More

    ಕಾಂಗ್ರೆಸ್​​ ನಾಯಕ ರಾಹುಲ್​ ಗಾಂಧಿಗೆ ಬಿಗ್​ ಶಾಕ್​: ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹ

    ನವದೆಹಲಿ: 2019ರ ಮಾನಹಾನಿ ಪ್ರಕರಣದಲ್ಲಿ ರಾಹುಲ್​ ಗಾಂಧಿ ಅವರನ್ನು ಸೂರತ್​ ನ್ಯಾಯಾಲಯ ದೋಷಿ ಎಂದು ತೀರ್ಪು ಪ್ರಕಟಿಸಿದ ದಿನದ ಬೆನ್ನಲ್ಲೇ ರಾಹುಲ್​ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

    ಕೇರಳದ ವಯನಾಡು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಲೋಕಸಭಾ ಸದಸ್ಯ ರಾಹುಲ್​ ಗಾಂಧಿ ಅವರು 2019ರ ಮಾನಹಾನಿ ಪ್ರಕರಣದಲ್ಲಿ 2023ರ ಮಾರ್ಚ್​ 23ರಂದು ದೋಷಿ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಭಾರತದ ಸಂವಿಧಾನದ ಪ್ರಜಾಪ್ರತಿನಿಧಿ ಕಾಯಿದೆ 1951 ಸೆಕ್ಷನ್​ 8ರ ಆರ್ಟಿಕಲ್​ 102(1)(e) ಅಡಿಯಲ್ಲಿ ರಾಹುಲ್​ ಗಾಂಧಿ ಅವರನ್ನು ಲೋಕಸಭಾ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು ಲೋಕಸಭೆಯ ಕಾರ್ಯದರ್ಶಿ ನೋಟಿಫಿಕೇಶನ್​ನಲ್ಲಿ ಉಲ್ಲೇಖಸಿದ್ದಾರೆ.

    ಲೋಕಸಭಾ ಕಾರ್ಯದರ್ಶಿಯ ನೋಟಿಫಿಕೇಶನ್​ಗೆ ಕಾಂಗ್ರೆಸ್​ನ ಹಿರಿಯ ನಾಯಕ ಮನೀಶ್​ ತಿವಾರಿ ಅವರು ಪ್ರತಿಕ್ರಿಯೆ ನೀಡಿದ್ದು, ಅನರ್ಹಗೊಳಿಸಿರುವುದು ತಪ್ಪಾದ ನಿರ್ಧಾರ ಎಂದಿದ್ದಾರೆ. ಓರ್ವ ಸಂಸದನನ್ನು ಲೋಕಸಭಾ ಕಾರ್ಯದರ್ಶಿ ಅನರ್ಹಗೊಳಿಸುವಂತಿಲ್ಲ. ಚುನಾವಣಾ ಆಯೋಗದ ಸಮಾಲೋಚನೆಯೊಂದಿಗೆ ರಾಷ್ಟ್ರಪತಿಗಳು ಈ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಟಾಲಿವುಡ್ ನಟ ನರೇಶ್, ಪವಿತ್ರಾ ಲೋಕೇಶ್ ಮದುವೆ ರಿಯಲ್ ಅಲ್ಲ ರೀಲ್!

    ನಿನ್ನೆ (ಮಾ. 23) ಸೂರತ್​ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. ಇದರ ಬೆನ್ನಲ್ಲೇ ರಾಹುಲ್​ ಗಾಂಧಿ 30 ದಿನಗಳ ವರೆಗೆ ಜಾಮೀನು ಪಡೆದುಕೊಂಡಿದ್ದು, ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದಾರೆ. ಐಪಿಸಿ ಸೆಕ್ಷನ್ 504ರ ಅಡಿಯಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಲಾಗಿದ್ದು, ಈ ಸೆಕ್ಷನ್ ಅಡಿಯಲ್ಲಿ ಗರಿಷ್ಠ ಸಂಭವನೀಯ ಶಿಕ್ಷೆ ಎರಡು ವರ್ಷಗಳಾಗಿದೆ. ಇದೀಗ ಜಾಮೀನು ಪಡೆದಿರುವುದರಿಂದ ಸದ್ಯಕ್ಕೆ ರಾಹುಲ್​ ಅವರು ಜೈಲು ಶಿಕ್ಷೆಯಿಂದ ಪಾರಾಗಲಿದ್ದಾರೆ.

    ಏನಿದು ಪ್ರಕರಣ?
    2019ರ ಲೋಕಸಭೆ ಚುನಾವಣೆ ವೇಳೆ ಭಾಷಣ ಮಾಡ್ತಿದ್ದ ರಾಹುಲ್ ಗಾಂಧಿ, ಮೋದಿ ಎಂಬ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದರು.

    ಇದನ್ನೂ ಓದಿ: ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸರ ಕಾರ್ಯಾಚರಣೆ; ಅರ್ಧ ಕೋಟಿ ಮೌಲ್ಯದ ವಸ್ತುಗಳು ಜಪ್ತಿ

    ರಾಹುಲ್​ ಹೇಳಿಕೆಯಿಂದ ಸಿಟ್ಟಿಗೆದ್ದಿದ್ದ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ, ದೂರು ದಾಖಲು ಮಾಡಿದ್ದರು. 2019ರ ಏಪ್ರಿಲ್​​​ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್​​ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ನ್ಯಾಯಾಲಯ ರಾಹುಲ್​ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. (ಏಜೆನ್ಸೀಸ್​)

    ಮೋದಿ ಉಪನಾಮ ಪ್ರಕರಣ: ರಾಹುಲ್ ಗಾಂಧಿ ದೋಷಿ ಎಂದು ತೀರ್ಪು ನೀಡಿದ ಸೂರತ್ ನ್ಯಾಯಾಲಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts