20.4 C
Bengaluru
Sunday, January 19, 2020

ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪನೆಗೆ ರಾಮಾಯಣ, ಮಹಾಭಾರತ, ಭಾಗವತಗಳೇ ಮೂಲಾಧಾರ: ಶ್ರೀ ರಾಘವೇಶ್ವರ ಸ್ವಾಮೀಜಿ

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ಬೆಂಗಳೂರು: ರಾಮಾಯಣ ಮಹಾಕಾವ್ಯ ಕಲ್ಪನೆಯಲ್ಲ, ಅದು ಇತಿಹಾಸ. ರಾಮಾಯಣ, ಮಹಾಭಾರತ ಹಾಗೂ ಭಾಗವತ ನಮ್ಮ ಭರತ ಸಂಸ್ಕೃತಿಯ ಮೂಲಾಧಾರ. ಈ ಮೂರನ್ನು ಮೂಲವಾಗಿಟ್ಟುಕೊಂಡು ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪಿಸಲಾಗುತ್ತಿದೆ ಎಂದು ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದ್ದಾರೆ.

ಭಾನುವಾರ ನಡೆದ ಧಾರಾ ರಾಮಾಯಣ ಪ್ರವಚನ ಮಹಾಮಂಗಲದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ರಾಮಾಯಣವೊಂದರಲ್ಲೇ ಭಾರತೀಯ ವಿದ್ಯೆಯ ಸಮಗ್ರ ಚಿತ್ರಣ ಸಿಗುತ್ತದೆ ಎಂದು ಹೇಳಿದರು.

ವಿಶ್ವವಿದ್ಯಾಪೀಠ ಸ್ಥಾಪನೆಯ ಮಹತ್ಕಾರ್ಯಕ್ಕಾಗಿ ಮಾಡಿದ ಸಂಕಲ್ಪಕ್ಕೆ ಶ್ರೀರಾಮನ ಅನುಗ್ರಹ ಸಿಕ್ಕಿದೆ. ಧಾರಾ ರಾಮಯಣದ ಮಂಗಲ, ವಿವಿವಿ ಸ್ಥಾಪನೆಯ ಮಹತ್ಕಾರ್ಯಕ್ಕೆ ನಾಂದಿಯಾಗುತ್ತದೆ. ಭಾರತಕ್ಕೆ ಭೂಷಣವಾಗುವ ರೀತಿಯಲ್ಲಿ ನಿರ್ಮಾಣವಾಗಲಿರುವ ವಿಶ್ವವಿದ್ಯಾಪೀಠ ತಕ್ಷಶಿಲೆಯ ಮಾದರಿಯಲ್ಲಿ ನಿಜ ಅರ್ಥದಲ್ಲಿ ವಿಶ್ವಕ್ಕೆ ಬೆಳಕು ಹರಿಸಲಿದೆ ಎಂದು ನುಡಿದರು.

ಇದಕ್ಕೂ ಮುನ್ನ ಬೆಳಿಗ್ಗೆ ಧಾರಾ ರಾಮಾಯಣ ಮಂಗಲ ಪ್ರವಚನ ಅನುಗ್ರಹಿಸಿದ ಶ್ರೀಗಳು, “ಇಂದು ಪ್ರಕೃತಿಯ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತವೆ. ಇದು ಕೊನೆಯಾಗಿ ಜೀವೋತ್ಕರ್ಷಕ್ಕೆ ಕಾರಣವಾಗುವ ಪುಣ್ಯ ಕಾರ್ಯ ಆಗಬೇಕು” ಎಂದು ಆಶಿಸಿದರು.

ಶಾಶ್ವತವಾದುದಕ್ಕಾಗಿ ಅಶಾಶ್ವತವನ್ನು ತ್ಯಾಗ ಮಾಡಬೇಕು. ಅಶೋಕವನಗಳು ಶೋಕವನ್ನು ಕಡಿಮೆ ಮಾಡುವ ವಿಶೇಷ ಶಕ್ತಿ ಹೊಂದಿವೆ. ಪ್ರಸ್ತುತ ವಿದ್ಯಮಾನಗಳ ಹಿನ್ನೆಲೆಯಲ್ಲಿ ಇಂಥ ಅಶೋಕವನಗಳಿಂದಷ್ಟೇ ಸಮಾಜದ ಅಶಾಂತಿ ಕೊನೆಗೊಂಡು ಶಾಶ್ವತ ಶಾಂತಿ ಸಿಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಕರ್ತವ್ಯದಲ್ಲಿ ಪೂರ್ಣತೆಯನ್ನು ಕಾಣುವುದೇ ಶ್ರೀರಾಮ ನಮಗೆ ನೀಡಿದ ಆದರ್ಶ. ಯಾರಿಗೂ ನೋವು ಕೊಡದ ಆಡಳಿತವೇ ನಿಜವಾದ ರಾಮರಾಜ್ಯ. ರಾಮಾಯಣಕ್ಕೆ ಜೀವಗಳ ಪಾಪ ಕಳೆಯುವ ಅಪೂರ್ವ ಶಕ್ತಿ ಇದೆ ಎಂದು ಬಣ್ಣಿಸಿದರು.
ವಿಶೇಷ ಆಭ್ಯಾಗತರಾಗಿದ್ದ ಅರಳುಮಲ್ಲಿಗೆ ಪಾರ್ಥಸಾರಥಿ, “ವಿವಿವಿ ಸ್ಥಾಪನೆಯ ಮಹತ್ ಸಂಕಲ್ಪಕ್ಕೆ ಸಮಸ್ತ ಸಮಾಜ ಕೈಜೋಡಿಸಬೇಕು” ಎಂದು ಮನವಿ ಮಾಡಿದರು.

