ಪುಣೆ: ಹಿಂದೂ ನಾಯಕ ವಿನಾಯಕ ದಾಮೋದರ್ ಸಾವರ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ ಸಂಬಂಧ ಪುಣೆಯ ವಿಶೇಷ ನ್ಯಾಯಾಲಯ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ.
ವೀರ್ ಸಾವರ್ಕರ್ ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಕಳೆದ ವರ್ಷ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಅಕ್ಟೋಬರ್ 23ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ರಾಹುಲ್ ಗಾಂಧಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಇದನ್ನೂ ಓದಿ: Bengal | ಟ್ಯೂಷನ್ಗೆ ತೆರಳಿದ್ದ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ! ಟಿಎಂಸಿ ವಿರುದ್ಧ ಬಿಜೆಪಿ ಅಕ್ರೋಶ
ವೀರ್ ಸಾವರ್ಕರ್ ಅವರು ತಮ್ಮ ಸ್ನೇಹಿತರೊಂದಿಗೆ ಮುಸ್ಲಿಂ ವ್ಯಕ್ತಿಯನ್ನು ಥಳಿಸಿರುವ ಬಗ್ಗೆ ಪುಸ್ತಕದಲ್ಲಿ ಬರೆದಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ಸಾವರ್ಕರ್ ಅವರು “ಹಿಂಸಾಚಾರವನ್ನು ನಡೆಸಲು ಸಂತೋಷವಾಗಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದರು.
ಸಾವರ್ಕರ್ ಅವರನ್ನು ಹಲವಾರು ವರ್ಷಗಳಿಂದ ರಾಹುಲ್ ಗಾಂಧಿ ಪದೇ ಪದೇ ಮಾನಹಾನಿ ಮತ್ತು ನಿಂದನೆ ಮಾಡುತ್ತಿದ್ದಾರೆ ಎಂದು ಸತ್ಯಕಿ ಸಾವರ್ಕರ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. “ಅಂತಹ ಒಂದು ಸಂದರ್ಭದಲ್ಲಿ, ಮಾರ್ಚ್ 5, 2023 ರಂದು, ರಾಹುಲ್ ಗಾಂಧಿ ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಸಾಗರೋತ್ತರ ಕಾಂಗ್ರೆಸ್‌ನ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ, ಅವರು ಉದ್ದೇಶಪೂರ್ವಕವಾಗಿ ಸಾವರ್ಕರ್ ವಿರುದ್ಧ ಆರೋಪಗಳನ್ನು ಮಾಡಿದರು. ಅದು ಸುಳ್ಳು ಎಂದು ತಿಳಿದಿದ್ದರು ಸಾವರ್ಕರ್ ಅವರ ಪ್ರತಿಷ್ಠೆಗೆ ಧಕ್ಕೆ ತರಲು ಅವರು ಹೀಗೆ ಮಾಡಿದ್ದಾರೆ ಎಂದು” ದೂರಿನಲ್ಲಿ ಸತ್ಯಕಿ ಸಾವರ್ಕರ್ ಹೇಳಿದ್ದಾರೆ.
ಈ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ (ಎಫ್‌ಎಂಎಫ್‌ಸಿ) ನ್ಯಾಯಾಲಯದಿಂದ ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು.
ಜಂಟಿ ಸಿವಿಲ್ ನ್ಯಾಯಾಧೀಶ ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಪ್ರಥಮ ದರ್ಜೆ) ಅಮೋಲ್ ಶಿಂಧೆ ನೇತೃತ್ವದ ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯವು ಈ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ ೫೦೦ (ಮಾನಹಾನಿ) ಅಡಿಯಲ್ಲಿ ಶಿಕ್ಷಾರ್ಹ ಆರೋಪಕ್ಕೆ ಉತ್ತರಿಸಲು ರಾಹುಲ್ ಗಾಂಧಿ ಅವರ ಹಾಜರಾತಿ ಅಗತ್ಯ ಎಂದು ಸಮನ್ಸ್ ಹೊರಡಿಸಿದೆ ಎಂದು ಸತ್ಯಕಿ ಸಾವರ್ಕರ್ ಅವರನ್ನು ಪ್ರತಿನಿಧಿಸುವ ವಕೀಲ ಸಂಗ್ರಾಮ್ ಕೊಲ್ಹಟ್ಕರ್ ತಿಳಿಸಿದ್ದಾರೆ.
Savarkar Row: ರಾಜಕೀಯ ವಾಕ್ಸಮರದಲ್ಲಿ ನನ್ನ ಹೆಸರು ತರಬೇಡಿ: ಬಿಜೆಪಿ ವಿರುದ್ದ ಸಚಿವ ದಿನೇಶ್ ಪತ್ನಿ ದೂರು