More

    ಕಾಂಗ್ರೆಸ್​ ಆಡಳಿತವಿರುವ ರಾಜ್ಯಗಳಲ್ಲಿ ಜಾತಿ ಗಣತಿಗೆ ಕ್ರಮ: ರಾಹುಲ್ ಗಾಂಧಿ

    ನವದೆಹಲಿ: ಕಾಂಗ್ರೆಸ್​ ಆಡಳಿತವಿರುವ ರಾಜ್ಯಗಳಲ್ಲಿನ ಮುಖ್ಯಮಂತ್ರಿಗಳು ಜಾತಿ ಗಣತಿ ನಡೆಸಲು ನಿರ್ಧರಿಸಿದ್ದು, ಇದೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಹೇಳಿದ್ಧಾರೆ.

    ಪಕ್ಷದ ಕಚೇರಿಯಲ್ಲಿ ನಡೆದ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸಭೆ (CWC) ಬಳಿಕ ಸುದ್ದಿಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ರಾಹುಲ್, ಸಭೆಯಲ್ಲಿ ಜಾತಿ ಗಣತಿ ಕುರಿತಾಗಿ ಚರ್ಚಿಸಲಾಗಿದೆ. ಇದು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಮಾಡಲಿದೆ ಎಂದಿದ್ದಾರೆ.

    ಕಾಂಗ್ರೆಸ್​ ಕಾರ್ಯಕಾರಿ ಸಮಿತಿಯಲ್ಲಿ ಕೈಗೊಂಡ ನಿರ್ಣಯವು ಐತಿಹಾಸಿಕ ನಿರ್ಧಾರವಾಗಿದ್ದು, ನಮ್ಮ ಪಕ್ಷ ಆಡಳಿತವಿರುವ ರಾಜ್ಯಗಳಾದ ಕರ್ನಾಟಕ, , ರಾಜಸ್ಥಾನ, ಛತ್ತೀಸ್​ಗಢ ಹಾಗೂ ಹಿಮಾಚಲಪ್ರದೇಶದಲ್ಲಿ ಜಾತಿ ಗಣತಿ ನಡೆಸಲು ಅಲ್ಲಿನ ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ.

    ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ಗೋದಾಮು ದುರಂತ; ಸಿಐಡಿ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

    ದೇಶದ ಬಡ ಜನರ ವಿಮೋಚನೆಗಾಗಿ ಈ ನಿರ್ಧಾರವು ಅತ್ಯಂತ ಪ್ರಗತಿಪರ ಹೆಜ್ಜೆಯಾಗಿದೆ. ಈ ನಿರ್ಧಾರವು ಜಾತಿ ಅಥವಾ ಧರ್ಮ ಆಧರಿಸಿ ಕೈಗೊಂಡಿಲ್ಲ. ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದಿರುವವರಿಗೆ ಅನುಕೂಲವಾಗುವಂತೆ ಜಾತಿ ಗಣತಿ ನಡೆಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್​ ಪಕ್ಷದ ನಿರ್ಧಾರವನ್ನು ಇಂಡಿಯಾ ಒಕ್ಕೂಟ ಬೆಂಬಲಿಸುತ್ತದೆ. ಇಂಡಿಯಾ ಒಕ್ಕೂಟದಲ್ಲಿರುವ ಬಹುತೇಕ ಪಕ್ಷಗಳು ಜಾತಿ ಗಣತಿಯ ಪರಿಕಲ್ಪನೆಗೆ ಸಹಮತ ಸೂಚಿಸಿವೆ. ಕೆಲವು ಪಕ್ಷಗಳು ಇದರ ಬಗ್ಗೆ ಚಕಾರ ಎತ್ತಬಹುದು ಆದರೆ, ಕಾಂಗ್ರೆಸ್​ಗೆ ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದು CWC ಸಭೆ ಬಳಿಕ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಮಾಹಿತಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts