23.9 C
Bangalore
Friday, December 6, 2019

ಜಮ್ಮು ಕಾಶ್ಮೀರದ ಪರಿಸ್ಥಿತಿ ಸರಿಯಾಗಿಲ್ಲ ಎಂದ ರಾಹುಲ್​ ಗಾಂಧಿ

Latest News

ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ರಾಜವೀರ ಮದಕರಿ ನಾಯಕ ಸಿನಿಮಾಕ್ಕೆ ಮುಹೂರ್ತ

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ಐತಿಹಾಸಿಕ ಸಿನಿಮಾ ರಾಜವೀರ ಮದಕರಿ ನಾಯಕ ಸಿನಿಮಾದ ಮುಹೂರ್ತ ಕೆಂಪೇಗೌಡ ನಗರ (ಗವಿಪುರಂ ಗುಟ್ಟಹಳ್ಳಿ)ಯಲ್ಲಿ ಶುಕ್ರವಾರ...

 ಕೆಎಸ್ಒಯುನಿಂದ ಐಬಿಪಿಎಸ್ ಪರೀಕ್ಷೆಗೆ ತರಬೇತಿ: ಹೆಸರು ನೋಂದಾಯಿಸಲು ಡಿ.10 ಕೊನೇ ದಿನ

ಬೆಂಗಳೂರು: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ನಡೆಸುವ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ನೇಮಕಾತಿ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ...

ವಿದರ್ಭ ನೀರಾವರಿ ಹಗರಣದಲ್ಲಿ ಅಜಿತ್ ಪವಾರ್​ಗೆ ಕ್ಲೀನ್ ಚಿಟ್​​ ನೀಡಿದ ಮಹಾರಾಷ್ಟ್ರ ಎಸಿಬಿ

ನಾಗಪುರ: ವಿದರ್ಭ ನೀರಾವರಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್​ ಪಕ್ಷ(ಎನ್​ಸಿಪಿ) ನಾಯಕ ಅಜಿತ್ ಪವಾರ್​​ಗೆ ಮಹಾರಾಷ್ಟ್ರ...

ಸಾಲ ಮರುಪಾವತಿ ಅವಧಿ ವಿಸ್ತರಣೆ : ಸಿಂಡಿಕೇಟ್ ಬ್ಯಾಂಕ್ ಗ್ರಾಹಕರಿಗೆ ಸೌಲಭ್ಯ

ಬೆಂಗಳೂರು: ಸಿಂಡಿಕೇಟ್ ಬ್ಯಾಂಕ್ ತನ್ನ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್​ಎಂಇ) ಸಾಲದ ವಿನ್ಯಾಸವನ್ನು ಪರಿಷ್ಕರಿಸಿದ್ದು, ಎಂಎಸ್​ಎಂಇ ಗ್ರಾಹಕರ ಸಾಲ ಮರುಪಾವತಿ...

ಗ್ವಾಟೆಮಾಲಾ ನಗರದಲ್ಲಿ ಟಿವಿಎಸ್ ಫ್ಲ್ಯಾಗ್​ಶಿಪ್ ಶೋರೂಂ: ಕ್ಯಾಡಿಸಾ ಸಂಸ್ಥೆ ಸಹಯೋಗದೊಂದಿಗೆ ನೂತನ ಮಳಿಗೆ

ಬೆಂಗಳೂರು: ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ತಯಾರಿಕೆಯಲ್ಲಿ ವಿಶ್ವದ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾದ ಟಿವಿಎಸ್ ಮೋಟಾರ್ ಕಂಪನಿ, ಕ್ಯಾಡಿಸಾ ಸಹಭಾಗಿತ್ವದಲ್ಲಿ ಮಧ್ಯ ಅಮೇರಿಕಾದ ಗ್ವಾಟೆಮಾಲಾ...

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಅಲ್ಲಿನ ಪರಿಸ್ಥಿತಿ ತಿಳಿಯಲು ಕಣಿವೆ ರಾಜ್ಯಕ್ಕೆ ತೆರಳಿದ್ದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ ನೇತೃತ್ವದ ನಿಯೋಗವನ್ನು ವಿಮಾನ ನಿಲ್ದಾಣದಿಂದ ವಾಪಸ್​ ಕಳುಹಿಸಲಾಗಿತ್ತು. ದೆಹಲಿಗೆ ಮರಳಿದ ಬಳಿಕ ಮಾತನಾಡಿರುವ ರಾಹುಲ್​ ಗಾಂಧಿ ಕಣಿವೆ ರಾಜ್ಯದಲ್ಲಿ ಎಲ್ಲವೂ ಸರಿಯಿಲ್ಲ ಎಂದು ತಿಳಿಸಿದ್ದಾರೆ.

