More

    ರಾಹುಲ್ ಗಾಂಧಿ ತೀರ್ಥಹಳ್ಳಿಯಲ್ಲಿ ಪ್ರಚಾರ

    ಶಿವಮೊಗ್ಗ: ರಾಹುಲ್ ಗಾಂಧಿ ತೀರ್ಥಹಳ್ಳಿಯಲ್ಲಿ ಮಿಂಚಿನ ಸಂಚಾರ ನಡೆಸಿ ಮಂಗಳವಾರ ಚುನಾವಣಾ ಕಣ ರಂಗೇರಿಸಿ, ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪರವಾಗಿ ಪ್ರಚಾರ ಸಭೆಯಲ್ಲಿ ಮಾತನಾಡಿದರು.

    ರಾಹುಲ್ ಗಾಂಧಿ ತೀರ್ಥಹಳ್ಳಿಯಲ್ಲಿ ರಾಜ್ಯ ಸರ್ಕಾರ ಭ್ರಷ್ಟಚಾರ ಎಸಗಿದೆ ಎಂದು ಭಾಷಣದುದ್ದಕ್ಕೂ ಗಂಭೀರ ಆರೋಪ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸರ್ಕಾರದ 40 ಪರ್ಸೆಂಟ್ ಕಮೀಷನ್ ಬಗ್ಗೆ ಮಾತನಾಡುತ್ತಿಲ್ಲ. ಬಿಜೆಪಿ ನಾಯಕರ ಬಗ್ಗೆಯೂ ತಮ್ಮ ಭಾಷಣದಲ್ಲಿ ಪ್ರಸ್ತಾಪ ಮಾಡುವುದಿಲ್ಲ.

    ರಾಹುಲ್ ಗಾಂಧಿ ತೀರ್ಥಹಳ್ಳಿಯಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿ, ಗೃಹ ಸಚಿವರು ಪಿಎಸ್​ಐ ನೇಮಕಾತಿ ಹಗರಣದಲ್ಲಿ ಭಾಗಿಯಾಗಿದ್ದರೂ ಅದರ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರದಂತಹ ಗಂಭೀರ ವಿಷಯಗಳ ಬಗ್ಗೆ ಮಾತನಾಡದ ಮೋದಿ, ಕೇವಲ ನಮ್ಮ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ಭಾಷಣ ಮಾಡುತ್ತಿದ್ದಾರೆ.

    ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ವಾಮಮಾರ್ಗದಲ್ಲಿ ಉರುಳಿಸಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಮತ್ತೊಮ್ಮೆ ಇಂತಹದ್ದೇ ಕುತಂತ್ರ ಮಾಡಲು ಹವಣಿಸುತ್ತಿದೆ ಎಂದು ದೂರಿದರು.

    ರಾಹುಲ್ ಗಾಂಧಿ ಪ್ರಚಾರ ಸಭೆಯಲ್ಲಿ ಚಿತ್ರನಟ ಶಿವರಾಜ್​ಕುಮಾರ್ ಭಾಗವಹಿಸಿ ಗಮನಸೆಳೆದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕಾರ್ಯದರ್ಶಿಗಳಾದ ಮಯೂರ್ ಜೈಕುಮಾರ್, ಸಿರಿವೆಳ್ಳ ಪ್ರಸಾದ್, ಕೆಪಿಸಿಸಿ ಹಿಂದುಳಿದ ವಿಭಾಗದ ಅಧ್ಯಕ್ಷ ಮಧು ಬಂಗಾರಪ್ಪ, ಸಹಕಾರ ವಿಭಾಗದ ಸಂಚಾಲಕ ಆರ್.ಎಂ.ಮಂಜುನಾಥ ಗೌಡ, ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ವೇದಿಕೆಯಲ್ಲಿದ್ದರು. ಅಭ್ಯರ್ಥಿ ಕಿಮ್ಮನೆ ರತ್ನಾಕರ್ ವೇದಿಕೆಯ ಮುಂಭಾಗ ಕುಳಿತು ರಾಹುಲ್ ಮಾತುಗಳನ್ನು ಕೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts