More

    ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಭಾರತ ತಂಡದಲ್ಲಿ ಮೂವರು ಕನ್ನಡಿಗರು

    ಬೆಂಗಳೂರು: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಯುವ ವೇಗಿ ಪ್ರಸಿದ್ಧಕೃಷ್ಣ ಸಹಿತ ಮೂವರು ಕನ್ನಡಿಗರು ಸ್ಥಾನ ಸಂಪಾದಿಸಿದ್ದಾರೆ. ನಾಯಕ ವಿರಾಟ್ ಕೊಹ್ಲಿಗೆ ಮೊದಲ ಟೆಸ್ಟ್ ಪಂದ್ಯದಿಂದ ವಿಶ್ರಾಂತಿ ನೀಡಲಾಗಿದ್ದು, ಅಜಿಂಕ್ಯ ರಹಾನೆ ಹಂಗಾಮಿ ನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಕೊಹ್ಲಿ 2ನೇ ಟೆಸ್ಟ್‌ಗೆ ಮರಳಲಿದ್ದು, ತಂಡವನ್ನು ಮುನ್ನಡೆಸಲಿದ್ದಾರೆ. ಟಿ20 ತಂಡದ ಹೊಸ ನಾಯಕ ರೋಹಿತ್ ಶರ್ಮಗೆ ಟೆಸ್ಟ್ ಸರಣಿಯಿಂದ ಸಂಪೂರ್ಣ ವಿಶ್ರಾಂತಿ ನೀಡಲಾಗಿದೆ. ‘ದಿ ವಾಲ್’ ಖ್ಯಾತಿಯ ನೂತನ ಕೋಚ್ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಭಾರತ ತಂಡ ಆಡಲಿರುವ ಮೊದಲ ಟೆಸ್ಟ್ ಸರಣಿ ಇದಾಗಿರಲಿದೆ.

    ಕಿವೀಸ್ ವಿರುದ್ಧ ಮೊದಲ ಟೆಸ್ಟ್ ಕಾನ್ಪುರದಲ್ಲಿ ನವೆಂಬರ್ 25ರಿಂದ 29ರವರೆಗೆ ನಡೆಯಲಿದ್ದರೆ, 2ನೇ ಹಾಗೂ ಅಂತಿಮ ಟೆಸ್ಟ್ ಮುಂಬೈನಲ್ಲಿ ಡಿಸೆಂಬರ್ 3ರಿಂದ 7ರವರೆಗೆ ನಡೆಯಲಿದೆ. ಈ ಸರಣಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ 2ನೇ ಆವೃತ್ತಿಯ ಭಾಗವಾಗಿದ್ದು, ಕಳೆದ ಆವೃತ್ತಿಯ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳಲು ಭಾರತಕ್ಕೆ ಉತ್ತಮ ಅವಕಾಶವಾಗಿದೆ. ಟೆಸ್ಟ್ ಸರಣಿಗೆ ಮುನ್ನ ನ. 17ರಿಂದ ಜೈಪುರ, ರಾಂಚಿ, ಕೋಲ್ಕತದಲ್ಲಿ 3 ಟಿ20 ಪಂದ್ಯಗಳ ಸರಣಿ ನಡೆಯಲಿದೆ.

    ಸ್ಥಾನ ಕಾಯ್ದುಕೊಂಡ ಪ್ರಸಿದ್ಧಕೃಷ್ಣ
    ಕಳೆದ ಇಂಗ್ಲೆಂಡ್ ಪ್ರವಾಸದ ವೇಳೆ ಮೀಸಲು ಆಟಗಾರರಾಗಿ ಭಾರತ ಟೆಸ್ಟ್ ತಂಡದ ಜತೆ ತೆರಳಿದ್ದ ವೇಗಿ ಪ್ರಸಿದ್ಧಕೃಷ್ಣ ಬಳಿಕ 4ನೇ ಟೆಸ್ಟ್ ವೇಳೆ ಪ್ರಧಾನ ತಂಡದಲ್ಲಿ ಸ್ಥಾನ ಪಡೆದಿದ್ದರು. ಇದೀಗ ಅವರು ಟೆಸ್ಟ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ತಂಡದಲ್ಲಿರುವ ಮತ್ತಿಬ್ಬರು ಕನ್ನಡಿಗರು. ರೋಹಿತ್ ಗೈರಿನಲ್ಲಿ ರಾಹುಲ್‌ಗೆ ಮಯಾಂಕ್ ಅವರೇ ಆರಂಭಿಕ ಜತೆಗಾರರಾಗುವ ನಿರೀಕ್ಷೆ ಇದ್ದು, ಕೊಹ್ಲಿ ಗೈರಲ್ಲಿ ಶುಭಮಾನ್ ಗಿಲ್ ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ ಎನ್ನಲಾಗಿದೆ.

    ಟೆಸ್ಟ್ ತಂಡ: ಅಜಿಂಕ್ಯ ರಹಾನೆ (ನಾಯಕ), ಚೇತೇಶ್ವರ ಪೂಜಾರ (ಉಪನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಪ್ರಸಿದ್ಧಕೃಷ್ಣ, ಶುಭಮಾನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಾಹ (ವಿ.ಕೀ), ಕೆಎಸ್ ಭರತ್ (ವಿ.ಕೀ), ರವೀಂದ್ರ ಜಡೇಜಾ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮ, ಉಮೇಶ್ ಯಾದವ್, ಮೊಹಮದ್ ಸಿರಾಜ್. 2ನೇ ಟೆಸ್ಟ್‌ಗೆ ವಿರಾಟ್ ಕೊಹ್ಲಿ ವಾಪಸ್ ಮತ್ತು ತಂಡ ಮುನ್ನಡೆಸಲಿದ್ದಾರೆ.

    ಟಿ20 ವಿಶ್ವಕಪ್‌ನಲ್ಲಿ ಹೀರೋ ಆಗಿ ಮಿಂಚಿದ ರಗ್ಬಿ ಆಟಗಾರನ ಪುತ್ರ!

    ಕಿವೀಸ್ ಗೆದ್ದರೂ ಸಂಭ್ರಮಿಸಲಿಲ್ಲ ನೀಶಾಮ್, ಕಾರಣವೇನು ಗೊತ್ತೇ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts