

ನವದೆಹಲಿ: ಕಾಂಗ್ರೆಸ್ನ ನಾಯಕ ರಾಹುಲ್ ಗಾಂಧಿ, ಅಂಗಡಿಯೊಂದರಲ್ಲಿ ಮೆಕ್ಯಾನಿಕ್ಗಳೊಂದಿಗೆ ನೆಲದ ಮೇಲೆ ಕುಳಿತು ಬೈಕ್ ಅನ್ನು ಸರಿಪಡಿಸುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಕಾಂಗ್ರೆಸ್, ರಾಹುಲ್ ಅವರ ಚಿತ್ರಗಳನ್ನು ಹಂಚಿಕೊಂಡಿದ್ದು, ಈ ಕೈಗಳು ಭಾರತವನ್ನು ನಿರ್ಮಿಸುತ್ತವೆ ಎಂದು ಶೀರ್ಷಿಕೆ ನೀಡಿದ್ದಾರೆ. ಈ ಬಟ್ಟೆಗಳ ಮೇಲಿನ ಗ್ರೀಸ್ ನಮ್ಮ ಹೆಮ್ಮೆ ಮತ್ತು ಸ್ವಾಭಿಮಾನ. ಅವರನ್ನು ಹುರಿದುಂಬಿಸುವ ಕೆಲಸವನ್ನು ಒಬ್ಬ ಸಾರ್ವಜನಿಕ ನಾಯಕ ಮಾತ್ರ ಮಾಡಬಲ್ಲ ಎಂದು ಬರೆಯಲಾಗಿದೆ.
ರಾಹುಲ್ ಗಾಂಧಿ ಸ್ಥಳೀಯರನ್ನು ಭೇಟಿಯಾಗುತ್ತಿರುವುದು ಇದೇ ಮೊದಲಲ್ಲ. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಮೇ 23 ರಂದು ಟ್ರಕ್ನಲ್ಲಿ ಚಲಿಸಿ ಅವರ ಸಮಸ್ಯೆಗಳನ್ನು ಆಲಿಸಿದ್ದರು. ಅವರು ಈ ಹಿಂದೆ ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಜತೆ ಸ್ಕೂಟರ್ನಲ್ಲಿ ಕುಳಿತಿದ್ದರು. ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.