More

    ಕೃಷಿ ಕಾನೂನು ಹೋರಾಟ: ಪ್ರಿಯಾಂಕಾ ಗಾಂಧಿ ಬಂಧನ, ರಾಷ್ಟ್ರಪತಿಯವರನ್ನು ಭೇಟಿಯಾದ ರಾಹುಲ್ ಗಾಂಧಿ

    ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಪರಿಷ್ಕೃತ ಕಾನೂನುಗಳ ವಿರುದ್ಧ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರನ್ನು ಭೇಟಿಯಾದರೆ, ರಾಷ್ಟ್ರಪತಿ ಭವನಕ್ಕೆ ಪ್ರತಿಭಟನಾ ಮೆರವಣಿಗೆ ಮಾಡ ಹೊರಟ ಪ್ರಿಯಾಂಕಾ ಗಾಂಧಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಅಕ್ಬರ್​ ರೋಡ್​ನಲ್ಲಿರು ಕಾಂಗ್ರೆಸ್ ಕಚೇರಿಯಿಂದ ರಾಷ್ಟ್ರಪತಿ ಭವನಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸುವುದಕ್ಕಾಗಿ ಪ್ರಿಯಾಂಕಾ ಗಾಂಧಿ ಕಾರ್ಯಕರ್ತರೊಂದಿಗೆ ಬೀದಿಗೆ ಇಳಿದಿದ್ದರು. ಇನ್ನೊಂದೆಡೆ, ರಾಹುಲ್ ಗಾಂಧಿ ಮತ್ತು ತಂಡ 2 ಕೋಟಿ ರೈತರ ಸಹಿಯನ್ನು ಒಳಗೊಂಡ ಮನವಿಯನ್ನು ರಾಷ್ಟ್ರಪತಿಯವರಿಗೆ ಹಸ್ತಾಂತರಿಸಲು ರಾಷ್ಟ್ರಪತಿ ಭವನಕ್ಕೆ ತೆರಳಿದ್ದರು. ರಾಷ್ಟ್ರಪತಿ ಭವನದ ಸುತ್ತಲಿನ ಪ್ರದೇಶದಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದ ಕಾರಣ, ಅತ್ತ ಮೆರವಣಿಗೆ ಹೊರಟ ಪ್ರಿಯಾಂಕಾ ಗಾಂಧಿ ಮತ್ತು ಇತರರು ಬಂಧನಕ್ಕೆ ಒಳಗಾಗಿದ್ದಾರೆ.

    ಇದನ್ನೂ ಓದಿ: ಸೌದಿಯಿಂದ ಬಂದ ಭಾವಿಪತಿಗಾಗಿ ಮದುಮಗಳು ರೆಡಿಯಾಗಿ ಕುಳಿತರೆ ವರ ಹೀಗೆ ಮಾಡೋದಾ?

    ರಾಷ್ಟ್ರಪತಿ ಭವನಕ್ಕೆ ರಾಹುಲ್ ಗಾಂಧಿ ಅವರೊಂದಿಗೆ ರಾಜ್ಯಸಭೆಯ ವಿಪಕ್ಷ ನಾಯಕ ಗುಲಾಂ ನಬಿ ಆಜಾದ್​, ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಕೂಡ ತೆರಳಿದ್ದರು. ವಿವಾದಿತ ಕೃಷಿ ಕಾನೂನನ್ನು ಹಿಂಪಡೆಯಬೇಕು ಎಂದು ರಾಷ್ಟ್ರಪತಿಯವರಲ್ಲಿ ಮನವಿ ಮಾಡಿದ್ದೇವೆ ಎಂದು ರಾಹುಲ್ ಗಾಂಧಿ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ. (ಏಜೆನ್ಸೀಸ್)

    ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮ ಫೇಸ್​ಬುಕ್​ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..

    ಶಬರಿಮಲೆ ದೇವಸ್ಥಾನದ ವಿಚಾರ: ಹೈಕೋರ್ಟ್​ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತು ಕೇರಳ ಸರ್ಕಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts