ಮಂಗಳೂರಿನಲ್ಲಿ ರ‍್ಯಾಗಿಂಗ್: ಒಂದೇ ಕಾಲೇಜಿನ 11 ವಿದ್ಯಾರ್ಥಿಗಳು ಅರೆಸ್ಟ್

ಮಂಗಳೂರು: ಶಾಲಾ-ಕಾಲೇಜುಗಳಲ್ಲಿ ರ‍್ಯಾಗಿಂಗ್ ಬ್ಯಾನ್​ ಆಗಿದ್ದು, ನಿಯಮ ಉಲ್ಲಂಘಿಸುವ ಆರೋಪಿಗಳಿಗೆ ಶಿಕ್ಷೆ ತಪ್ಪಿದ್ದಲ್ಲ ಎಂಬ ಎಚ್ಚರಿಕೆ ಸಂದೇಶ ಪದೇಪದೆ ರವಾನೆಯಾಗುತ್ತಿದೆ. ಆದರೂ ಕೆಲ ಕಿಡಿಗೇಡಿಗಳು ಅದೇ ರಾಗ ಎಂಬಂತೆ ರ‍್ಯಾಗಿಂಗ್ ಮಾಡಲು ಹೋಗಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ನಗರ ಹೊರಹೊಲಯದಲ್ಲಿ ಸಂಭವಿಸಿದೆ. ಮಂಗಳೂರು ಹೊರವಲಯದ ದೇರಳಕಟ್ಟೆಯ ಕಣಚೂರು ಪಿಸಿಯೋಥೆರಪಿ ಮತ್ತು ನರ್ಸಿಂಗ್ ಕಾಲೇಜಿನಲ್ಲಿ ಕೆಲ ಸೀನಿಯರ್ ವಿದ್ಯಾರ್ಥಿಗಳು ರ‍್ಯಾಗಿಂಗ್ ಮಾಡುತ್ತಿರುವ ಬಗ್ಗೆ ಕಿರಿಯ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಗೆ ದೂರು ನೀಡಿದ್ದರು. ಇದನ್ನೂ ಓದಿರಿ … Continue reading ಮಂಗಳೂರಿನಲ್ಲಿ ರ‍್ಯಾಗಿಂಗ್: ಒಂದೇ ಕಾಲೇಜಿನ 11 ವಿದ್ಯಾರ್ಥಿಗಳು ಅರೆಸ್ಟ್