More

    ಉದ್ಯೋಗಾಕಾಂಕ್ಷಿ ಆತ್ಮಹತ್ಯೆ ಪ್ರಕರಣ; ತೆಲಂಗಾಣದಲ್ಲಿ ಯುವಕರ ಕನಸು, ಆಕಾಂಕ್ಷೆಗಳ ಹತ್ಯೆ ಮಾಡಲಾಗಿದೆ: ರಾಹುಲ್ ಗಾಂಧಿ

    ನವದೆಹಲಿ: ತೆಲಂಗಾಣದಲ್ಲಿ ಮುಖ್ಯಮಂತ್ರಿ ಕೆಸಿಆರ್​ ನೇತೃತ್ವದ ಭಾರತ ರಾಷ್ಟರ ಸಮಿತ ಪಕ್ಷವು ಯುವಜನತೆಯ ಕನಸಿನೊಂದಿಗೆ ಆಡಿಕೊಳ್ಳುತ್ತಿದ್ದು, ಅವರ ಆಶೋತ್ತರಗಳನ್ನು ಕೊಂದಿದೆ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ಧಾರೆ.

    ತೆಲಂಗಾಣ ರಾಜ್ಯ ಲೋಕಸೇವಾ ಆಯೋಗ (TSPSC) ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 23 ವರ್ಷದ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಕೆಸಿಆರ್​ ನೇತೃತ್ವದ ಬಿಆರ್​ಎಸ್​ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಕಳೆದ 10 ವರ್ಷಗಳಲ್ಲಿ ಬಿಜೆಪಿ ಸಂಬಂಧ ಸಮಿತಿಯಾದ ಬಿಆರ್​ಎಸ್​ ಹಾಗೂ ಬಿಜೆಪಿಯ ಅಸಮರ್ಥತೆಯಿಂದಾಗಿ ರಾಜ್ಯವನ್ನು ಹಾಳು ಮಾಡಿದೆ. ತೆಲಂಗಾಣದಲ್ಲಿ ನಾವು ಸರ್ಕಾರ ರಚಿಸಿದರೆ ಉದ್ಯೋಗ ಕ್ಯಾಲೆಂಡರ್​ ಬಿಡುಗಡೆ ಮಾಡುತ್ತೇವೆ. 1 ತಿಂಗಳಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ಟಿಎಸ್‌ಪಿಎಸ್‌ಸಿ ಮರುಸಂಘಟನೆ ಮತ್ತು ಒಂದು ವರ್ಷದೊಳಗೆ ಖಾಲಿ ಇರುವ 2 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. ಇದು ಕಾಂಗ್ರೆಸ್​ನ ಗ್ಯಾರಂಟಿ ಎಂದಿದ್ದಾರೆ.

    ಇದನ್ನೂ ಓದಿ: ಬಾಯ್.. ಬಾಯ್​ ಇಮಾಮ್​ ಉಲ್ ಹಕ್, ಇಲ್ಲಿಗೆ ಬಂದಿದ್ದಕ್ಕೆ ಧನ್ಯವಾದ ಎಂದ ಹಾರ್ದಿಕ್ ಪಾಂಡ್ಯ; ವಿಡಿಯೋ ವೈರಲ್

    ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು, ಆಡಳಿತರೂಢ ಬಿಆರ್​ಎಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲೋಕಸೇವಾ ಆಯೋಗದ ಪರೀಕ್ಷೆಯನ್ನು ಪದೇ ಪದೇ ಮುಂದೂಡಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದು ಆಘಾತವಾಗಿದೆ.

    ಬಿಆರ್​ಎಸ್​ ಸರ್ಕಾರದ ಹತಾಶ ಮನೋಭಾವದಿಂದಾಗಿ ಯುವಜನತೆಯ ಬಾಳು ಕತ್ತಲೆಯಲ್ಲಿ ಕಳೆಯುವಂತೆ ಮಾಡಿದೆ. ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಯುವಕರು ಭ್ರಷ್ಟ, ಅಸಮರ್ಥ ಬಿಆರ್​ಎಸ್​ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

    ವರ್ಷಾಂತ್ಯದಲ್ಲಿ ತೆಲಂಗಾಣ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ನವೆಂಬರ್ 30ರಂದು ಮತದಾನ ನಡೆಯಲಿದೆ. ಡಿಸೆಂಬರ್​ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts