More

    ಐಪಿಎಲ್‌ನತ್ತ ಕೋಚ್ ರಾಹುಲ್ ದ್ರಾವಿಡ್ ಚಿತ್ತ ?: ಫ್ರಾಂಚೈಸಿಯಿಂದ ಮೆಂಟರ್ ಹುದ್ದೆಯ ಆಫರ್

    ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಸೋಲಿನೊಂದಿಗೆ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ 2 ವರ್ಷಗಳ ಅವಧಿ ಕೊನೆಗೊಂಡಿದ್ದು, ಇನ್ನು ಹುದ್ದೆಯಲ್ಲಿ ಮುಂದುವರಿಯುವ ಸಾಧ್ಯತೆ ಕಡಿಮೆ ಎನ್ನಲಾಗಿದ್ದು, ಐಪಿಎಲ್ ್ರಾಂಚೈಸಿಯೊಂದಿಗೆ ಕಾರ್ಯನಿರ್ವಹಿಸಲು ದ್ರಾವಿಡ್ ಆಸಕ್ತಿ ತೋರಿದ್ದಾರೆ ಎನ್ನಲಾಗಿದೆ.

    ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಟೀಮ್ ಇಂಡಿಯಾ ತವರಿನ ದ್ವಿಪಕ್ಷೀಯ ಸರಣಿಗಳಲ್ಲಿ ಪ್ರಾಬಲ್ಯ ಸಾಧಿಸಿದರೂ, ಐಸಿಸಿ ಟೂರ್ನಿಗಳಲ್ಲಿ ಪ್ರಶಸ್ತಿ ಜಯಿಸುವಲ್ಲಿ ವಿಲವಾಗಿದೆ. ವಿಶ್ವಕಪ್ ಟೂರ್ನಿಯ ಪ್ರದರ್ಶನ ಬಳಿಕ ದ್ರಾವಿಡ್ ಅವರನ್ನು ಕೋಚ್ ಹುದ್ದೆಯಲ್ಲಿ ಮುಂದುವರಿಸಲು ಬಿಸಿಸಿಐ ಒಲವು ತೋರಿದರೂ, ಅವರು ಆಸಕ್ತಿ ಹೊಂದಿಲ್ಲ ಎನ್ನಲಾಗಿದೆ. ಇದರ ನಡುವೆಯೇ ದ್ರಾವಿಡ್ ಐಪಿಎಲ್ ್ರಾಂಚೈಸಿ ಲಖನೌ ಸೂಪರ್ ಜೈಂಟ್ಸ್ ತಂಡದೊಂದಿಗೆ ಮಾತುಕತೆ ನಡೆಸಿದ್ದು, ಗೌತಮ್ ಗಂಭೀರ್ ಅವರಿಂದ ತೆರವಾಗಿರುವ ಲಖನೌ ತಂಡದ ಮೆಂಟರ್ ಹುದ್ದೆಗೆ ನೇಮಕವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಹಾಗೂ ನಿರಂತರ ಪ್ರಯಾಣ, ವೈಯಕ್ತಿಕ ಕಾರಣಗಳಿಂದ ಕೋಚ್ ಆಗಿ ಮುಂದುವರಿಯಲು ದ್ರಾವಿಡ್ ನಿರಾಸಕ್ತಿ ಹೊಂದಿದ್ದಾರೆ.

    ಐಪಿಎಲ್‌ನಲ್ಲಿ ಆರ್‌ಸಿಬಿ ಹಾಗೂ ರಾಜಸ್ಥಾನ ರಾಯಲ್ ತಂಡವನ್ನು ಮುನ್ನಡೆಸಿರುವ ಅನುಭವ ಹೊಂದಿರುವ ರಾಹುಲ್ ದ್ರಾವಿಡ್, ರಾಜಸ್ಥಾನ ತಂಡದ ಮೆಂಟರ್ ಆಗಿ ಎರಡು ವರ್ಷ ಕಾರ್ಯನಿರ್ವಹಿಸಿದ್ದಾರೆ. ನಂತರ 2016 ಹಾಗೂ 17ರ ಐಪಿಎಲ್ ಆವೃತ್ತಿಯಲ್ಲಿ ಡೆಲ್ಲಿ ಡೆರ್‌ಡೆವಿಲ್ಸ್ ತಂಡದ ಮುಖ್ಯ ಕೋಚ್ ಆಗಿದ್ದರು.ರವಿಶಾಸಿ ಅವರ ಅವಧಿ ಮುಕ್ತಾಯದ ಬಳಿಕ ಬೆಂಗಳೂರಿನ ಎನ್‌ಸಿಎಗೆ ಮುಖ್ಯಸ್ಥರಾಗಿದ್ದ ದ್ರಾವಿಡ್ ಅವರಿಗೆ ಟೀಮ್ ಇಂಡಿಯಾ ಕೋಚ್ ಹುದ್ದೆ ವಹಿಸಿಕೊಳ್ಳುವಂತೆ ಆಗಿನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಷಾ ಮನವೊಲಿಸಿದ್ದರು. ಕೋಚ್ ಆಗಿ ಮುಂದುವರೆಯಲು ದ್ರಾವಿಡ್ ಸಮ್ಮತಿ ಸೂಚಿಸದಿದ್ದರೆ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಹೆಸರು ಮುಂಚೂಣಿಯಲ್ಲಿದ್ದು, ದಕ್ಷಿಣ ಆಫ್ರಿಕಾ ಪ್ರವಾಸ ವೇಳೆಗೆ ಟೀಮ್ ಇಂಡಿಯಾದ ಪೂರ್ಣ ಪ್ರಮಾಣದ ಕೋಚ್ ಆಗಿ ನೇಮಕವಾಗುವ ನಿರೀಕ್ಷೆ ಇದೆ.

    ಡಿಸೆಂಬರ್ ಮೊದಲ ವಾರದಲ್ಲಿ ನಾಯಕ ರೋಹಿತ್ ಶರ್ಮ, ರಾಹುಲ್ ದ್ರಾವಿಡ್ ಅವರೊಂದಿಗೆ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಮತ್ತು ಬಿಸಿಸಿಐ ಅಧಿಕಾರಿಗಳು ಸಭೆ ನಡೆಸುವ ಸಾಧ್ಯತೆಗಳಿವೆ. ಕೋಚ್ ಅವಧಿ ವಿಸ್ತರಣೆ ಬಗ್ಗೆ ರಾಹುಲ್ ದ್ರಾವಿಡ್ ಅವರಿಗೆ ಆಸಕ್ತಿಯಿಲ್ಲ ಎನ್ನಲಾಗಿದ್ದು, ಬಿಸಿಸಿಐ ಅವರ ಮನವೋಲಿಸಲು ವಿಲವಾದರೆ ಟೀಮ್ ಇಂಡಿಯಾಗೆ ನೂತನ ಕೋಚ್ ನೇಮಕವಾಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts