ದಾಟ ಎಂದು ಕ್ಯಾಪ್ಶನ್ ಕೊಟ್ಟು ಸೋಶಿಯಲ್​​ ಮೀಡಿಯಾದಲ್ಲಿ ಶೇರ್​​ ಮಾಡಿದ್ದಾರೆ.

ರಾಧಿಕಾ ಅವರು ತಮ್ಮ ಬರ್ತ್​ಡೇ ಸೆಲೆಬ್ರೇಷನ್​ಗೆ ಯಾವುದೋ ಚಳಿ ಪ್ರದೇಶಕ್ಕೆ ಹೋಗಿದ್ದಾರೆ ಎನಿಸುತ್ತದೆ. ತಮ್ಮ ನೆಚ್ಚಿನ ನಟಿಗೆ ಅಭಿಮಾನಿಗಳು ಸೋಶಿಯಲ್​ ಮೀಡಿಯಾ ಮೂಲಕ ಹುಟ್ಟುಹಬ್ಬದ ಶುಭಾಷಯ ತಿಳಿಸುತ್ತಿದ್ದಾರೆ.

ಕೆಲವು ದಿನಗಳ ಹಿಂಧೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಹೀಗಾಗಿ ಇನ್‌ಸ್ಟಾಗ್ರಾಂನಲ್ಲಿ ಅಭಿಮಾನಿಗಳು ತಮ್ಮಿಷ್ಟದ ಪ್ರಶ್ನೆಗಳನ್ನು ಕೇಳಿ ಅದಕ್ಕೆ ಉತ್ತರಿಸುವೆ ಎಂದು ಹೇಳಿದ್ದರು. ಅಭಿಮಾನಿಗಳ ಕೆಲವು ಪ್ರಶ್ನೆಗಳಿಗೆ ಉತ್ತರವನ್ನು ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net