ಕಣಿವೆಯಲ್ಲಿನ ಜನಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ… ಇಲ್ಲಿಗೆ ಬರಬೇಡಿ ಎಂದರೂ ಹೊರಟಿರುವ ರಾಹುಲ್​ ಗಾಂಧಿ

Latest News

ಶಾಸಕ ತನ್ವೀರ್​ ಸೇಠ್​ಗೆ ಭದ್ರತೆ ಹೆಚ್ಚಳ ಮಾಡಿದ ಸರ್ಕಾರ: 24 ತಾಸು 3 ಪಾಳಿಗಳಲ್ಲಿ ಗನ್​ಮ್ಯಾನ್​ ಭದ್ರತೆ

ಮೈಸೂರು: ತೀವ್ರ ಹಲ್ಲೆ ಹಿನ್ನೆಲೆಯಲ್ಲಿ ಶಾಸಕ ತನ್ವೀರ್​ ಸೇಠ್​ಗೆ ಒದಗಿಸಿದ್ದ ಭದ್ರತೆಯನ್ನು ಮೂರುಪಟ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ದಿನದ 24 ತಾಸು...

ಸಿನಿಮಾದಂತೆ ರಾಜಕೀಯದಲ್ಲೂ ಮೋಡಿ ಮಾಡಲು ರಜಿನಿ-ಕಮಲ್​ ಸಜ್ಜು: ತ.ನಾಡು ಪಾಲಿಟಿಕ್ಸ್​ ಬಗ್ಗೆ ಮಹತ್ತರ ಸುಳಿವು ನೀಡಿದ ನಟದ್ವಯರು!

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಭಾರಿ ಬದಲಾವಣೆಯಾಗುವ ಮುನ್ಸೂಚನೆ ಕಾಣುತ್ತಿದೆ. ಅದಕ್ಕೆ ಕಾರಣ ನಟನೆಯಿಂದ ರಾಜಕೀಯಕ್ಕೂ ಹೊರಳಿರುವ ರಜನಿಕಾಂತ್​ ಮತ್ತು ಕಮಲ್​ ಹಾಸನ್​ ಎಂಬುದೇ...

ಕೆಪಿಎಲ್​ ಮ್ಯಾಚ್​ ಫಿಕ್ಸಿಂಗ್ ಹಗರಣ: ಇಂದು 7 ತಂಡಗಳ ಮಾಲೀಕರ ವಿಚಾರಣೆ ನಡೆಸಲಿರುವ ಸಿಸಿಬಿ

ಬೆಂಗಳೂರು: ಕರ್ನಾಟಕ ಪ್ರಿಮೀಯರ್​ ಲೀಗ್​ ಕ್ರಿಕೆಟ್​ ಮ್ಯಾಚ್​ ಫಿಕ್ಸಿಂಗ್​ ಹಗರಣದ ವಿಚಾರಣೆಗೆ 7 ತಂಡಗಳ ಮಾಲೀಕರು ಇಂದು ಹಾಜರಾಗಲಿದ್ದಾರೆ. ಕೆಪಿಎಲ್​ನ 7 ತಂಡಗಳ ಮಾಲೀಕರು...

ವಿವಸ್ತ್ರಗೊಳಿಸಿ ಕ್ರಿಶ್ಚಿಯನ್​ ದಂಪತಿ ಮೇಲೆ ದೌರ್ಜನ್ಯ: ವೈರಲ್​ ಫೋಟೋ ಹಿಂದಿನ ಅಸಲಿಯತ್ತು ಫ್ಯಾಕ್ಟ್​ಚೆಕ್​ನಲ್ಲಿ ಬಹಿರಂಗ!

ನವದೆಹಲಿ: ಸಾರ್ವಜನಿಕ ಸ್ಥಳವೊಂದರಲ್ಲಿ ದಂಪತಿಯು ಮಗುವನ್ನು ಹಿಡಿದುಕೊಂಡು ಬೆತ್ತಲೆಯಾಗಿ ನಿಂತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಕೆಲ ದಿನಗಳಿಂದ ವೈರಲ್​ ಆಗಿದೆ. ಇದರ ಬಗ್ಗೆ...