ವೈಭವದ ಪಟ್ಟಾಭಿಷೇಕ
ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಆರು ತಿಂಗಳಿಂದ ನಡೆಸುತ್ತಿದ್ದ ಧಾರಾ ರಾಮಾಯಣದ ಮಹಾಮಂಗಲ ಅಂಗವಾಗಿ ಶ್ರೀರಾಮ ಸಾಮ್ರಾಜ್ಯ ಪಟ್ಟಾಭಿಷೇಕ ಭಾನುವಾರ ಗಿರಿನಗರದ ರಾಮಾಶ್ರಮದಲ್ಲಿ ವೈಭವೋಪೇತವಾಗಿ ನಡೆಯಿತು.

ವಿಶಿಷ್ಟವಾಗಿ ಅಲಂಕೃತವಾದ ಸಿಂಹಾಸನದಲ್ಲಿ ಪಟ್ಟಾಭಿಷಿಕ್ತನಾದ ಶ್ರೀರಾಮ ಹಾಗೂ ಸೀತಾಮಾತೆಗೆ ಶ್ರೀಗಳು ನವರತ್ನಾಭಿಷೇಕ, ಸುವರ್ಣಾಭಿಷೇಕ ಮತ್ತು ರಜತಾಭಿಷೇಕ ಮಾಡುವ ಮೂಲಕ ಪಟ್ಟಾಭಿಷೇಕ ನೆರವೇರಿಸಿದರು. ಬಳಿಕ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ಶ್ರೀರಾಮನಿಗೆ ಕಪ್ಪಕಾಣಿಕೆ ಸಲ್ಲಿಸಿ ಕೃತಾರ್ಥರಾದರು.

ಶ್ರೀಮಠದ ಶಿಷ್ಯಭಕ್ತರು ಅಮೂಲ್ಯ ನವರತ್ನ, ಆಭರಣ ಸೇರಿ 75ಕ್ಕೂ ಹೆಚ್ಚು ವಿವಿಧ ಸುವಸ್ತುಗಳನ್ನು ಹಾಗೂ ಕಾಣಿಕೆಗಳನ್ನು ಸಮರ್ಪಿಸಿದರು. ಪಟ್ಟಾಭಿಷೇಕ ಸಂದರ್ಭದಲ್ಲಿ ಸಂಗೀತ ಸೇವೆ, ನೃತ್ಯಸೇವೆ, ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವೇದ ಮಂತ್ರಘೋಷ ಹಾಗೂ ಅಷ್ಟಾವಧಾನ ಸೇವೆ ನೆರವೇರಿತು.

ಶ್ರೀಮಠದ ಆಚಾರ ವಿಚಾರ ಪುರೋಹಿತರಾದ ಗಜಾನನ ಭಟ್ ನೇತೃತ್ವದಲ್ಲಿ ಶ್ರೀರಾಮ ಪಟ್ಟಾಭಿಷೇಕದ ಧಾರ್ಮಿಕ ವಿಧಿಗಳು ನಡೆದವು.

ಧಾರಾ ರಾಮಾಯಣದ 154 ಸಂಚಿಕೆಗಳ ಧ್ವನಿಮುದ್ರಿಕೆಯನ್ನು ಭಾರತೀ ಪ್ರಕಾಶನ ವತಿಯಿಂದ ಬಿಡುಗಡೆ ಮಾಡಲಾಯಿತು. ವಿದ್ವಾನ್ ರಾಘವೇಂದ್ರ ಭಟ್ ಕ್ಯಾದಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಧರ್ಮಕರ್ಮ ವಿಭಾಗದ ರಾಮಕೃಷ್ಣ ಭಟ್ ಕೂಟೇಲು ಮತ್ತಿತರರು ಉಪಸ್ಥಿತರಿದ್ದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...