More

    ರಾಘವೇಂದ್ರ ಬ್ಯಾಂಕ್ ಅವ್ಯವಹಾರ ತನಿಖೆಗೆ ಐಪಿಎಸ್ ಅಧಿಕಾರಿ ನೇಮಿಸಲು ಆದೇಶ

    ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಲಿಮಿಟೆಡ್‌ನ ಠೇವಣಿದಾರರ ಹಣ ದುರ್ಬಳಕೆ ಹಾಗೂ ಅವ್ಯವಹಾರ ಪ್ರಕರಣದ ತನಿಖೆಗೆ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ನಿಯೋಜಿಸುವಂತೆ ರಾಜ್ಯ ಪೊಲೀಸ್ ಮಾಹಾನಿರ್ದೇಶಕರಿಗೆ ಹೈಕೋರ್ಟ್ ನಿರ್ದೇಶಿಸಿದೆ.

    ಹಗರಣದ ತನಿಖೆಗೆ ಡಿಐಜಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಡಿಜಿಪಿಗೆ ನಿರ್ದೇಶಿಸುವಂತೆ ಕೋರಿ ಬಸವನಗುಡಿ ನಿವಾಸಿ ಕೆ.ಆರ್. ನರಸಿಂಹಮೂರ್ತಿ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.

    ಇದನ್ನೂ ಓದಿ ಜ್ವರ, ಕೆಮ್ಮು ಮಾತ್ರವಲ್ಲ, ಇವು ಕೂಡ ಕರೊನಾ ಲಕ್ಷಣಗಳು…! ಪರೀಕ್ಷಿಸಿಕೊಳ್ಳಿ

    ವಿಚಾರಣೆ ವೇಳೆ, ಇಷ್ಟು ದೊಡ್ಡ ಮಟ್ಟದ ಹಗರಣ ನಡೆದಿರುವಾಗ ಕೇವಲ 4 ಎ್ಐಆರ್‌ಗಳನ್ನಷ್ಟೇ ದಾಖಲಿಸಲಾಗಿದೆ. ಪ್ರಕರಣದ ಸೂಕ್ತ ತನಿಖೆ ನಡೆದಿಲ್ಲವೆಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಬ್ಯಾಂಕ್, ಸೊಸೈಟಿ ಸೇರಿ ಎಲ್ಲರ ವಿರುದ್ಧವೂ ಸಮಗ್ರ ತನಿಖೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಪೀಠ, ಪ್ರಕರಣದ ತನಿಖೆಗೆ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ನೇಮಕ ಮಾಡುವಂತೆ ಡಿಜಿಪಿಗೆ ನಿರ್ದೇಶಿಸಿತು.

    ಇದೇ ವೇಳೆ, ಜಾರಿ ನಿರ್ದೇಶನಾಲಯ ಹಾಗೂ ಭ್ರಷ್ಟಾಚಾ ನಿಗ್ರಹ ದಳವನ್ನು (ಎಸಿಬಿ) ಪ್ರತಿವಾದಿಯನ್ನಾಗಿಸಲು ಅರ್ಜಿದಾರರಿಗೆ ಸೂಚಿಸಿದ ಪೀಠ, ಪ್ರಕರಣ ಸಂಬಂಧ ಈವರೆಗೆ ಕೈಗೊಂಡಿರುವ ಕ್ರಮಗಳ ಕುರಿತ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಇಡಿಗೆ ನಿರ್ದೇಶಿಸಿತು. ನ್ಯಾಯಾಲಯದ ಆದೇಶ ಅನುಪಾಲನಾ ವರದಿಯನ್ನು ಜೂ.23ರಂದು ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿ ಅರ್ಜಿ ವಿಚಾರಣೆ ಮುಂದೂಡಿತು.

    ಕಳೆದು ಹೋಗಿದ್ದ ಬಾಲಕ ಫೇಸ್‌ಬುಕ್‌ನಿಂದಾಗಿ ಮತ್ತೆ ಹೆತ್ತವರ ಮಡಿಲಿಗೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts