

ಲಖನೌ: 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ, ವಯನಾಡು ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಉತ್ತರಪ್ರದೇಶ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಅಜಯ್ ಕುಮಾರ್ ರೈ ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರಿಗೆ ವಾರಣಾಸಿಯಿಂದ ಸ್ಪರ್ಧಿಸುವಂತೆ ಮನವಿ ಮಾಡಲಾಗಿದೆ. ಅವರು ಉತ್ತರಪ್ರದೇಶದ ಯಾವ ಕ್ಷೇತದಿಂದ ಸ್ಪರ್ಧಿಸಿದರು ನಾವು ಅವರನ್ನು ಗೆಲ್ಲಿಕೊಂಡು ಬರುತ್ತೇವೆ ಎಂದಿದ್ದಾರೆ.
ಇತ್ತೀಚಿಗೆ ಶಿವಸೇನೆ ನಾಯಕ(ಉದ್ಧವ್ ಠಾಕ್ರೆ ಬಣ), ರಾಜ್ಯಸಭೆ ಸದಸ್ಯ ಸಂಜಯ್ ರಾವುತ್ ಪ್ರಿಯಾಂಕ ಗಾಂಧಿ ವಾರಣಾಸಿಯಿಂದ ಸ್ಪರ್ಧಿಸಿದರೆ ಪ್ರಧಾನಿ ಮೋದಿ ಸೋಲುವುದು ಗ್ಯಾರಂಠಿ ಎಂದು ಭವಿಷ್ಯ ನುಡಿದಿದ್ದರು. ಇದರ ಬೆನ್ನಲ್ಲೇ ರಾಹುಲ್-ಪ್ರಿಯಾಂಕ ಉತ್ತರಪ್ರದೇಶದಿಂ ಸ್ಪರ್ಧೆ ಹೇಳಿಕೆ ಹೊರಬಿದ್ದಿದ್ದು, ರಾಜಕೀಯ ಪಡಸಾಲೆಯಲ್ಲಿ ಹೊಸ ಚರ್ಚೆಯೊಂದನ್ನು ಹುಟ್ಟುಹಾಕಿದೆ,
2019ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕಾಂಗ್ರೆಸ್ನ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ ರಾಹುಲ್ ಗಾಂಧಿ ವೊಇರುದ್ಧ 50 ಸಾವಿರ ಮತಗಳ ಅಂತರದಲ್ಲಿ ಜಯಿಸಿದ್ದರು.