ರಾಹುಲ್​ ಗಾಂಧಿ ನೇತೃತ್ವದಲ್ಲಿ ವಿಪಕ್ಷ ನಾಯಕರ ನಿಯೋಗ ಶ್ರೀನಗರಕ್ಕೆ ತೆರಳಿತ್ತು. ಅವರನ್ನು ವಿಮಾನ ನಿಲ್ದಾಣದಲ್ಲಿ ತಡೆದಿದ್ದ ಅಧಿಕಾರಿಗಳು ಅಲ್ಲಿಂದಲೇ ವಾಪಸ್​ ಕಳುಹಿಸಿದ್ದರು. ಸಂಜೆ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಿಯೋಗ ಕಣಿವೆ ರಾಜ್ಯದಲ್ಲಿ ತಮಗಾದ ಅನುಭವವನ್ನು ಹಂಚಿಕೊಂಡಿದ್ದಾರೆ.

ತಮ್ಮನ್ನು ವಾಪಸ್​ ಕಳುಹಿಸಿದ ಕುರಿತು ಮಾತನಾಡಿದ ರಾಹುಲ್​ ಗಾಂಧಿ ‘ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್​ ಮಲಿಕ್​ ರಾಜ್ಯಕ್ಕೆ ಭೇಟಿ ನೀಡುವಂತೆ ನನಗೆ ಆಹ್ವಾನಿಸಿದ್ದರು. ಅದನ್ನು ನಾನು ಒಪ್ಪಿಕೊಂಡಿದ್ದೆ. ಕಣಿವೆ ರಾಜ್ಯದ ಪರಿಸ್ಥಿತಿ ತಿಳಿದುಕೊಳ್ಳಲು ನನ್ನೊಂದಿಗೆ ವಿವಿಧ ಪಕ್ಷಗಳ ಹಿರಿಯ ನಾಯಕರನ್ನು ಕರೆದೊಯ್ದಿದ್ದೆ. ಆದರೆ ನಮ್ಮನ್ನು ಏರ್​ಪೋರ್ಟ್​ನಿಂದ ಹೊರಗೆ ಹೋಗಲು ಬಿಡಲಿಲ್ಲ. ನಮ್ಮೊಂದಿಗೆ ಬಂದಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ಕಣಿವೆ ರಾಜ್ಯದ ಪರಿಸ್ಥಿತಿ ಸರಿಯಾಗಿಲ್ಲ ಎಂಬುದಂತೂ ಸತ್ಯ ಎಂದು ತಿಳಿಸಿದ್ದಾರೆ.

ನಂತರ ಕಾಶ್ಮೀರದ ಪರಿಸ್ಥಿತಿಯ ಕುರಿತು ಮಾತನಾಡಿದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್​ ಹಿರಿಯ ನಾಯಕ ಗುಲಾಮ್​ ನಬಿ ಆಜಾದ್​, ನಮ್ಮನ್ನು ನಗರದ ಒಳಗೆ ಹೋಗಲು ಬಿಡಲಿಲ್ಲ. ಜಮ್ಮು ಮತ್ತು ಕಾಶ್ಮೀರದ ಸ್ಥಿತಿ ತೀರಾ ಹದಗೆಟ್ಟಿದೆ. ವಿಮಾನದಲ್ಲಿ ಸಹ ಪ್ರಯಾಣಿಕರೊಂದಿಗೆ ಮಾತನಾಡಿ ಅಲ್ಲಿನ ಪರಿಸ್ಥಿತಿ ಕುರಿತು ಅರಿತುಕೊಂಡೆ. ಅಲ್ಲಿನ ಸ್ಥಿತಿಯನ್ನು ಕೇಳಿದರೆ ಕಲ್ಲು ಹೃದಯದವರ ಕಣ್ಣಲ್ಲೂ ನೀರು ಬರುತ್ತದೆ. ಕಾಶ್ಮೀರ ಮತ್ತು ಕಾರ್ಗಿಲ್​ ಪ್ರದೇಶವನ್ನು ಹೊರಜಗತ್ತಿನಿಂದ ಬೇರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ತಮ್ಮನ್ನು ವಿಮಾನ ನಿಲ್ದಾಣದಿಂದ ವಾಪಸ್​ ಕಳುಹಿಸಿದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷಗಳ ನಾಯಕರು ಬಡಗಾಮ್​ ಜಿಲ್ಲಾ ಮ್ಯಾಜಿಸ್ಟ್ರೇಟ್​ಗೆ ಪತ್ರ ಬರೆದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಆಡಳಿತ ಮೂಲಭೂತ ಹಕ್ಕುಗಳನ್ನು ಕಿತ್ತುಕೊಂಡಿದೆ ಎಂದು ನಾಯಕರು ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ. (ಏಜೆನ್ಸೀಸ್​)

Stay connected

278,732FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...