25.9 C
Bengaluru
Wednesday, January 22, 2020

ಕಾಂಗ್ರೆಸ್ ಸಾರಥ್ಯ ಮತ್ತೆ‌ ರಾಗಾ ಹೆಗಲಿಗೆ?: ಮಹತ್ವದ ಸುಳಿವು ನೀಡಿದ ಕೆ.ಸಿ.ವೇಣುಗೋಪಾಲ್​ ಹೇಳಿಕೆ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲನ್ನು ಅನುಭವಿಸಿದ ಬಳಿಕ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್​ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದ ರಾಹುಲ್​ ಗಾಂಧಿ ಮತ್ತೆ ಕಾಂಗ್ರೆಸ್​ ಸಾರಥ್ಯ ವಹಿಸಿಕೊಳ್ಳಲಿದ್ದಾರೆ ಎಂಬುದು ಕಾಂಗ್ರೆಸ್​ ಮೂಲಗಳಿಂದ ತಿಳಿದುಬಂದಿದೆ.

ಮುಂದಿನ ವರ್ಷ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುವ ವಿಧಾನಸಭಾ ಚುನಾವಣೆಯ ಬಳಿಕ ರಾಹುಲ್,​ ಕಾಂಗ್ರೆಸ್ ಅಧ್ಯಕ್ಷ ಪಟ್ಟವನ್ನು ಮರು ಅಲಂಕರಿಸಲಿದ್ದಾರೆ ಎನ್ನಲಾಗುತ್ತಿದೆ.​ ಈ ಒಂದು ಸುಳಿವನ್ನು ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್​ ನೀಡಿದ್ದು, ದೇಶವು ರಾಹುಲ್​ ನಾಯಕತ್ವವನ್ನು ಹೆಚ್ಚಾಗಿ ಬಯಸುತ್ತಿದೆ ಎಂದಿದ್ದಾರೆ.

ಸದ್ಯ ರಾಹುಲ್​ ಗಾಂಧಿ ಕೇರಳದ ವಯನಾಡು ಸಂಸದರಾಗಿದ್ದು, ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ರಾಹುಲ್​ಗೆ ವೇಣುಗೋಪಾಲ್​ ಸಾಥ್​ ನೀಡಿದ್ದಾರೆ. ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು ದೇಶವು ಸಂಕಷ್ಟದ ಸ್ಥಿತಿಯಲ್ಲಿ ಮುಂದುವರಿದಿದೆ. ಇಂತಹ ಸಂದರ್ಭದಲ್ಲಿ ಪಕ್ಷಕ್ಕೆ ರಾಹುಲ್​ ನಾಯಕತ್ವ ಬೇಕಾಗಿದೆ. ಕಾರ್ಯಕರ್ತರು ಕೂಡ ರಾಹುಲ್ ವಾಪಾಸಾತಿಗೆ ಧ್ವನಿಗೂಡಿಸಿದ್ದು, ರಾಹುಲ್​ ಇದನ್ನು ಪರಿಗಣಿಸಲಿದ್ದಾರೆ ಎಂದು ನಂಬಿದ್ದೇವೆ ಎಂದರು.

ಕಾಂಗ್ರೆಸ್​ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಅಧ್ಯಕ್ಷೆಯನ್ನಾಗಿ ಅಂಗೀಕರಿಸಲು ಮುಂದಿನ ಕೆಲ ತಿಂಗಳಲ್ಲಿ ಕಾಂಗ್ರೆಸ್​ ಸಭೆ ನಡೆಯಲಿದೆ. ಈ ವೇಳೆ ರಾಹುಲ್​ ಗಾಂಧಿ ಅವರನ್ನು ಮರಳಿ ಕರೆತರಲು ಯುವ ನಾಯಕರು ಒತ್ತಾಯ ಮಾಡಲು ಯೋಜನೆ ರೂಪಿಸಿದ್ದಾರೆ ಎಂದು ತಿಳಿಸಿದರು. ಈ ಮುಂಚೆಯೂ ರಾಹುಲ್​ ಗಾಂಧಿ ಮರಳಿ ಕಾಂಗ್ರೆಸ್​ ಅಧ್ಯಕ್ಷ ಗಾದಿಗೇರಲು ಸಾಕಷ್ಟು ಕೂಗು ಕೇಳಿಬಂದಿತ್ತು.

2017ರಲ್ಲಿ ರಾಹುಲ್​ ಅವಿರೋಧವಾಗಿ ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದರು. ರಾಹುಲ್​ ನಾಯಕತ್ವ ಅಡಿಯಲ್ಲೇ ಪಕ್ಷವು 2019ರ ಲೋಕಸಭಾ ಚುನಾವಣೆಯನ್ನು ಎದುರಿಸಿತ್ತು. ಆದರೂ ನಿರೀಕ್ಷಿತ ಗೆಲುವು ದಾಖಲಿಸಿದೇ ಹಿಂದಿಗಿಂತ ಹೀನಾಯವಾಗಿ ಪಕ್ಷವು ಹಿನ್ನಡೆ ಅನುಭವಿಸಿದ್ದರಿಂದ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ರಾಹುಲ್​ ರಾಜೀನಾಮೆ ನೀಡಿದ್ದರು. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...