

ನವದೆಹಲಿ: 2023 ಸೆಪ್ಟೆಂಬರ್ 24ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಹಾಗೂ ಎಎಪಿ ರಾಜ್ಯಸಭೆ ಸದಸ್ಯ ರಾಘವ್ ಚಡ್ಡಾ ಮದುವೆಯಾಗಿ ಇನ್ನೂ ಒಂದು ವರ್ಷ ಕಳೆದಿಲ್ಲ. ಇವರಿಬ್ಬರ ಅನ್ಯೋನ್ಯತೆ ಮೇಲೆ ಯಾರ ಕಣ್ಣು ಬಿತ್ತೋ ಗೊತ್ತಿಲ್ಲಾ ರಾಘವ್ ಚಡ್ಡಾ ಅವರು ತಮ್ಮ ದೃಷ್ಠಿಯನ್ನು ಸಂಪೂರ್ಣವಾಗಿ ಕಳೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಲಂಡನ್ನಲ್ಲಿ ವಿಟ್ರೆಕ್ಟಮಿ ಚಿಕಿತ್ಸೆಗೆ ಒಳಗಾಗಿರುವ ಸಂಸದ ರಾಘವ್ ಚಡ್ಡಾ ತೀವ್ರ ಕಣ್ಣಿನ ನೋವಿನಿಂದ ಬಳಲುತ್ತಿದ್ದು, ಅವರು ದೃಷ್ಠಿ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ. ಈ ಕುರಿತು ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಸೌರಭ್ ಭಾರದ್ವಾಜ್ ಪ್ರತಿಕ್ರಿಯಿಸಿದ್ದಾರೆ.
ರಾಘವ್ ಚಡ್ಡಾ ಅವರು ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಅವರು ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿಲ್ಲ. ಲಂಡನ್ನಲ್ಲಿ ಅವರು ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಸಮಸ್ಯೆ ಗಂಭೀರವಾಗಿದ್ದು, ಕಣ್ಣುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ಚೇತರಿಸಿಕೊಂಡ ಬಳಿಕ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಸಚಿವ ಸೌರಭ್ ಭಾರದ್ವಾಜ್ ತಿಳಿಸಿದ್ದಾರೆ.
ಇತ್ತ ರಾಘವ್ ಚಡ್ಡಾ ಅವರ ವಿಚಾರ ತಿಳಿಯುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಅವರು ಶೀಘ್ರ ಗುಣಮುಖರಾಗಲಿ ಎಂಧು ಹಾರೈಸಿದ್ದಾರೆ. ಇದೀಗ ಪತಿ ಕಣ್ಣಿನ ಸಮಸ್ಯೆ ಪರಿಣಿತಿ ಚೋಪ್ರಾರನ್ನು ಚಿಂತೆಗೀಡು ಮಾಡಿದ್ದು, ಹಲವರು ರಾಘವ್ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ.