ಅಹಮದಾಬಾದ್: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಿಂದುತ್ವದ ಬಗ್ಗೆ ಹೇಳಿಕೆ ನೀಡಿದ ಬಳಿಕ ಗುಜರಾತ್ನಲ್ಲಿರುವ ಕಾಂಗ್ರೆಸ್ ಕಚೇರಿ ಮೇಲಿ ದಾಳಿ ನಡೆದಿದೆ. ಈ ದಾಳಿಗೆ ಸಂಬಂಧಿಸಿದಂತೆ ಬಿಜೆಪಿಯನ್ನು ಗುರಿಯಾಗಿಸಿ ರಾಹುಲ್ಗಾಂಧಿ ವ್ಯಂಗ್ಯವಾಡಿದ್ದಾರೆ. ಗುಜರಾತ್ ಕಾಂಗ್ರೆಸ್ ಕಚೇರಿಯ ಮೇಲಿನ ಹೇಡಿತನ ಮತ್ತು ಹಿಂಸಾತ್ಮಕ ದಾಳಿಯು ಬಿಜೆಪಿ ಮತ್ತು ಸಂಘ ಪರಿವಾರದ ಬಗ್ಗೆ ನನ್ನ ಅಭಿಪ್ರಾಯವನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ರಾಹುಲ್ ಗಾಂಧಿ ಅವರು ಸಾಮಾಜಿಕ ಜಾಲತಾಣದ ತಮ್ಮ ಎಕ್ಸ್ ಖಾತೆಯಲ್ಲಿ ಮಾಡಿರುವ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಇದನ್ನು ಓದಿ: ಪ್ರಚಾರಕಲ್ಲ.. ವಿಶ್ವಾಸದ ರಾಜಕಾರಣಕ್ಕೆ ದೇಶದ ಜನರ ಆದ್ಯತೆ; ಪ್ರಧಾನಿ ಮೋದಿ
ಹಿಂಸಾಚಾರ ಮತ್ತು ದ್ವೇಷವನ್ನು ಹರಡುವ ಬಿಜೆಪಿಯವರಿಗೆ ಹಿಂದೂ ಧರ್ಮದ ಮೂಲ ತತ್ವಗಳು ಅರ್ಥವಾಗುತ್ತಿಲ್ಲ. ಗುಜರಾತಿನ ಜನರು ಅವರ ಸುಳ್ಳನ್ನು ಸ್ಪಷ್ಟವಾಗಿ ನೋಡುತ್ತಾರೆ ಮತ್ತು ಬಿಜೆಪಿ ಸರ್ಕಾರಕ್ಕೆ ನಿರ್ಣಾಯಕ ಪಾಠ ಕಲಿಸುತ್ತಾರೆ. ನಾನು ಮತ್ತೊಮ್ಮೆ ಹೇಳುತ್ತಿದ್ದೇನೆ ಗುಜರಾತ್‌ನಲ್ಲಿ I.N.D.I.A ಬಣ ಗೆಲ್ಲಲಿದೆ ಎಂದು ಹೇಳಿದ್ದಾರೆ.
ಗುಜರಾತ್‌ನ ಕಾಂಗ್ರೆಸ್ ಕಚೇರಿ ಮೇಲೆ ಆರ್ಎಸ್ಎಸ್ ಮತ್ತು ಬಿಜೆಪಿ ಜನರು ಹಿಂಸಾತ್ಮಕ ದಾಳಿ ನಡೆಸಿದ್ದಾರೆ. ಬಿಜೆಪಿಯವರು ಹಿಂಸಾಚಾರ ಮತ್ತು ದ್ವೇಷವನ್ನು ಹರಡುತ್ತಾರೆ ಎಂದು ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹೇಳಿದ ಬಳಿಕ ಈ ಹೇಡಿತನದ ದಾಳಿ ನಡೆಸಿರುವುದರಿಂದ ಅವರ ಮಾತು ನಿಜವೆಂದು ಸಾಬೀತಾಗಿದೆ ಎಂದು ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.
ಮಂಗಳವಾರ (ಜುಲೈ 2) ಸಂಜೆ ಕಾಂಗ್ರೆಸ್ ಕಚೇರಿಯ ಹೊರಗೆ, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಲ್ಲಿಗೆ ಆಗಮಿಸಿದ್ದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರ ನಡುವೆ ನಡೆದ ಮಾತಿನ ಚಕಮಕಿ ಕಲ್ಲು ತೂರಾಟಕ್ಕೆ ತಿರುಗಿದೆ. ಪೊಲೀಸರ ಸಮ್ಮುಖದಲ್ಲಿಯೇ ಕಲ್ಲು ತೂರಾಟ ನಡೆದಾಗ ಕಾಂಗ್ರೆಸ್ ಮುಖಂಡರು ಅಹಮದಾಬಾದ್ ಪೊಲೀಸ್ ಕಮಿಷನರ್ ಜಿಎಸ್ ಮಲಿಕ್ ಅವರನ್ನು ಭೇಟಿ ಮಾಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇದೀಗ ಈ ವಿಚಾರವಾಗಿ ರಾಹುಲ್ ಗಾಂಧಿ ಬಿಜೆಪಿಯನ್ನು ವಾಗ್ದಾಳಿ ನಡೆಸಿದ್ದಾರೆ.
ಸಂಸತ್ತಿನಲ್ಲಿ ರಾಹುಲ್ ಗಾಂಧಿ ತಮ್ಮನ್ನು ತಾವು ಹಿಂದೂಗಳು ಎಂದು ಕರೆದುಕೊಳ್ಳುವವರು ಹಿಂಸಾಚಾರದಲ್ಲಿ ತೊಡಗಿರುತ್ತಾರೆ ಎಂದು ಹೇಳಿದರು. ರಾಹುಲ್ ಗಾಂಧಿ ಅವರ ಭಾಷಣವನ್ನು ಅಡ್ಡಿಪಡಿಸಿ ಇದು ಗಂಭೀರ ವಿಷಯ ಎಂದು ಪ್ರಧಾನಿ ಮೋದಿ ಆಕ್ಷೇಪ ವ್ಯಕ್ತಪಡಿಸಿದ್ದರು. (ಏಜೆನ್ಸೀಸ್)
ಹತ್ರಾಸ್ ಸತ್ಸಂಗ ಕಾಲ್ತುಳಿತ; ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಸಿಎಂ ಯೋಗಿ ಆದಿತ್ಯನಾಥ್