ವಯನಾಡ್​, ರಾಯ್ಬರೇಲಿಯಲ್ಲಿ ರಾಹುಲ್ ಗಾಂಧಿ ಮುನ್ನಡೆ

rahul
Published on

ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ಬರೇಲಿ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಮಂಗಳವಾರ(ಜೂ.4) ಬೆಳಗ್ಗೆ 8 ಗಂಟೆಗೆ ಆರಂಭವಾದ ಮತ ಎಣಿಕೆಯಲ್ಲಿ ಆರಂಭಿಕ ಟ್ರೆಂಡ್‌ಗಳ ಪ್ರಕಾರ ಮಧ್ಯಾಹ್ನ 11ಗಂಟೆಯವರೆಗೆ ರಾಹುಲ್ ಗಾಂಧಿ ವಯನಾಡಿನಲ್ಲಿ 98,628 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದರೆ, ರಾಯ್ಬರೇಲಿಯಲ್ಲಿ 50,589 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗದ ವೆಬ್‌ಸೈಟ್ ತೋರಿಸಿದೆ.

ವಯನಾಡಿನಲ್ಲಿ ರಾಹುಲ್ ವಿರುದ್ಧ ಬಿಜೆಪಿ ನಾಯಕ ಕೆ.ಸುರೇಂದ್ರನ್ ಮತ್ತು ಸಿಪಿಐ ಮುಖಂಡ ಅನ್ನೆ ರಾಜಾ ಸ್ಪರ್ಧಿಸಿದ್ದಾರೆ.

ಇನ್ನು ಉತ್ತರ ಪ್ರದೇಶದ ರಾಯಬರೇಲಿಯಲ್ಲಿ ರಾಹುಲ್ ವಿರುದ್ಧ ಬಹುಜನ ಸಮಾಜ ಪಕ್ಷದ ನಾಯಕ ಠಾಕೂರ್ ಪ್ರಸಾದ್ ಯಾದವ್ ಕಣದಲ್ಲಿದ್ದಾರೆ. ವಯನಾಡಿನ ಹಾಲಿ ಸಂಸದ ರಾಹುಲ್ ಗಾಂಧಿ 2019 ರ ಲೋಕಸಭಾ ಚುನಾವಣೆಯಲ್ಲಿ 4.31 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net