More

    ಮಾನನಷ್ಟ ಪ್ರಕರಣ; ರಾಹುಲ್​ ಗಾಂಧಿಗೆ ಜಾಮೀನು, ಏಪ್ರಿಲ್​ 13ಕ್ಕೆ ವಿಚಾರಣೆ

    ಸೂರತ್​: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರಿಗೆ ಸೂರತ್​ ನ್ಯಾಯಾಲಯ 30 ದಿನಗಳ ಜಾಮೀನು ಮಂಜೂರು ಮಾಡಿದೆ.

    ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್​ ಗಾಂಧಿ ಅವರು ಸೂರತ್​ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಕಾಂಗ್ರೆಸ್​​ ನಾಯಕನಿಗೆ ಜಾಮೀನು ಮಂಜೂರು ಮಾಡಿದ್ದಾರೆ ಮತ್ತು ವಿಚಾರಣೆಯನ್ನು ಏಪ್ರಿಲ್​ 13ಕ್ಕೆ ಮುಂದೂಡಿದೆ.

    Rahul Gandhi (1)

    ಇದನ್ನೂ ಓದಿ: ಪ್ರಧಾನಿ ಮೋದಿ ಅವರ ಪದವಿ ದಾಖಲೆಗಳನ್ನು ಹೊಸ ಸಂಸತ್​ ಭವನದ ಎದುರು ಪ್ರದರ್ಶಿಸಿ: ಸಂಜಯ್​ ರಾವುತ್​

    2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮೋದಿ ಉಪನಾಮದ ಕುರಿತು ವ್ಯಂಗ್ಯವಾಡಿದ್ದರು. ಈ ಸಂಬಂಧ ಸೂರತ್​ ನ್ಯಾಯಾಲಯದಲ್ಲಿ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ ರಾಹುಲ್​ ಗಾಂಧಿ ವಿರುದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ದಾಖಲಿಸಿದ್ದರು.

    ವಿಚಾರಣೆ ನಡೆಸಿದ ನ್ಯಾಯಾಲಯವು ಮಾರ್ಚ್​ 23ರಂದು ರಾಹುಲ್​ ಗಾಂಧಿ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು ಮತ್ತು 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts