ನವದೆಹಲಿ: ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮನನ್ನು ಪ್ರತಿಷ್ಠಾಪಿಸಿದ ದಿನದಂದು ಭಾರತಕ್ಕೆ ‘ನಿಜವಾದ ಸ್ವಾತಂತ್ರ್ಯ’ ಸಿಕ್ಕಿತು ಎಂದು ಹೇಳಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಬುಧವಾರ(ಜನವರಿ 15) ಟೀಕಿಸಿದ್ದಾರೆ. ಮೋಹನ್ ಭಾಗವತ್ ಅವರ ಈ ಹೇಳಿಕೆಯನ್ನು ರಾಹುಲ್ ಗಾಂಧಿ ದೇಶದ್ರೋಹದಂತಿದೆ ಎಂದು ಹೇಳಿದ್ದಾರೆ.
ಇದನ್ನು ಓದಿ: ಭಾರತದ ಸಂಸತ್ತಿನಲ್ಲಿ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕು; ನಿಶಿಕಾಂತ್ ದುಬೆ ಹೀಗೆಳಿದ್ದೇಕೆ? |Mark Zuckerberg
ನವದೆಹಲಿಯಲ್ಲಿ ಕಾಂಗ್ರೆಸ್‌ನ ನೂತನ ಕೇಂದ್ರ ಕಚೇರಿ ಇಂದಿರಾ ಭವನವನ್ನು ಉದ್ಘಾಟಿಸಿ ನಂತರ ಮಾತನಾಡಿದ ಅವರು, ಮೋಹನ್ ಭಾಗವತ್ ಅವರು ಸಂವಿಧಾನ ನಮ್ಮ ಸ್ವಾತಂತ್ರ್ಯದ ಸಂಕೇತವಲ್ಲ ಎಂದು ಪರೋಕ್ಷವಾಗಿ ಟೀಕಿಸಿದ್ದಾರೆ. ಪ್ರತಿ ಎರಡು-ಮೂರು ದಿನಗಳಿಗೊಮ್ಮೆ ಮೋಹನ್ ಭಾಗವತ್ ಅವರು ಸ್ವಾತಂತ್ರ್ಯ ಚಳುವಳಿ ಮತ್ತು ಸಂವಿಧಾನದ ಬಗ್ಗೆ ತಮ್ಮ ಅಭಿಪ್ರಾಯವನ್ನು ರಾಷ್ಟ್ರಕ್ಕೆ ಹೇಳುವ ಧೈರ್ಯವನ್ನು ಹೊಂದಿದ್ದಾರೆ. ಸಂವಿಧಾನ ಅಸಿಂಧು, ಬ್ರಿಟಿಷರ ವಿರುದ್ಧದ ಹೋರಾಟ ಅಸಿಂಧು ಎಂದು ಹೇಳುತ್ತಿರುವ ಅವರು ನಿನ್ನೆ ಹೇಳಿದ್ದು ದೇಶದ್ರೋಹ ಎಂದು ವಾಗ್ದಾಳಿ ನಡೆಸಿದರು.
Mohan Bhagwat’s audacious comment that India didn’t gain true independence in 1947 is an insult to our freedom fighters, every single Indian citizen and an attack on our Constitution. pic.twitter.com/6sMhdxn3xA
— Rahul Gandhi (@RahulGandhi) January 15, 2025
ಮೋಹನ್ ಭಾಗವತ್ ಅವರು ಭಾರತದಲ್ಲಿ ಇದನ್ನು ಸಾರ್ವಜನಿಕವಾಗಿ ಹೇಳುವ ಧೈರ್ಯ ಹೊಂದಿದ್ದಾರೆ. ಬೇರೆ ಯಾವುದೇ ದೇಶದಲ್ಲಿ ಈ ರೀತಿ ಹೇಳಿದ್ದರೆ ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗುತ್ತಿತ್ತು. 1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿರಲಿಲ್ಲ ಎಂದು ಹೇಳುವುದು ಪ್ರತಿಯೊಬ್ಬ ಭಾರತೀಯನಿಗೆ ಮಾಡಿದ ಅವಮಾನ. ನಾವು ಈ ಅಸಂಬದ್ಧತೆಯನ್ನು ಕೇಳುವುದನ್ನು ನಿಲ್ಲಿಸುವ ಸಮಯ ಬಂದಿದೆ. ಏಕೆಂದರೆ ಈ ಜನರು ತಾವು ಕಿಕ್ಕಿರಿದು ಕೂಗುವುದನ್ನು ಮುಂದುವರಿಸಬಹುದು ಎಂದು ಭಾವಿಸುತ್ತಾರೆ ಎಂದಿದ್ದಾರೆ.(ಏಜೆನ್ಸೀಸ್)