ಉಪ ಚುನಾವಣೆ ರಣತಂತ್ರ ರೂಪಿಸಲು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿಂದು ಬಿಜೆಪಿ ಮಹತ್ವದ ಸಭೆ

ಬೆಂಗಳೂರು: ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಲು ಅನುಸರಿಸಬೇಕಾದ ತಂತ್ರಗಳ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರದಲ್ಲಿ ಕಾಶ್ಮೀರ ಕಣಿವೆಯಲ್ಲಿನ ಜನಜೀವನ ಹಂತ ಹಂತವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಈ ಹಂತದಲ್ಲಿ ಇಲ್ಲಿಗೆ ಬಂದು ಶಾಂತಿ ಕದಡಬೇಡಿ ಎಂದು ಕಾಂಗ್ರೆಸ್​ನ ರಾಹುಲ್​ ಗಾಂಧಿ ನೇತೃತ್ವದ ಪ್ರತಿಪಕ್ಷಗಳ ನಿಯೋಗಕ್ಕೆ ಕಾಶ್ಮೀರದ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಇದರ ಹೊರತಾಗಿಯೂ ಅಲ್ಲಿಗೆ ಭೇಟಿ ನೀಡಿಯೇ ಸಿದ್ಧ ಎಂದು ಹೇಳಿಕೊಂಡು ರಾಹುಲ್​ ಗಾಂಧಿ ಹಾಗೂ ಮತ್ತಿತರ ಪ್ರತಿಪಕ್ಷಗಳ ನಾಯಕರು ಕಣಿವೆಗೆ ಹೊರಟು ನಿಂತಿದ್ದಾರೆ.

ರಾಹುಲ್​ ಗಾಂಧಿ ಅಲ್ಲದೆ ಕಾಂಗ್ರೆಸ್​ ಮುಖಂಡರಾದ ಗುಲಾಂ ನಬಿ ಆಜಾದ್​ ಹಾಗೂ ಆನಂದ್​ ಶರ್ಮ ನೇತೃತ್ವದಲ್ಲಿ ಸಿಪಿಎಂ, ಸಿಪಿಐ, ಆರ್​ಜೆಡಿ, ಎನ್​ಸಿಪಿ, ಟಿಎಂಸಿ ಮತ್ತು ಡಿಎಂಕೆ ಪ್ರತಿನಿಧಿಗಳು ಕಾಶ್ಮೀರ ಕಣಿವೆಗೆ ಭೇಟಿ ನೀಡಿ, ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರದಲ್ಲಿನ ಪರಿಸ್ಥಿತಿ ಕುರಿತು ಸ್ಥಳೀಯರಿಂದ ನೇರವಾಗಿ ಮಾಹಿತಿ ಪಡೆದುಕೊಳ್ಳಲು ಉದ್ದೇಶಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ಕ್ರಮವನ್ನು ರಾಜಕೀಯಕರಣಗೊಳಿಸಲು ಅವಕಾಶ ನೀಡಬಾರದೆಂದು ಕೇಂದ್ರ ಸರ್ಕಾರ ಇದುವರೆಗೂ ಕಾಶ್ಮೀರ ಕಣಿವೆಗೆ ಭೇಟಿ ನೀಡಲು ಯಾವೊಬ್ಬ ರಾಜಕೀಯ ನಾಯಕರಿಗೂ ಅವಕಾಶ ಮಾಡಿಕೊಟ್ಟಿಲ್ಲ. ಕಾಶ್ಮೀರದ ಪ್ರಾದೇಶಿಕ ಪಕ್ಷಗಳ ನಾಯಕರಾದ ಹಾಗೂ ಮಾಜಿ ಸಿಎಂಗಳಾದ ಫಾರೂಕ್​ ಅಬ್ದುಲ್ಲಾ, ಓಮರ್​ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನದಲ್ಲಿರಿಸಿದೆ.
ಕಣಿವೆಯಲ್ಲಿ ಯಾವುದೇ ಬಗೆಯ ಪ್ರತಿಭಟನೆ ಅಥವಾ ಹಿಂಸಾಚಾರ ಸಂಭವಿಸದಂತೆ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ನಿರ್ಬಂಧಗಳನ್ನು ವಿಧಿಸಿದೆ. ಮೊಬೈಲ್​ಫೋನ್​ ಸಂಪರ್ಕ, ಇಂಟರ್​ನೆಟ್​ ಸಂಪರ್ಕ ಮತ್ತು ದೂರವಾಣಿ ಸಂಪರ್ಕಗಳನ್ನು ಕಡಿತಗೊಳಿಸಿದೆ. ಆದಾಗ್ಯೂ ಶುಕ್ರವಾರ ಮಾತ್ರ ಕೆಲ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿತ್ತು. ಮಸೀದಿಗಳಿಗೆ ತೆರಳಿದ ಜನರು ಶುಕ್ರವಾರದ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ ಎನ್ನಲಾಗಿದೆ. (ಏಜೆನ್ಸೀಸ್​)

- Advertisement -

Stay connected

278,614FansLike
572FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ಹೆಬ್ಬಾವು-ಚಿರತೆ ನಡುವಿನ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...